ಬೆಂಗಳೂರು | ನೂರರ ಗಡಿ ದಾಟಿದ ಟೊಮೆಟೊ ದರ; ದ್ವಿಶತಕದತ್ತ ಮುಖ ಮಾಡಿದ ಬೀನ್ಸ್‌

Date:

Advertisements

ಪೆಟ್ರೊಲ್, ಡಿಸೇಲ್, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಎರಡು ವಾರಗಳ ಹಿಂದೆ ಪ್ರತಿ ಕೆಜಿ ಟೊಮೆಟೊ ₹25 ರಿಂದ ₹30ರ ಆಸುಪಾಸಿನಲ್ಲಿತ್ತು. ಇದೀಗ, ₹100ರ ಗಡಿ ದಾಟಿದೆ. ಇನ್ನು ಮೂರು ತಿಂಗಳಲ್ಲಿ ಈರುಳ್ಳಿ ಬೆಲೆಯೂ ಏರಿಕೆ ಆಗುವ ಸಾಧ್ಯತೆ ಇದೆ. ಹೂವಿನ ಬೆಲೆ ಪ್ರತಿ ದಿನ ದುಬಾರಿಯಾಗುತ್ತಲೇ ಇದೆ.

ಮುಂಗಾರು ಮಳೆ ಚುರುಕು ಪಡೆಯುತ್ತಿದ್ದಂತೆ ಜಿಲ್ಲೆಯಾದ್ಯಂತ ಎಲ್ಲ ತರಕಾರಿ ಪದಾರ್ಥಗಳ ಬೆಲೆ ಏಕಾಏಕಿ ಗಗನಕ್ಕೇರಿದೆ. ಈ ವರ್ಷ ವಾಡಿಕೆಯಂತೆ ಮಳೆಯಾಗದೇ, ತಾಪಮಾನ ಹೆಚ್ಚಳವಾಗಿತ್ತು. ಮಳೆಯಿಲ್ಲದೇ ರೈತರು ಕಂಗಾಲಾಗಿದ್ದರು. ಬೆಳೆದ ಬೆಳೆ ಕೈಗೆ ಸಿಗದೇ ಪರದಾಡಿದ್ದರು. ಇನ್ನು ಹವಾಮಾನ ವೈಪರೀತ್ಯದಿಂದ ಬೆಳೆ ನಾಶವಾಗಿದೆ. ಟೊಮೆಟೊ ಬೆಲೆ ಏರಿಕೆಗೆ ಕೀಟಗಳ ಸಮಸ್ಯೆ, ಬೆಂಕಿ ರೋಗದ ಸಮಸ್ಯೆಯೂ ಕಾರಣವಾಗುತ್ತಿದೆ. ಉತ್ತಮ ಇಳುವರಿಯೂ ಈ ಬಾರಿ ಇಲ್ಲವಾಗಿದೆ.

ಈ ವರ್ಷ ಟೊಮೆಟೊ ಬೆಳೆಯುವುದಕ್ಕೆ ಹೋದವರು ಕೂಡ ಕೈ ಸುಟ್ಟುಕೊಂಡಿದ್ದರು. ಇದೀಗ ಮಳೆ ಆರಂಭವಾಗಿದ್ದು, ಟೊಮೆಟೊ ಬೆಳೆಯಲಾಗುತ್ತಿದೆ. ಆದರೆ, ಮಳೆ ಸರಿಯಾದ ಸಮಯಕ್ಕೆ ಬರದ ಪರಿಣಾಮ ಬೆಳೆ ಸರಿಯಾಗಿ ಬಂದಿಲ್ಲ. ಹೀಗಾಗಿ ಕರ್ನಾಟಕದಿಂದ ಬರುತ್ತಿದ್ದ ಟೊಮೆಟೊ ಬೆಳೆ ಕಡಿಮೆಯಾಗಿದೆ. ಈ ಹಿಂದೆ ಕೋಲಾರ, ಹೊಸಕೋಟೆ, ನಾಸಿಕ್, ಮಹಾರಾಷ್ಟ್ರ, ತಮಿಳುನಾಡು ಭಾಗದಿಂದ ಟೊಮೆಟೊ ಬರುತ್ತಿತ್ತು. ಸದ್ಯ ನಾಸಿಕ್​ನಿಂದ ಮಾತ್ರ ಟೊಮೆಟೊ ಸರಬರಾಜಾಗುತ್ತಿದೆ.

Advertisements

ಟೊಮೆಟೊಗೆ ಸದ್ಯ ಬೇಡಿಕೆಯೂ ಕೂಡ ಜಾಸ್ತಿ ಇದೆ. ಬೇಡಿಕೆಗೆ ಸರಿಯಾಗಿ ಟೊಮೆಟೊ ಪೂರೈಕೆಯಾಗುತ್ತಿಲ್ಲ. ಇದರ ಪರಿಣಾಮ ಬೆಲೆ ಏರಿಕೆಯಾಗುತ್ತಿದೆ. ಬೆಂಗಳೂರಿನಲ್ಲಿ ಸದ್ಯ ಒಂದು ಕೆಜಿ ಟೊಮೆಟೊ ಬೆಲೆ‌ ₹105 ಇದ್ದು, ಇನ್ನು ಒಂದು ವಾರದಲ್ಲಿ ₹150ರ ಗಡಿದಾಟುವ ಸಾಧ್ಯತೆ ಇದೆ.‌ ಮಾರುಕಟ್ಟೆಗಳಲ್ಲಿ ₹100 ಇದ್ದರೆ, ಹಾಪ್ ಕಾಮ್ಸ್​ಗಳಲ್ಲಿ ₹105 ಬೆಲೆ ನಿಗದಿ ಮಾಡಲಾಗಿದೆ.

