ದರ್ಶನ್‌ ಪ್ರಕರಣ | ಪಕ್ಷದ ಆಧಾರದ ಮೇಲಲ್ಲ, ತಪ್ಪಿನ ಆಧಾರದ ಮೇಲೆ ತನಿಖೆ: ಗೃಹ ಸಚಿವ ಪರಮೇಶ್ವರ್

Date:

Advertisements

“ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ‌ ಪ್ರಕರಣದ ತನಿಖೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ. ಪ್ರಕರಣದ ತಪ್ಪಿತಸ್ಥರು ಯಾವುದೇ ಪಕ್ಷದಲ್ಲಿದ್ದರು ತಪ್ಪಿತಸ್ಥರೇ ಆಗಿರುತ್ತಾರೆ” ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರೋಪಿಗಳು ಬೇರೆ ಪಕ್ಷದಲ್ಲಿದ್ದಾರೆ ಎಂಬುದನ್ನು ಮುಖ್ಯವಾಗಿ ತೆಗೆದುಕೊಳ್ಳುವುದಿಲ್ಲ. ಏನು ತಪ್ಪು ಮಾಡಿದ್ದಾರೆ ಎಂಬ ಆಧಾರದ ಮೇಲೆ ತನಿಖೆ, ವಿಚಾರಣೆ ನಡೆಯುತ್ತದೆ” ಎಂದು ತಿಳಿಸಿದರು.

“ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ನನ್ನು ವಿಚಾರಣೆ ನಡೆಸಲು ಇನ್ನೊಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ‌ ಪೊಲೀಸರು ಕೇಳಿದ್ದರು. ಆದರೆ ಎರಡು ದಿನ ಕಸ್ಟಡಿಗೆ ನೀಡಿದೆ. ಎರಡು ದಿನದ ಬಳಿಕ ವಿಚಾರಣೆ ಮುಗಿದರೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಾರೆ” ಎಂದರು‌.

Advertisements

ರೇಣುಕಸ್ವಾಮಿ ಪ್ರಕರಣದ ಕೊಲೆ ಆರೋಪ ಹೊತ್ತಿರುವ ನಟ ದರ್ಶನ್ ವಿಚಾರದಲ್ಲಿ ಯಾರೂ ನನ್ನ ಬಳಿ ಬರಬೇಡಿ ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ‌ ಎಂಬುದರ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನಮ್ಮ ಅಧಿಕಾರಿಗಳು ಮಾಹಿತಿ ನೀಡಲು ಹೋಗುವುದನ್ನು ಹೊರತುಪಡಿಸಿ, ಯಾರೂ ಹೋಗಲ್ಲ. ಅದರ ಅವಶ್ಯಕತೆ ಯಾರಿಗೂ ಇಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾರೂ ನನ್ನ ಬಳಿ ಬಂದಿಲ್ಲ‌” ಎಂದು ಸ್ಪಷ್ಟಪಡಿಸಿದರು.

ಜೈಲಿನಲ್ಲಿ ದುಡ್ಡು ಎಲ್ಲ ಸೌಲಭ್ಯಗಳು ಸಿಗುತ್ತವೆ. ನಟ ದರ್ಶನ ಜೈಲಿಗೆ ಬೇರೆ ರೀತಿಯಲ್ಲಿ ಟ್ರೀಟ್ ಮಾಡಲಾಗುತ್ತದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, “ಕೆಲವು ಸಂದರ್ಭದಲ್ಲಿ ಸತ್ಯ ಇರಬಹುದು. ಜೈಲುಗಳ ಮೇಲೆ ದಾಳಿ ನಡೆದಾಗ ಫೋನ್ ಸೇರಿದಂತೆ ಬೇರೆ ಬೇರೆ ವಸ್ತುಗಳು ಸಿಕ್ಕಿವೆ. ಅಧಿಕಾರಿಗಳ ಕಣ್ತಪ್ಪಿಸಿ ನಡೆದಿರುತ್ತದೆ. ಜೈಲ್ ಅಧಿಕಾರಿಗಳು ನಿಗಾವಹಿಸುತ್ತಾರೆ. ಇಂತಹ ಘಟನೆಗಳಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿರುತ್ತದೆ‌” ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರ ವಿರುದ್ಧ ಎಕ್ಸ್‌ (ಟ್ವೀಟರ್) ಖಾತೆಯಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ವ್ಯಕ್ತಿಗೆ ನೋಟಿಸ್ ನೀಡಲು ತೆರಳಿದ್ದ ಹೈಗ್ರೌಂಡ್ ಠಾಣೆ ಪೊಲೀಸರಿಗೆ ಅಡ್ಡಿಪಡಿಸಿದ ವಿಚಾರದ ಕುರಿತು ಪ್ರತಿಕ್ರಿಯಿಸಿ, “ಉತ್ತರ ಪ್ರದೇಶದ ನೋಯ್ಡಾಗೆ ಮಫ್ತಿಯಲ್ಲಿ ಹೋಗಿದ್ದರು. ಅಲ್ಲಿನ ಪೊಲೀಸರಿಗೆ ಮುಂಚಿತವಾಗಿ ತಿಳಿಸಬೇಕಿತ್ತು. ಅಲ್ಲಿಗೆ ಹೋದ ನಂತರ ತಿಳಿಸಿದ್ದಾರೆ. ಅಲ್ಲಿನ ಪೊಲೀಸರ ಸಹಾಯ ಪಡೆದು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗದೇ ಇದ್ದರೆ, ವಾರಂಟ್ ಜಾರಿ ಮಾಡಿ ಬಂಧಿಸುತ್ತಾರೆ‌” ಎಂದರು.

ಕರ್ನಾಟಕ ಸೇರಿದಂತೆ ಎಂಟು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ಕುರಿತ ವರದಿಗೆ ಸಮಿತಿ ರಚನೆಯ ಕುರಿತು ಮಾತನಾಡಿ, “ಕರ್ನಾಟಕದ ಬಗ್ಗೆ ಎಐಸಿಸಿ ಮಟ್ಟದಲ್ಲಿ ಬೇರೆಯೇ ನಿರೀಕ್ಷೆ ಇತ್ತು. 15ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಪಕ್ಷದ ಅಧ್ಯಕ್ಷರು ಹಾಗೂ ಸಿಎಂ ಅವರು ಹೈಕಮಾಂಡ್‌ಗೆ ತಿಳಿಸಿದ್ದರು. ಅದು ಆಗಲಿಲ್ಲ. ಯಾವ ಕಾರಣಕ್ಕಾಗಿ ಹೀಗಾಗಿದೆ. ನಮ್ಮ ಸರ್ಕಾರ ಇದ್ದಾಗಿಯೂ ಇಷ್ಟು ಸ್ಥಾನ ಕಡಿಮೆಯಾಗಿದೆಯಲ್ಲ ಎಂದು ನಿಖರವಾದ ಕಾರಣವನ್ನು ಕಂಡುಕೊಳ್ಳಬೇಕಿದೆ. ಫ್ಯಾಕ್ಟ್ ಫೈಂಡಿಂಗ್ ಆಧಾರದ ಮೇಲೆ ಕ್ರಮದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು.‌

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X