ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಬಿ ಇನಾಮದಾರ್ (74) ಅವರು ಮಂಗಳವಾರ ಮುಂಜಾನೆ ಕೊನೆಯುಸಿರರೆಳೆದಿದ್ದಾರೆ.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಎ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯವರಾದ ಇನಾಮದಾದ್, ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೆಚ್ಚಿಸಲು ದುಡಿದಿದ್ದರು. ಅವರು 1983ರಲ್ಲಿ ಕಿತ್ತೂರು ಕ್ಷೇತ್ರದಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ, ಮೊದಲ ಬಾರಿಗೆ ಗೆಲುವು ಸಾಧಿಸಿದ್ದರು. 1994ರಲ್ಲಿ ಕಾಂಗ್ರೆಸ್ ಸೇರಿದ್ದರು. ಅಂದಿನಿಂದ ಇಂದಿನ ವರೆಗೂ ಪಕ್ಷಕ್ಕಾಗಿ ದುಡಿದಿದ್ದರು.
1983, 1985ರಲ್ಲಿ ಜನತಾ ಪಕ್ಷದಿಂದ, 1994, 1999, 2013ರಲ್ಲಿ ಕಾಂಗ್ರೆಸ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಗೆಲುವು ಸಾಧಿಸಿದ್ದರು. ದೇವರಾಜ ಅರಸ, ಎಸ್.ಎಂ ಕೃಷ್ಣ ಹಾಗೂ ಎಸ್ ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು.