ಕನ್ನಡದ ವಿಚಾರದಲ್ಲಿ ರಾಜಿಯಾಗದೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕನ್ನಡದ ವಿಚಾರದಲ್ಲಿ ರಾಜಿಯಾಗದೆ ಕೆಲಸ ಮಾಡುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ವಿಧಾನಸೌಧ ಆವರಣದಲ್ಲಿ ನಡೆದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಅವರ, ಬಸವಣ್ಣನವರ, ಕೆಂಪೇಗೌಡರು ಸೇರಿದಂತೆ ಅನೇಕ ನಾಯಕರ ಪ್ರತಿಮೆಗಳಿವೆ. ಈ ಶಕ್ತಿ ಕೇಂದ್ರದಲ್ಲಿ ನಾಡ ದೇವಿ ಭುವನೇಶ್ವರಿ ತಾಯಿ ಪ್ರತಿಮೆ ಇರಬೇಕು. ಇಲ್ಲಿಗೆ ಭೇಟಿ ನೀಡುವವರು ದೇವಿಯ ಆಶೀರ್ವಾದ ಪಡೆದುಕೊಳ್ಳಬೇಕು ಎಂಬುದು ನಮ್ಮ ಆಶಯ. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿದ್ದು ಈ ನೆನಪಿಗಾಗಿ 25 ಅಡಿಯ ಕಂಚಿನ ಪ್ರತಿಮೆ ಸ್ಥಾಪಿಸಲಾಗುತ್ತಿದೆ” ಎಂದರು.

“ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಿ ಮೊದಲಬಾರಿಗೆ ಕಾನೂನು ಮಾಡಲಾಯಿತು. ಇದಕ್ಕೆ ಅನೇಕ ಕನ್ನಡ ಸಂಘಟನೆಗಳು ಹೋರಾಟ ಮಾಡಿವೆ. ಒಂದಷ್ಟು ಬಾರಿ ಕಾನೂನು ಕೈಗೆ ತೆಗೆದುಕೊಂಡಾಗ ರಾಜಿಯಾಗದೆ ಕೆಲಸ ಮಾಡಿದ್ದೇವೆ. ಜೊತೆಗೆ ಕನ್ನಡ ಉಳಿಸುವ ಕೆಲಸವನ್ನು ಮಾಡಿದ್ದೇವೆ” ಎಂದು ತಿಳಿಸಿದರು.

Advertisements

“ನಾವು ಯಾರು ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಉತ್ತಮವಾದ ಆಲೋಚನೆ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳು. ಕನ್ನಡ ಬೆಳೆಯಲಿ, ಉಳಿಯಲಿ” ಎಂದು ಆಶಿಸಿದರು.

ದೇಶದ ಮಕ್ಕಳ ಭವಿಷ್ಯ ಮುಖ್ಯ

ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ನೀಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು “ನೀಟ್ ಪರೀಕ್ಷೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರೇ ಅಕ್ರಮ ನಡೆದಿದೆ ಎಂದು ಒಪ್ಪಿಕೊಂಡಿದ್ದಾರೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ ಎನ್ ಟಿಎ (ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ) ಗೆ ನೋಟಿಸ್ ನೀಡಿರುವುದು ಉತ್ತಮ ನಡೆ. ನಮ್ಮ ದೇಶದ ಮಕ್ಕಳ ಭವಿಷ್ಯ ಮುಖ್ಯವಾದುದು” ಎಂದು ಹೇಳಿದರು.

ಚನ್ನಪಟ್ಟಣದಿಂದ ಉಪಚುನಾವಣೆಗೆ ಸ್ಪರ್ಧಿಸುವಿರಾ ಎಂದು ಕೇಳಿದಾಗ “ಅದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 16 ಸಾವಿರ ಮತಗಳು ಬಂದಿದ್ದವು. ಲೋಕಸಭೆಯಲ್ಲಿ 80 ಸಾವಿರ ಮತಗಳು ಬಂದಿವೆ. ರಾಮನಗರ ಜಿಲ್ಲೆಯ 4 ಸ್ಥಾನಗಳಲ್ಲಿ ಮೂವರು ಕಾಂಗ್ರೆಸ್ ಶಾಸಕರಿದ್ದು ಒಂದನ್ನು ಬದಲಾಯಿಸಬೇಕಾಗಿದೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X