ಮೋದಿ ಸರ್ಕಾರದ ಜೊತೆ ಕುಮಾರಸ್ವಾಮಿ: ಹೊಸ ಪಕ್ಷ ಸ್ಥಾಪನೆಗೆ ಕೇರಳ ಜೆಡಿಎಸ್ ಸಜ್ಜು

Date:

Advertisements

ಜೆಡಿಎಸ್ ರಾಷ್ಟ್ರೀಯ ನಾಯಕ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ ಇಕ್ಕಟ್ಟಿನಲ್ಲಿ ಸಿಲುಕಿರುವ ಕೇರಳ ಜೆಡಿಎಸ್ ಹೊಸ ಪಕ್ಷವನ್ನು ರಚಿಸಲು ನಿರ್ಧರಿಸಿದೆ. ರಾಷ್ಟ್ರೀಯ ನಾಯಕತ್ವದ ನಿರ್ಧಾರವನ್ನು ವಿರೋಧಿಸಿ ಪಕ್ಷದಿಂದಲೇ ಹೊರಬರಲು ಕೇರಳದ ಜನತಾ ದಳ (ಎಸ್) ತೀರ್ಮಾನಿಸಿದೆ.

ತಿರುವನಂತಪುರಂನಲ್ಲಿರುವ ರಾಜ್ಯ ಸಮಿತಿ ಕಚೇರಿಯಲ್ಲಿ ಮಂಗಳವಾರ ಕೇರಳ ಜೆಡಿಎಸ್ ನಾಯಕರು ಸಭೆ ಸೇರಿದ್ದು, ಹೊಸ ಹೆಸರು, ಧ್ವಜ ಮತ್ತು ಚಿಹ್ನೆಯನ್ನು ಹೊಂದಿರುವ ಪಕ್ಷವನ್ನು ರಚಿಸಲು ನಿರ್ಧರಿಸಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ನರೇಂದ್ರ ಮೋದಿ ಸಂಪುಟಕ್ಕೆ ಸೇರ್ಪಡೆಗೊಂಡ ನಂತರ ಕೇರಳದಲ್ಲಿ ಎಡರಂಗದ ಭಾಗವಾಗಿರುವ ಜೆಡಿಎಸ್‌ ಇಕ್ಕಟ್ಟಿನಲ್ಲಿ ಸಿಲುಕಿತ್ತು. ಈ ವಿಚಾರದಲ್ಲಿ ಕಾಂಗ್ರೆಸ್ ನಿರಂತರವಾಗಿ ಎಡರಂಗವನ್ನು ತರಾಟೆಗೆ ತೆಗೆದುಕೊಂಡಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರದ ಮೈತ್ರಿಗೆ ಮೌನ ಸಮ್ಮತಿ ನೀಡಿದ್ದಾರೆ ಎಂದು ಹೇಳಿದೆ.

Advertisements

ಇದನ್ನು ಓದಿದ್ದೀರಾ?  ಭ್ರಷ್ಟ ಬಿಜೆಪಿ ಮತ್ತು ಸ್ವಾರ್ಥಿ ಜೆಡಿಎಸ್ ಸೋಲಿಸಿ ಹಾಸನದ ಘನತೆ ಉಳಿಸಿದ ಮತದಾರರಿಗೆ ಧನ್ಯವಾದ: ಜನಪರ ಚಳವಳಿಗಳ ಒಕ್ಕೂಟ

ಈ ಬೆನ್ನಲ್ಲೇ ಕೇರಳ ಜೆಡಿಎಸ್ ಎಲ್‌ಡಿಎಫ್‌ ಮೈತ್ರಿಕೂಟದಲ್ಲಿ ಮುಂದುವರಿಯುವ ನಿರ್ಧಾರವನ್ನು ತಕ್ಷಣವೇ ಪ್ರಕಟಿಸಿದೆ. ಆದರೆ ಕೇರಳದಲ್ಲಿ ಜೆಡಿಎಸ್ ಎಡರಂಗದ ಜೊತೆ ಮತ್ತು ಕೇಂದ್ರದಲ್ಲಿ ಮೋದಿ ಸರ್ಕಾರದ ಜೊತೆ ಕೈಜೋಡಿಸಿರುವುದರ ವಿಚಾರದಲ್ಲಿ ಯುಡಿಎಫ್ ಮತ್ತು ಬಿಜೆಪಿ ಎರಡೂ ಎಡಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.

ಎಡ ಸಂಪುಟದಿಂದ ಪಕ್ಷದ ಸಚಿವರಾದ ಕೆ ಕೃಷ್ಣನ್‌ಕುಟ್ಟಿ ಅವರ ರಾಜೀನಾಮೆಯನ್ನು ಸಿಎಂ ಕೇಳಬೇಕು ಎಂದು ಯುಡಿಎಫ್ ಒತ್ತಾಯಿಸುತ್ತಿದೆ.

