ಜಾಹೀರಾತು ನಿಯಮ ತಿದ್ದುಪಡಿ | ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗೆ ಬರಲಿದೆ ಹೊಸ ನೀತಿ : ಡಿಸಿಎಂ ಡಿಕೆಶಿ

Date:

Advertisements

ಜಾಹೀರಾತು ನಿಯಮ ತಿದ್ದುಪಡಿ ಮಾಡಿ ಹೊಸ ಜಾಹೀರಾತು ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ತಿದ್ದುಪಡಿ ನೀತಿ ಕರಡನ್ನು ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗಾಗಿ ಪ್ರಕಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬಿಬಿಎಂಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, “ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು. ಕರಡು ಪ್ರತಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣಗಳು ಇದ್ದ ಕಾರಣಕ್ಕೆ ಕಳೆದ ಒಂದು ವರ್ಷದಿಂದ ಜಾಹೀರಾತು ನೀತಿ ಬಾಕಿ ಉಳಿದಿತ್ತು. ಪ್ರಸ್ತುತ ಸಂಘ, ಸಂಸ್ಥೆಗಳ ಜೊತೆ ಚರ್ಚೆ ನಡೆಸಲಾಗಿದೆ” ಎಂದು ತಿಳಿಸಿದ್ದಾರೆ.

“60 ಅಡಿಗಿಂತ ಹೆಚ್ಚು ಅಗಲ ಇರುವ ರಸ್ತೆಗಳಲ್ಲಿ ‘ಗ್ರೂಪ್ ಪ್ಯಾಕೇಜ್’ ತಯಾರಿಸಿ ಅವಕಾಶ ನೀಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಮೇಲೆ ಜಾಹಿರಾತು ನೀಡಲು ಅವಕಾಶ ನೀಡಲಾಗುವುದು. ಬಿಬಿಎಂಪಿಗೆ ತೆರಿಗೆ ನೀಡಿ ಖಾಸಗಿ ಕಟ್ಟಡಗಳು ಬಾಡಿಗೆ ನೀಡಬಹುದು” ಎಂದಿದ್ದಾರೆ.

Advertisements

“ಕಟ್ಟಡಗಳ ವಿಸ್ತೀರ್ಣ, ಎತ್ತರಕ್ಕೆ ತಕ್ಕಂತೆ ಯೂನಿಫಾರ್ಮಿಟಿ ತರಲಾಗುವುದು. ಮನಬಂದಂತೆ ಜಾಹೀರಾತು ಹಾಕಲು ಅವಕಾಶವಿಲ್ಲ. ಫಲಕಗಳನ್ನು ಮಾಡಲು ಯಾವ ಗುಣಮಟ್ಟದ ವಸ್ತು ಬಳಸಬೇಕು ಎಂದು ನಂತರ ತಿಳಿಸಲಾಗುವುದು. ಸರ್ಕಾರದಲ್ಲಿ ಇರುವ ಮೀಸಲಾತಿಗೆ ಅನುಗುಣವಾಗಿ ನೀಡಲಾಗುವುದು. ಪಿಪಿಪಿ ಮಾದರಿಯಲ್ಲಿ ಹಿಂದಿನ ಸರ್ಕಾರ ಒಂದಷ್ಟು ಅವಕಾಶ ನೀಡಿದ್ದು ಕಾನೂನು ಪ್ರಕಾರವಾಗಿ ಇದ್ದರೆ ರಕ್ಷಣೆ ಮಾಡಲಾಗುವುದು. ಏನೂ ಮಾಡದೆ ಇದ್ದವರನ್ನು ಕಾನೂನಿನ ಪ್ರಕಾರ ವಜಾ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

“60 ಅಡಿಗಿಂತ ರಸ್ತೆ ಕಡಿಮೆ ಇದ್ದು, ಕಮರ್ಷಿಯಲ್ ವಲಯ ಎಂದು ಗುರುತಿಸಿದ್ದರೆ, ಅಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ ನೀಡಲಾಗುವುದು. ಜನಸಾಂದ್ರತೆ ಹಾಗೂ ವಹಿವಾಟು ಹೆಚ್ಚಿರುವ ಕಡೆ ಅವಕಾಶ ನೀಡಲಾಗುವುದು. ಸರ್ಕಾರಕ್ಕೆ ಹಣ ಬಾಕಿ ಉಳಿಸಿಕೊಂಡಿರುವ, ದಾವೆ ಹೂಡಿರುವವರಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ನಾವು ಹೇಗೆ ಚುನಾವಣೆಗೆ ನಿಲ್ಲುವಾಗ ಯಾವುದೇ ಬಾಕಿಗಳನ್ನು ಉಳಿಸಿಕೊಳ್ಳದೆ ಇರುತ್ತೇವೆಯೆ, ಅದೇ ರೀತಿ ಇಲ್ಲಿ ಭಾಗವಹಿಸುವವರು ಎಲ್ಲ ಬಾಕಿಗಳನ್ನು ಕಟ್ಟಬೇಕು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗಾಂಧಿನಗರದಲ್ಲಿ 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್

“ನ್ಯಾಯಾಲಯದಲ್ಲಿರುವ ಪ್ರಕರಣಗಳಿಗೆ ನಾವು ಏನು ಮಾಡಲು ಆಗುವುದಿಲ್ಲ. ಅಲ್ಲಿ ತೀರ್ಮಾನವಾದ ನಂತರ ಬಗೆಹರಿಸಬಹುದು. ಜತೆಗೆ ನ್ಯಾಯಾಲಯವು ಒಂದಷ್ಟು ಸೂಚನೆಗಳನ್ನು ನೀಡಿತ್ತು. ಅದನ್ನು ಗಣನೆಗೆ ತೆಗೆದುಕೊಂಡು ನಿಯಮಗಳನ್ನು ರೂಪಿಸಲಾಗಿದೆ. ಮೆಟ್ರೋ ಒಳಗೆ ಆ ನಿಗಮ ನೋಡಿಕೊಳ್ಳುತ್ತದೆ. ಹೊರಗಡೆ ಪಾಲಿಕೆ ಮತ್ತು ಮೆಟ್ರೋ ಸಹಭಾಗಿತ್ವದಲ್ಲಿ ಪ್ರತ್ಯೇಕ ಪ್ಯಾಕೇಜ್ ಘೋಷಣೆ ಮಾಡಲಾಗುವುದು” ಎಂದು ಹೇಳಿದ್ದಾರೆ.

“ಸುಮಾರು 600 ಕೋಟಿ ಜಾಹೀರಾತು ಹಣ ಬಾಕಿ ಇದೆ. ಎಲ್ಲವನ್ನು ವಸೂಲಿ ಮಾಡಲಾಗುವುದು, ಬಾಕಿ ಉಳಿಸಿಕೊಂಡಿರುವವರಿಗೆ ಭಾಗವಹಿಸಲು ಅವಕಾಶ ನೀಡುವುದಿಲ್ಲ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X