ಚನ್ನಪಟ್ಟಣ ಉಪಚುನಾವಣೆ | ಜೆಡಿಎಸ್ ಜೊತೆ ಚರ್ಚಿಸಿ ಅಭ್ಯರ್ಥಿ ಆಯ್ಕೆ: ಬಿ ವೈ ವಿಜಯೇಂದ್ರ

Date:

Advertisements

ಚನ್ನಪಟ್ಟಣ ಕ್ಷೇತ್ರದಲ್ಲಿ ಶಾಸಕರಾಗಿ ಕುಮಾರಸ್ವಾಮಿ ಅಭಿವೃದ್ಧಿ ಸೇವೆ ಮಾಡಿದ್ದಾರೆ. ಅವರು ಸಂಸದರಾಗಿ ದೆಹಲಿಗೆ ಹೋದ ಕಾರಣ ಉಪ ಚುನಾವಣೆ ನಡೆಯುತ್ತಿದೆ. ನಮ್ಮ ಅಭ್ಯರ್ಥಿ ಯಾರೆಂಬ ಬಗ್ಗೆ ನಾವು ಮತ್ತು ಜೆಡಿಎಸ್ ಪಕ್ಷದವರು ಜೊತೆಗೂಡಿ ಚರ್ಚಿಸಿ ತೀರ್ಮಾನ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶುಕ್ರವಾರ ವಿಶ್ವ ಯೋಗ ದಿನಾಚರಣೆಯ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣೆ ಸಂಬಂಧ ಡಿ ಕೆ ಶಿವಕುಮಾರ್ ಅವರ ಹೇಳಿಕೆ ಕುರಿತು ಪ್ರಶ್ನಿಸಿದಾಗ, “ಡಿ ಕೆ ಶಿವಕುಮಾರ್ ಅವರು ಅವರ ಪಕ್ಷದಿಂದ ಶಾಸಕರಾಗಿದ್ದರೂ ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಆದರೆ, ಜನರ ಮನದಾಳದಲ್ಲಿ ಏನಿದೆ ಎಂಬುದು ನಿಗೂಢವಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸಲು ಅಸಾಧ್ಯ ಎಂದು ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಅಂದುಕೊಂಡಿದ್ದರು. ಆದರೆ, ಮತದಾರರ ತೀರ್ಪನ್ನು ತಾವೆಲ್ಲರೂ ನೋಡಿದ್ದೀರಿ” ಎಂದರು.

Advertisements

“ನಾಳೆ (ಜೂನ್ 22) ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ (ಪ್ಯಾಲೇಸ್ ಗ್ರೌಂಡ್) ರಾಜ್ಯದ 19 ಜನ ಎನ್‍ಡಿಎ ಸಂಸದರ ಸನ್ಮಾನ, ರಾಜ್ಯದ ಕೇಂದ್ರ ಸಚಿವರ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ” ಎಂದು ತಿಳಿಸಿದರು.

“ರಾಜ್ಯದಿಂದ ದೆಹಲಿಗೆ ಹೋಗಿ ದೇಶ- ರಾಜ್ಯದ ಸೇವೆ ಮಾಡುತ್ತಿರುವ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿರುವ ಕೇಂದ್ರದ ಸಚಿವರನ್ನೂ ಅಭಿನಂದಿಸಲಾಗುವುದು. ಈ ಕಾರ್ಯಕ್ರಮದಲ್ಲಿ ನಮ್ಮೆಲ್ಲ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯದ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ” ಎಂದು ವಿವರಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X