ಈ ಬೆನ್ನಲ್ಲೇ ಹೊಸ ಪಕ್ಷವನ್ನು ರಚಿಸುವ ನಿರ್ಧಾರವನ್ನು ಪ್ರಕಟಿಸಿದ ಜೆಡಿಎಸ್ ರಾಜ್ಯ ಮುಖ್ಯಸ್ಥ ಮ್ಯಾಥ್ಯೂ ಟಿ ಥಾಮಸ್ ಮಾತನಾಡಿ, “ಹೊಸ ಪಕ್ಷವು ಸಮಾಜವಾದಿ ತತ್ವಗಳಿಗೆ ಬದ್ಧವಾಗಿದೆ. ಜಯಪ್ರಕಾಶ್ ನಾರಾಯಣನ್ ಮತ್ತು ರಾಮ್ ಮನೋಹರ್ ಲೋಹಿಯಾ ಅವರ ಹಾದಿಯಲ್ಲಿ ಸಾಗಲಿದೆ. ಇದು ಎಡರಂಗದ ಭಾಗವಾಗಿರುತ್ತದೆ. ಅದೇ ಸಮಯದಲ್ಲಿ ಸ್ವತಂತ್ರ ರಾಜಕೀಯ ಘಟಕವಾಗಿ ಉಳಿಯುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ?  ನಿರ್ಮಲಾ ಸೀತಾರಾಮನ್, ಕುಮಾರಸ್ವಾಮಿ ಸೇರಿ ಕರ್ನಾಟಕದಿಂದ ಕೇಂದ್ರ ಸಚಿವರಾಗಿ ಐವರು

“ಹೊಸ ಹೆಸರನ್ನು ಶೀಘ್ರದಲ್ಲೇ ನೋಂದಾಯಿಸಲಾಗುವುದು. ಈ ನಿಟ್ಟಿನಲ್ಲಿ ಕಾನೂನು ಅಂಶಗಳನ್ನೂ ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ರಾಷ್ಟ್ರೀಯ ನಾಯಕತ್ವವು ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದರೆ, ಕೇರಳ ಘಟಕವು ಪಕ್ಷಕ್ಕೆ ಹಿಂತಿರುಗುತ್ತದೆ” ಎಂದು ಮ್ಯಾಥ್ಯೂ ಥಾಮಸ್ ಹೇಳಿದರು.

ಸದ್ಯಕ್ಕೆ ಆರ್‌ಜೆಡಿ ಸೇರಿದಂತೆ ಯಾವುದೇ ಪಕ್ಷದೊಂದಿಗೆ ವಿಲೀನಗೊಳ್ಳದಿರಲು ಜೆಡಿಎಸ್‌ ನಿರ್ಧರಿಸಿದೆ. ಸಮಾಜವಾದಿ ಪಕ್ಷದೊಂದಿಗೆ ವಿಲೀನದ ಬಗ್ಗೆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವರದಿಯಾಗಿದೆ.

ಕೇರಳ ಜೆಡಿಎಸ್‌ ರಾಷ್ಟ್ರೀಯ ನಾಯಕತ್ವದೊಂದಿಗಿನ ಸಂಬಂಧವನ್ನು ಕಡಿದುಕೊಂಡಿರುವುದಾಗಿ ಘೋಷಿಸಿದ್ದರೂ ತಾಂತ್ರಿಕವಾಗಿ ಅದು ದೇವೇಗೌಡರ ನೇತೃತ್ವದ ಜೆಡಿ(ಎಸ್)ನ ಕೇರಳ ಘಟಕವಾಗಿಯೇ ಉಳಿದಿದೆ. ಸಿ ಕೆ ನಾಣು ಮತ್ತು ನೀಲಲೋಹಿತದಾಸ್ ಅವರಂತಹ ಕೆಲವು ಹಿರಿಯ ನಾಯಕರು ಕೇರಳ ಘಟಕದ ನಿರ್ಧಾರದಿಂದ ಅತೃಪ್ತರಾಗಿದ್ದರು.

ಅಧಿಕೃತ ಬಣದಿಂದ ದೂರ ಸರಿದಿರುವ ಇಬ್ಬರು ಜೆಡಿಎಸ್ ಶಾಸಕರಾದ ಮ್ಯಾಥ್ಯೂ ಥಾಮಸ್ ಮತ್ತು ಕೆ ಕೃಷ್ಣನ್‌ಕುಟ್ಟಿ ಅವರನ್ನು ಅನರ್ಹಗೊಳಿಸಬಹುದು. ಈ ಹಿನ್ನೆಲೆಯಲ್ಲಿ ಮ್ಯಾಥ್ಯೂ ಥಾಮಸ್ ಅವರು ಹೊಸ ಪಕ್ಷ ಕಟ್ಟುವ ನಿರ್ಧಾರ ಪ್ರಕಟಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X