ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚು, ಮಕ್ಕಳು ಮೌಢ್ಯದಿಂದ ಹೊರ ಬರಲಿ: ಸಿಎಂ ಸಿದ್ದರಾಮಯ್ಯ ಕರೆ

Date:

Advertisements

ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಢ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂತಹ ಮೌಢ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಎಸ್ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಉತ್ತೇಜಿಸಿ ಮಾತನಾಡಿದರು.

“ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ ಬೇಡ. ವಸತಿ ಶಾಲೆ ಬೇಕು” ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ” ಎಂದು ವಿವರಿಸಿದರು.

Advertisements

“ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ” ಎಂದರು.

“ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಲ್ಲಾ ಜಾತಿ, ಜನವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ.‌ ಇದನ್ನು ಹೋಗಲಾಡಿಸಬೇಕಾಗಿದೆ. ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತ ಆಗಬೇಕಾಗಿತ್ತು” ನೆನಪಿಸಿಕೊಂಡರು.

“ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು. ಆದ್ದರಿಂದ ಪೋಷಕರು, ಶಿಕ್ಷಕರು ಮೊದಲು ಕಂದಾಚಾರ,‌ ಮೌಢ್ಯದಿಂದ ಹೊರಗೆ ಬರಬೇಕು. ಆಗ ಮಕ್ಕಳೂ ವೈಜ್ಞಾನಿಕವಾಗಿ ಬೆಳೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ. ಹುಟ್ಟುವಾಗ ಎಲ್ಲ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟಿ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎನ್ನುವ ಕುವೆಂಪು ಅವರ ಮಾತು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಮಕ್ಕಳು ಅಲ್ಪ ಮಾನವರಾಗದಂತೆ ಕಾಪಾಡುವ ಜವಾಬ್ದಾರಿ ಶಿಕ್ಷಕರು, ಪೋಷಕರ ಮೇಲಿದೆ” ಎಂದರು.

ಬಸವಣ್ಣನವರು 12ನೇ ಶತಮಾನದಲ್ಲೇ ದಲಿತರು ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿ ಗೆದ್ದರು. ಜಾತಿ ವ್ಯವಸ್ಥೆ ಶಿಥಿಲವಾಗಬೇಕಾದರೆ ದಲಿತರು, ಹಿಂದುಳಿದವರಿಗೆ ಆರ್ಥಿಕ‌ ಶಕ್ತಿ ಬರಬೇಕು, ಸಾಮಾಜಿಕವಾಗಿಯೂ ಶಕ್ತಿ ಬರಬೇಕು. ಈ ಬಗ್ಗೆ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಆಡಿದ ಮಾತುಗಳು ಇವತ್ತಿಗೂ ಬಹಳ ಪ್ರಸ್ತುತವಾಗಿದೆ ಎಂದರು.

ಹೆಣ್ಣು ಮಕ್ಕಳ ಪ್ರಗತಿ ಖುಷಿ ಆಗತ್ತೆ

“ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ಖುಷಿ ಆಗತ್ತೆ. ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ.100 ರಷ್ಟು ಅಂಕ ಪಡೆಯಬೇಕು” ಎಂದು ಕರೆ ನೀಡಿದರು.

ಕ್ರೈಸ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ಅವರು ವಹಿಸಿದ್ದರು. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಪರಿಷತ್ ಸದಸ್ಯರಾದ ಸುದಾಮ್ ದಾಸ್ ಮತ್ತು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X