ಅಯೋಧ್ಯೆ ರಾಮಮಂದಿರದ ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಹಿರಿಯ ಅರ್ಚಕ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಶನಿವಾರ ನಿಧನರಾಗಿದ್ದಾರೆ.
ಕಾಶಿಯ ಪ್ರಧಾನ ಅರ್ಚಕರೂ ಆಗಿದ್ದ ದೀಕ್ಷಿತ್ ಅವರು, ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಾಶಿಯ ಪ್ರಖ್ಯಾತ ವೈದಿಕ ಶ್ರೌತ-ಸ್ಮಾರ್ತ ಸಂಸ್ಕಾರ ತಜ್ಞ, ಸಾಂಗ್ವೇದ ವಿದ್ಯಾಲಯದ ಯಜುರ್ವೇದ ಶಿಕ್ಷಕ ಕೂಡ ಆಗಿದ್ದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.
ದೀಕ್ಷಿತ್ ಅವರ ನೇತೃತ್ವದಲ್ಲಿ ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರತಿಷ್ಠಾಪಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿವರೇ ಈ ವೇಳೆ ಮುಖ್ಯ ಪಾತ್ರ ವಹಿಸಿದ್ದರು. ರಾಮಮಂದಿರದಲ್ಲಿ ಎಲ್ಲ ಪೂಜೆಗಳು ನೆರವೇರಿದ್ದವು. 2021ರ ಕಾಶಿ ವಿಶ್ವನಾಥ ಧಾಮದ ಉದ್ಘಾಟನೆಯ ಪೂಜೆಯಲ್ಲಿ ಅವರು ಪಾಲ್ಗೊಂಡಿದ್ದರು.
“ಆಚಾರ್ಯ ಶ್ರೀ ಲಕ್ಷ್ಮೀಕಾಂತ ದೀಕ್ಷಿತ್ ಅವರ ನಿಧನ ಅಧ್ಯಾತ್ಮ ಮತ್ತು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಸಂಸ್ಕೃತ ಭಾಷೆ ಮತ್ತು ಭಾರತೀಯ ಸಂಸ್ಕೃತಿಗೆ ಅವರು ಮಾಡಿದ ಸೇವೆಗಾಗಿ ಅವರು ಯಾವಾಗಲೂ ಸ್ಮರಣೀಯರಾಗಿದ್ದಾರೆ” ಎಂದು ಕಾಶಿಯ ವಿದ್ವಾಂಸ, ಶ್ರೀರಾಮ ಜನ್ಮಭೂಮಿ ಪ್ರಾಣಪ್ರತಿಷ್ಠೆಯ ಪ್ರಧಾನ ಅರ್ಚಕರೂ ಆದ ವೇದಮೂರ್ತಿ ಅವರು ಸ್ಮರಿಸಿದ್ದಾರೆ.
देश के मूर्धन्य विद्वान और साङ्गवेद विद्यालय के यजुर्वेदाध्यापक लक्ष्मीकान्त दीक्षित जी के निधन का दुःखद समाचार मिला। दीक्षित जी काशी की विद्वत् परंपरा के यशपुरुष थे। काशी विश्वनाथ धाम और राम मंदिर के लोकार्पण पर्व पर मुझे उनका सान्निध्य मिला। उनका निधन समाज के लिए अपूरणीय क्षति…
— Narendra Modi (@narendramodi) June 22, 2024
ಹಿರಿಯ ಅರ್ಚಕ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.
ಇದೇ ವರ್ಷದ ಜ.22 ರಂದು ಅಯೋಧ್ಯೆ ರಾಮಮಂದಿರದಲ್ಲಿ ಬಾಲಕರಾಮ ಪ್ರಾಣಪ್ರತಿಷ್ಠೆ ಸಮಾರಂಭ ಜರುಗಿತು. ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನಡೆದಿತ್ತು. ಆದರೆ ಇದು 2024ರ ಲೋಕಸಭಾ ಚುನಾವಣೆಯ ವೇಳೆ ಬಿಜೆಪಿಗೆ ಯಾವುದೇ ಲಾಭ ನೀಡಿರಲಿಲ್ಲ. ಅಯೋಧ್ಯೆ ಇರುವ ಫೈಝಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಬಿಜೆಪಿಯ ಸೋಲಿನಿಂದ ಸಂಘಪರಿವಾರ, ಬಲಪಂಥೀಯರ ಸಹಿತ ಬಿಜೆಪಿಯ ಬೆಂಬಲಿಗರು ಆಘಾತಕ್ಕೊಳಗಾಗಿದ್ದರು.
