ಬೆಂಗಳೂರು | ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ–ಯುಕೆಜಿ ತರಗತಿ ಪ್ರಾರಂಭಿಸಿ; ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

Date:

Advertisements

ಹಲವು ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮೂರರಿಂದ ನಾಲ್ಕು ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜೂನ್‌ 19ರಿಂದ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ನೂತನವಾಗಿ ಜಾರಿಗೆ ತರುತ್ತಿರುವ ಯೋಜನೆಗಳಿಂದ ಅಂಗನವಾಡಿಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗಲಿದೆ. ಹೀಗಾಗಿ, ಆ ಯೋಜನೆಗಳನ್ನು ಕೈಬಿಡಬೇಕು. ಇಸಿಸಿಯ ಯೋಜನೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಅಗ್ರಹಿಸಿದ್ದಾರೆ.

ಈ ದಿನ.ಕಾಮ್‌ ಜತೆಗೆ ಮಾತನಾಡಿದ ಪ್ರತಿಭಟನಾನಿರತ ಸಂಘದ ಅಧ್ಯಕ್ಷೆ ಎಸ್‌ ವರಲಕ್ಷ್ಮಿ, “ಸರ್ಕಾರದ ಕೆಲ ನಿರ್ಧಾರಗಳಿಂದ ಅಂಗನವಾಡಿಗಳ ಅಸ್ತಿತ್ವಕ್ಕೆ ಧಕ್ಕೆಯಾಗಿದೆ. ತಕ್ಷಣ ಅಂತಹ ನಿರ್ಧಾರಗಳನ್ನು ಹಿಂದಕ್ಕೆ ಪಡೆಯಬೇಕು. ಸರ್ಕಾರದ ವಿವಿಧ ಇಲಾಖೆಗಳು ಕೂಸಿನ ಮನೆ, ಶಿಶುಪಾಲನ ಕೇಂದ್ರಗಳು, ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುವ ಮೂಲಕ ಅಂಗನವಾಡಿಗಳಲ್ಲಿನ ಶಾಲಾ ಪೂರ್ವ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತರುತ್ತಿವೆ. ಅಂಗನವಾಡಿಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸವಲತ್ತುಗಳಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ” ಎಂದರು.

“ರಾಜ್ಯ ಶಿಕ್ಷಣ ನೀತಿ ರೂಪಿತವಾಗುವ ಮೊದಲೇ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವುದು ಸರಿಯಲ್ಲ. ಇದರಿಂದ ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಅಂಗನವಾಡಿಗಳು ದುರ್ಬಲಗೊಳ್ಳಲಿವೆ. ಹಾಗಾಗಿ, ಸರ್ಕಾರ ತನ್ನ ನಿರ್ಧಾರಗಳನ್ನು ಮರು ಮರಿಶೀಲನೆ ನಡೆಸಬೇಕು” ಎಂದು ಆಗ್ರಹಿಸಿದರು.

Advertisements

ಹೋರಾಟದಲ್ಲಿ ಭಾಗಿಯಾಗಿರುವ ಸಾಹಿತಿ ಮೀನಾಕ್ಷಿ ಬಾಳಿ ಈದಿನ.ಕಾಮ್‌ ಜೊತೆಗೆ ಮಾತನಾಡಿದ್ದು, “ಸರ್ಕಾರ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಬೇಕೆಂದು ಹೇಳಿ ಅಂಗನವಾಡಿ ಮಕ್ಕಳನ್ನ ಎತ್ತಂಗಡಿ ಮಾಡುತ್ತಿದೆ. ಅವರಿಗೆ ಇಂಗ್ಲಿಷ್ ಕಲಿಸುತ್ತೇವೆ ಎಂಬ ಹೆಸರಿನಲ್ಲಿ ಅಂಗನವಾಡಿಯ ಇಡೀ ಯೋಚನೆಯನ್ನು ನಿಶ್ಪಲಗೊಳಿಸುವ ಅವೈಜ್ಞಾನಿಕ ಕ್ರಮಕ್ಕೆ ಮುಂದಾಗಿದೆ. ಅಂಗನವಾಡಿಗಳಿಗೆ ಅನುದಾನ ಕೊಡುವಂತಹ ಸರ್ಕಾರ ಇನ್ನೊಂದು ಸರ್ಕಾರಿ ಯೋಜನೆ ರೂಪಿಸುತ್ತಿದೆ. ಒಂದು ಕಣ್ಣಿಗೆ ಚುಚ್ಚಿ ರಕ್ತ ಬರಿಸಿ ಇನ್ನೊಂದು ಕಣ್ಣನ್ನು ಬಲಿಷ್ಟ ಮಾಡುತ್ತೇವೆ ಎಂಬ ರೀತಿಯಲ್ಲಿ ಸರ್ಕಾರ ನಡೆದುಕೊಳ್ಳುತ್ತಿದೆ” ಎಂದರು.

