ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಜುಬ್ಬಲ್‌ನ ಚೋರಿ ಕೆಂಚಿ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದರೆ ಮೂವರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ.
ಹೆಚ್‌ಆರ್‌ಟಿಸಿ (ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆ) ಬಸ್ ಅಪಘಾತವಾಗಿದ್ದು ಚಾಲಕ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಏಳು ಮಂದಿಗೆ ಗಾಯವಾಗಿದ್ದು, ಈ ಪೈಕಿ ಮೂವರಿಗೆ ಗಂಭೀರ ಗಾಯಗಳಾಗಿದೆ.
ಇದನ್ನು ಓದಿದ್ದೀರಾ? ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ: ಬಕ್ರೀದ್ ಸಂಭ್ರಮಾಚರಣೆ ಮರೆತು ಪ್ರಯಾಣಿಕರ ರಕ್ಷಣೆಗಿಳಿದ ಮುಸ್ಲಿಮರು
ಮೃತರಲ್ಲಿ ಬಸ್ಸಿನ ಚಾಲಕ ಮತ್ತು ಕಂಡಕ್ಟರ್, ಧನ್ಸಾರ್ ಗ್ರಾಮದ ಮಹಿಳೆ ಮತ್ತು ನೇಪಾಳಿ ಪ್ರಜೆ ಕೂಡಾ ಸೇರಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ರೋಹ್ರು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ.
Himachal Pradesh: Four people, including the driver, died when an HRTC (Himachal Road Transport Corporation) bus met with a road accident in Chori Kenchi area of Jubbal in Shimla district. Seven people injured in the incident.
(Pic 1: HRTC; pics 2-3: Himachal Pradesh Police) pic.twitter.com/lDFO2Ezs17
— ANI (@ANI) June 21, 2024
ಬೆಳಗ್ಗೆ ಸುಮಾರು 6 ಗಂಟೆಗೆ ಅಪಘಾತ ಸಂಭವಿಸಿದೆ. ಚಾಲಕ ಮತ್ತು ಕಂಡಕ್ಟರ್ ಸೇರಿದಂತೆ ಒಟ್ಟು ಏಳು ಜನರು ಪ್ರಯಾಣಿಸುತ್ತಿದ್ದ ಬಸ್ ಗುಡ್ಡದಿಂದ ಉರುಳಿ ಕೆಳಗಿರುವ ರಸ್ತೆಗೆ ಬಿದ್ದಿದೆ.
ಪೊಲೀಸರು ಮತ್ತು ರೋಹ್ರು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸೇರಿದಂತೆ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.