ಭೀಕರ ಹಲ್ಲೆಯ ಪರಿಣಾಮ, ರೇಣುಕಾಸ್ವಾಮಿ ಸಾವು ; ಮರಣೋತ್ತರ ಪರೀಕ್ಷಾ ವರದಿ

Date:

Advertisements

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ ಸೇರಿದಂತೆ ಈವರೆಗೆ 17 ಆರೋಪಿಗಳು ಬಂಧನದಲ್ಲಿದ್ದಾರೆ. ಇನ್ನು ನಾಳೆ ಆರೋಪಿಗಳ ಕಸ್ಟಡಿ ಅವಧಿ ಮುಗಿಯಲಿದ್ದು, ಸ್ಥಳ ಮಹಜರು, ಸತತ ವಿಚಾರಣೆ ಸೇರಿದಂತೆ ತನಿಖೆ ನಡೆಯುತ್ತಲೇ ಇದೆ. ಇದೀಗ, ಕೊಲೆಯಾದ ರೇಣುಕಾಸ್ವಾಮಿ ಅವರ ಮರಣೋತ್ತರ ಪರೀಕ್ಷಾ ವರದಿ ಬಹಿರಂಗಗೊಂಡಿದ್ದು, “ಭೀಕರ ಹಲ್ಲೆಯ ಪರಿಣಾಮ, ರೇಣುಕಾಸ್ವಾಮಿಯ ಸಾವು ಸಂಭವಿಸಿದೆ” ಎಂಬ ಅಂಶ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಯಲಾಗಿದೆ.

ರೇಣುಕಾಸ್ವಾಮಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರು ಸಲ್ಲಿಸಿರುವ ವರದಿಯಲ್ಲಿ ”Death is due to shock and Hemorrhage as a result to multiple blunt injuries sustained, ಅಂದರೆ ಶಾಕ್ ಹಾಗೂ ಬಲವಾದ ಹೊಡೆತಗಳ ಕಾರಣದಿಂದ ರಕ್ತಸ್ರಾವವಾಗಿ ಸಾವು ಸಂಭವಿಸಿದೆ” ಎಂಬ ವರದಿಯನ್ನ ವೈದ್ಯರು ನೀಡಿದ್ದಾರೆ.

ಮೃತದೇಹದ ಮರಣೋತ್ತರ ಪರೀಕ್ಷೆಯ ವರದಿಯನ್ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೂ ಕಳುಹಿಸಿರುವ ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ.

Advertisements

ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಆರೋಪಿಗಳನ್ನ ಹಾಜರುಪಡಿಸುವಾಗ ನ್ಯಾಯಾಲಯಕ್ಕೆ ಸಲ್ಲಿಸಲು ಸಿದ್ಧಪಡಿಸಿರುವ ರಿಮ್ಯಾಂಡ್ ಅರ್ಜಿಯಲ್ಲಿ ರೇಣುಕಾಸ್ವಾಮಿಯ ಸಾವಿಗೆ ವೈದ್ಯರು ನೀಡಿರುವ ಕಾರಣದ ಕುರಿತು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

“ರೇಣುಕಾಸ್ವಾಮಿ ತೀವ್ರ ಆಘಾತ, ಚಿತ್ರಹಿಂಸೆ ಮತ್ತು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ದೇಹದ ಮೇಲೆ 15 ಗಾಯಗಳು ಕಂಡುಬಂದಿವೆ. ಮೃತ ವ್ಯಕ್ತಿಯ ದೇಹದ ತಲೆ, ಹೊಟ್ಟೆ, ಎದೆ ಮತ್ತು ಇತರ ಭಾಗಗಳಲ್ಲಿ ಗಾಯದ ಗುರುತುಗಳಿವೆ. ಈ ಗಾಯದ ಗುರುತುಗಳು ಮರದ ಕೋಲು, ಚರ್ಮದ ಬೆಲ್ಟ್ ಹಾಗೂ ಹಗ್ಗದಿಂದ ಹೊಡೆದ ಗುರುತುಗಳಾಗಿವೆ” ಎಂದು ಶವಪರೀಕ್ಷೆ ವರದಿಯಲ್ಲಿ ತಿಳಿಸಲಾಗಿದೆ.

ಇನ್ನು ರೇಣುಕಾಸ್ವಾಮಿ ಅವರ ತಲೆಯನ್ನು ಶೆಡ್ಡಿನಲ್ಲಿ ನಿಂತಿದ್ದ ಮಿನಿ ಟ್ರಕ್‌ಗೆ ಹೊಡೆಯಲಾಗಿದೆ ಎಂದು ಶವಪರೀಕ್ಷೆ ವರದಿ ಹೇಳಲಾಗಿದ್ದು, ಈ ವಾಹನವನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ನೀಡಲು ಬಳಸಿದ ಮರದ ಕೋಲುಗಳು, ಚರ್ಮದ ಬೆಲ್ಟ್ ಮತ್ತು ಹಗ್ಗವನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಪಕ್ಷಕ್ಕೆ ದೊಣ್ಣೆ ಕೊಟ್ಟು ಬಡಿಸಿಕೊಳ್ಳುತ್ತಿರುವ ಸಾಹಿತಿಗಳು!

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧನ ಮಾಡಿ, ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾ ಸ್ವಾಮಿಗೆ ದರ್ಶನ್ ಮತ್ತು ಗ್ಯಾಂಗ್ ತೀವ್ರ ಚಿತ್ರಹಿಂಸೆ ನೀಡಿತ್ತು ಎಂಬುದು ಸಹ ತನಿಖೆಯಿಂದ ಹೊರಬಂದಿದೆ.

ಜೂನ್‌ 20ಕ್ಕೆ ದರ್ಶನ್​ ಹಾಗೂ ಇನ್ನಿತರ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾಗಲಿದೆ. ಈ ಹಿನ್ನೆಲೆ, ನ್ಯಾಯಾಲಯದ ಆದೇಶದಂತೆ ದರ್ಶನ್ ಹಾಗೂ ಇನ್ನಿತರ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಳಪಡಬೇಕಾಗಬಹುದು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X