“ಇರುವ ಸರ್ಕಾರಿ ಶಾಲೆಗಳಿಗೆ ಮೈದಾನ, ಸುಸಜ್ಜಿತವಾದ ಶೌಚಾಲಯ, ಕ್ಲಾಸ್ ರೂಂ ಸೇರಿದಂತೆ ಇನ್ನಿತರ ಸೌಕರ್ಯಗಳನ್ನು ಒದಗಿಸಬೇಕು. ಹಲವು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲವಾಗಿದ್ದಾರೆ. ಶಾಲೆಗಳಿಗೆ ಬೇಕಾಗಿರುವಷ್ಟು ಶಿಕ್ಷಕರನ್ನು ನೇಮಕ ಮಾಡಬೇಕು. ಅದೆಲ್ಲವನ್ನೂ ಬಿಟ್ಟು, ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತೆರೆಯುತ್ತೇವೆ ಎನ್ನುವುದು ಸರಿಯಲ್ಲ. ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆಗಳ ಯಾರ ಜತೆಗೆ ಚರ್ಚೆ ಮಾಡಿ ನಿರ್ಧಾರ ಮಾಡಿದ್ದಾರೆ? ಯಾರೊಂದಿಗೂ ಚರ್ಚೆ ಮಾಡದೇ ತರಾತುರಿಯಲ್ಲಿ ಈ ಯೋಜನೆ ಜಾರಿ ಮಾಡುತ್ತಿದ್ದಾರೆ. ಅಂಗನವಾಡಿಗಳನ್ನು ಬಲಿಷ್ಟ ಮಾಡಿ, ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಬೇಕು. ಅದನ್ನುಬಿಟ್ಟು ಅಂಗನವಾಡಿ ಮೇಲೆ ಕಣ್ಣು ಹಾಕುತ್ತಿದ್ದಾರೆ. ಹೀಗೆ ಹಗ್ಗಜಗ್ಗಾಟ ಮಾಡಿದರೇ, ಗ್ರಾಮೀಣ ಮಕ್ಕಳ ಮಾನಸಿಕತೆ ಮೇಲೆ ದುಷ್ಪರಿಣಾಮ ಬೀರುತ್ತದೆ” ಎಂದು ಹೇಳಿದರು.

“ಇರೋ ಯೋಜನೆಯನ್ನು ಬಲಿಷ್ಟ ಮಾಡದೇ ನೂತನ ಯೋಜನೆಯನ್ನು ಎತ್ತಿ ಹಿಡಿಯುತ್ತೇವೆ ಎಂದರೆ, ಇದು ಮೂರ್ಖತನದ ಪರಮಾವಧಿ. ಅಂಗನವಾಡಿ ಮಹಿಳೆಯರಿಗೆ ತೊಂದರೆ ಕೊಡುವ ಮೂಲಕ, ಬಡ ಮಕ್ಕಳಿಗೆ ವ್ಯತಿರಿಕ್ತವಾಗಿ ಪರಿಣಾಮ ಬೀರುವಂತಹ ಯೋಜನೆಗಳನ್ನು ನೀವು ಜಾರಿಗೆ ತಂದರೆ ಮಹಿಳಾ ಸಂಘಟನೆ ನಿಮ್ಮ ವಿರುದ್ಧ ಎದ್ದು ನಿಲ್ಲಬೇಕಾಗುತ್ತದೆ. ದೊಡ್ಡ ಪ್ರಮಾಣದಲ್ಲಿ ಹೋರಾಟ ನಡೆಸುತ್ತದೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ನಾಲ್ಕು ವರ್ಷಗಳಿಂದ ನಡೆಯದ ಬಿಬಿಎಂಪಿ ಚುನಾವಣೆ; ನಗರದ ಜನ ಏನಂದ್ರು?

ಮಂಡ್ಯದ ಅಂಗನವಾಡಿ ಕಾರ್ಯಕರ್ತೆ ರೇಣುಕಾ ಈ ದಿನ.ಕಾಮ್‌ ಜತೆಗೆ ಮಾತನಾಡಿ, “ಕೂಸಿನ ಮನೆ ಯೋಜನೆ ರದ್ದಾಗಬೇಕು. ಮಕ್ಕಳಿಗೆ ಆಟದಿಂದ ಪಾಠವಾಗಬೇಕು. ನೂತನ ಯೋಜನೆಯೊಂದಿಗೆ ಎಲ್‌ಕೆಜಿ-ಯುಕೆಜಿ ಪ್ರಾರಂಭ ಮಾಡುವ ಬದಲು ನಗೆ ತರಬೇತಿ ನೀಡಿ ಯೋಜನೆ ಮಾಡಬಹುದು. ಪೌಷ್ಠಿಕ ಆಹಾರ ಅಂತ ಹೇಳಿ ಮಕ್ಕಳಿಗೆ ನೀಡುವ ಆಹಾರ ಸಂಪೂರ್ಣ ಕಳಪೆಯಾಗಿದೆ. ಮಕ್ಕಳಿಗೆ ಆ ಊಟವನ್ನು ತಿನ್ನಲು ಆಗಲ್ಲ. ನಮಗೂ ಕೂಡ ಆಗಲ್ಲ” ಎಂದರು.

