ಅಡುಗೆ ಅನಿಲ ಸಿಲಿಂಡರ್ ಖಾಲಿಯಾಗಿದ್ದರಿಂದ ಬೇರೊಂದು ಸಿಲಿಂಡರ್‌ಗೆ ಪೈಪ್ ಕನೆಕ್ಷನ್ ಕೊಡುವಾಗ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ನಾಲ್ವರ ಸ್ಥಿತಿ ಚಿಂತಜನಕವಾಗಿದ್ದು, 9 ಜನರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶುಕ್ರವಾರ ಕಲಬುರಗಿಯಲ್ಲಿ ನಡೆದಿದೆ.
ನಗರದ ಶ್ರೀ ಶರಣಬಸವೇಶ್ವರ ಕೆರೆ ಬಳಿಯ ಸಪ್ತಗಿರಿ ಹೊಟೇಲ್‌ನಲ್ಲಿ ಬೆಳಿಗ್ಗೆ 6.15ರ ಸುಮಾರಿಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ, ನೆಲ ಮಹಡಿಯ ಅಡುಗೆ ಕೋಣೆಯಲ್ಲಿ ಸಂಭವಿಸಿದ ಸ್ಪೋಟದ ತೀವ್ರತೆಗೆ ಹೊಟೇಲ್ ಇಡೀ ಕಟ್ಟಡ ಬಾಗಿಲು ಕಿಟಕಿಗಳು ಹೊಡೆದು ನುಚ್ಚು ನೂರಾಗಿವೆ.
ಘಟನೆ ನಡೆದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಗ್ರಾಹಕರು ಇಲ್ಲದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ ಪೊಲೀಸ್ ಕಮೀಷನರ್ ಆರ್. ಚೇತನ್‌ಕುಮಾರ್ ಎಸಿಪಿ ಕನ್ನಿಕಾ ಶಿಖಿವಾಲಾ ಪರಿಶೀಲನೆ ನಡೆಸಿದ್ದಾರೆ.