ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ಮೊತ್ತ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Date:

Advertisements

ಅಂಗನವಾಡಿ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಯಾಗಿದ್ದ ಗ್ರಾಚ್ಯುಟಿ ಮೊತ್ತವನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಸುಮಾರು 2,537 ಕಾರ್ಯಕರ್ತೆಯರಿಗೆ ಆರ್ಥಿಕವಾಗಿ‌ ನೆರವಾಗಲಿದೆ. ಇದಕ್ಕಾಗಿ 29.91ಕೋಟಿ ರೂಪಾಯಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು.

ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆ ಜಾರಿಯಲ್ಲಿ ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ, ಸಂಬಂಧಪಟ್ಟ ಅಧಿಕಾರಿಗಳೇ ನೇರಹೊಣೆ ವಹಿಸಬೇಕಾಗುತ್ತದೆ. ಜೊತೆಗೆ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರದಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು” ಎಂದು ಎಚ್ಚರಿಕೆ ನೀಡಿದರು.

“ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸಲಾಗುತ್ತಿರುವ ಎಂಎಸ್ಪಿಸಿ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ, ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಬೇಕು. ಪೋಷಣ್ ಯೋಜನೆಯಡಿ ಹೆಚ್ಚು ಮಕ್ಕಳನ್ನು ನೋಂದಾಯಿಸಲು ತ್ವರಿತ ಕ್ರಮಕೈಗೊಳ್ಳಬೇಕು” ಎಂದು ಸಚಿವರು ಸೂಚಿಸಿದರು.

Advertisements

“ಮಳೆಗಾಲದ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡಬೇಕು. ಟಿಸಿ, ಮರ, ಗಿಡಗಳಿದ್ದರೆ ತೆರವುಗೊಳಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಶಿಶು ಸಂಯೋಜನಾಧಿಕಾರಿಗಳು (ಸಿಡಿಪಿಒ), ಪರಿವೀಕ್ಷಣಾ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು” ಎಂದು ಹೇಳಿದರು.

ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

“ಗ್ರಾಮಾಂತರ ಭಾಗದಲ್ಲಿ ಆಗುತ್ತಿರುವ ಬಾಲ್ಯವಿವಾಹ ತಡೆಗಟ್ಟಲು ತೆಗೆದುಕೊಂಡಿರುವ‌ ಕಾರ್ಯಕ್ರಮಗಳ ಮಾಹಿತಿ ಪಡೆದ ಸಚಿವರು, ಇನ್ಮುಂದೆ ರಾಜ್ಯದಲ್ಲಿ ಬಾಲ್ಯ ವಿವಾಹ ಆಗದಂತೆ ಎಚ್ಚರಿಕೆ ವಹಿಸಬೇಕು” ಎಂದರು.

ಈ ವೇಳೆ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ಬಿ.ಎಚ್.ನಿಶ್ಚಲ್‌ ಸೇರಿದಂತೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಸಭೆಯಲ್ಲಿ ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X