ರಾಜ್ಯ ಶಿಕ್ಷಣ ನೀತಿ ರೂಪಿತವಾಗುವ ಮೊದಲೇ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವುದು ಸರಿಯಲ್ಲ. ಇದರಿಂದ ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಅಂಗನವಾಡಿಗಳು ದುರ್ಬಲಗೊಳ್ಳಲಿವೆ. ಹಾಗಾಗಿ ನಿರ್ಧಾರಗಳನ್ನು ಮರು ಮರಿಶೀಲನೆ ನಡೆಸಬೇಕು ಎಂದು ದೇವನಹಳ್ಳಿಯ ಅಂಗನವಾಡಿ ಕಾರ್ಯಕರ್ತೆ ಸರೋಜಾ ಈ ದಿನ.ಕಾಮ್‌ಗೆ ಹೇಳಿದರು.

ಬೇಡಿಕೆಗಳೇನು?

  • ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಒಂದು ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಆದೇಶವನ್ನು ರದ್ದುಪಡಿಸಬೇಕು.
  • ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ–ಯುಕೆಜಿ ತರಗತಿಗಳನ್ನು ಪ್ರಾರಂಭಿಸಬೇಕು.
  • ಅಂಗನವಾಡಿ ಕೇಂದ್ರದ ಹೆಸರು ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರವೆಂದು ಪರಿವರ್ತಿಸಬೇಕು.
  • ಸರ್ಕಾರ ಇಲ್ಲಿನ ಮಕ್ಕಳಿಗೆ ಸಮವಸ್ತ್ರ, ಬ್ಯಾಗ್‌ ಮತ್ತು ಶೂಗಳನ್ನು ವಿತರಿಸಬೇಕು. ಅಂಗನವಾಡಿ ಕಾರ್ಯಕರ್ತರಿಗೆ ಶಿಕ್ಷಕಿಯರ ಸ್ಥಾನ ನೀಡಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿರುವ (ಐಸಿಡಿಎಸ್‌) ಆರಂಭಿಕ ಆರೈಕೆ ಮತ್ತು ಶಿಕ್ಷಣಕ್ಕೆ (ಇಸಿಸಿಇ) ಅನುದಾನ ಹೆಚ್ಚಿಸಬೇಕು.
  • ಶಿಕ್ಷಣ ಇಲಾಖೆಯಲ್ಲಿ ಅತಿಥಿ ಶಿಕ್ಷಕರಿಗೆ ನೀಡುವ ಗೌರವ ಧನವನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಬೇಕು. ಇಸಿಸಿಇ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿ ನೀಡುವಂತೆ ಕಾನೂನು ಜಾರಿಗೊಳಿಸಬೇಕು.
  • ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣೆ ಕೆಲಸಗಳಿಂದ ಮುಕ್ತಗೊಳಿಸಬೇಕು. ಐಸಿಡಿಎಸ್‌ ಯೋಜನೆಯನ್ನು ಪ್ರತ್ಯೇಕ ನಿರ್ದೇಶನಾಲಯವನ್ನಾಗಿ ಪರಿವರ್ತಿಸಬೇಕು.
  • ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಯಿಟಿ ಹಣ ಪಾವತಿಸಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸಬೇಕು.
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರಾರಂಭಿಸಿರುವ ಕೂಸಿನ ಮನೆಯ ಫಲಾನುಭವಿಗಳು ಅಂಗನವಾಡಿ ಕೇಂದ್ರಗಳ ಫಲಾನುಭವಿಗಳು ಒಂದೇ ಆಗಿದ್ದಾರೆ. ಆದ್ದರಿಂದ, ಅವೈಜ್ಞಾನಿಕ ಕೂಸಿನ ಮನೆಯ ಯೋಜನೆಯನ್ನು ರದ್ದುಗೊಳಿಸಬೇಕು.
  • ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ, ಪೂರ್ವ ಪ್ರಾಥಮಿಕ ಶಿಕ್ಷಣ ಗರ್ಭಿಣಿ–ಬಾಣಂತಿಯರ ಆರೈಕೆ ಹೊರತುಪಡಿಸಿ ಉಳಿದ ಕೆಲಸ ನಿರ್ಬಂಧಿಸಬೇಕು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X