“ಟೊಮೆಟೊ ಬೆಲೆ ಏಕಾಏಕಿ ಜಿಗಿದಿದೆ. ಎರಡು ವಾರಗಳ ಹಿಂದೆ ಪ್ರತಿ ಕೆ.ಜಿ ಟೊಮೆಟೊ ₹25 ರಿಂದ ₹30ರ ಆಸುಪಾಸಿನಲ್ಲಿತ್ತು. ನಾಲ್ಕೈದು ದಿನಗಳ ಹಿಂದೆ ಮಧ್ಯಮ ಗಾತ್ರದ ಗುಣಮಟ್ಟದ ಟೊಮೆಟೊ ಪ್ರತಿ ಕೆ.ಜಿಗೆ ₹40 ರಿಂದ ₹50 ಇತ್ತು. ಈಗ ಒಂದೇ ಮಟ್ಟಿಗೆ ₹100 ರಿಂದ ₹120ಕ್ಕೆ ಏರಿಕೆ ಕಂಡಿದೆ. ದಿನ ಕಳೆದಂತೆ ಇದು ಇನ್ನೂ ಹೆಚ್ಚಾಗಲಿದೆ. ಇನ್ನು ಒಂದು ತಿಂಗಳ ಕಾಲ ಟೊಮೆಟೊ ಬೆಲೆ‌ ಇದೇ ರೀತಿಯಾಗಿ ಮುಂದುವರಿಯಲಿದೆ” ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಕಳೆದೊಂದು ತಿಂಗಳಿಂದ ಬೀನ್ಸ್‌ ದರ ಯಥಾಸ್ಥಿತಿಯಲ್ಲಿದೆ. ಪ್ರತಿ ಕೆಜಿ ಬೀನ್ಸ್‌ ₹180 ರಿಂದ ₹200ಕ್ಕೆ ಮಾರಾಟ ಮಾಡಲಾಗುತ್ತಿದೆ. ಬರುವ ದಿನಗಳಲ್ಲಿ ಬೆಲೆ ಇನ್ನಷ್ಟು ಹೆಚ್ಚಾದರೆ ಅಚ್ಚರಿ ಪಡಬೇಕಿಲ್ಲ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆರ್ಡರ್ ಮಾಡಿದ ಗ್ರಾಹಕರ ಮನೆಗೆ ಜೀವಂತ ಹಾವು ಕಳುಹಿಸಿದ ಅಮೆಜಾನ್

ಚವಳಿಕಾಯಿ, ದಪ್ಪ ಮೆಣಸಿನಕಾಯಿ, ಬೆಂಡೆಕಾಯಿ, ಕುಂಬಳಕಾಯಿ, ಬದನೆಕಾಯಿ, ಹೀರೆಕಾಯಿ ಸೇರಿದಂತೆ ಬಹುತೇಕ ಎಲ್ಲ ತರಕಾರಿಗಳ ಬೆಲೆ ಪ್ರತಿ ಕೆಜಿಗೆ ₹80ರಿಂದ ₹100ರ ಆಸುಪಾಸಿನಲ್ಲಿದೆ. ಮಧ್ಯಮ ಗಾತ್ರದ ಒಂದು ಕಟ್ಟು ಮೆಂತೆ ಪಲ್ಯ ₹40ಕ್ಕೆ ಮಾರಾಟವಾದರೆ, ಪಾಲಕ್‌, ಸಬ್ಬಕ್ಕಿ ₹30ರಿಂದ ₹40ರ ಆಸುಪಾಸಿನಲ್ಲಿದೆ.

ಇತ್ತ ಹೂಗಳ ಬೆಲೆಯೂ ಏರಿಕೆಯಾಗಿದೆ. ಕೆಜಿ ಸೇವಂತಿಗೆ ಹೂವಿಗೆ ಬರೋಬ್ಬರಿ ₹400 ಇದ್ದರೆ, ಮಲ್ಲಿಗೆ ಕೆಜಿಗೆ ₹600, ಮಳ್ಳೆ ₹400, ಕಾಕಡ‌ ₹600, ಕನಕಾಬಂರ ₹500 ಇದೆ. ಯಾವುದೇ ಹಬ್ಬಗಳ ಸೀಸನ್‌ ಅಲ್ಲದೇ ‌ಹೋದರೂ ಹೂಗಳ ಬೆಲೆ ಏರಿಕೆಯಾಗಿದೆ. ಏಕಾಏಕಿ ಬೆಲೆ ಹೆಚ್ಚಳ ಆಗಿರುವುದರಿಂದ ಗ್ರಾಹಕರು ಕಂಗಲಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X