ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಪರಿಶೀಲಿಸಲು ಸಿಎಂ ಕಚೇರಿಯಿಂದ ವಿಶೇಷ ಅಭಿಯಾನ

Date:

Advertisements

ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು ಜೂನ್‌ ತಿಂಗಳಲ್ಲಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದಿಂದ ವಿಶೇಷ ಅಭಿಯಾನ ನಡೆದಿದೆ.

ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಂಡಿದ್ದಾರೆ.

ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿದೆ.

Advertisements

ಮುಂದಿನ ದಿನಗಳಲ್ಲಿ ಪುನರ್‌ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X