ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ; ಕರಾವಳಿ ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

Date:

Advertisements

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಹುತೇಕ ಜಿಲ್ಲೆಗಳಲ್ಲಿ ಜೂ.23ರಿಂದ ಜೋರು ಮಳೆಯಾಗಲಿದೆ. ಹೀಗಾಗಿ, ಜೂನ್ 25ರ ವರೆಗೆ ಕರಾವಳಿ ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೆ, ಬೆಳಗಾವಿ, ಬೀದರ್, ಕಲಬುರಗಿ, ಮೈಸೂರಿನಲ್ಲೂ ಮಳೆ ಬೀಳಲಿದ್ದು ‘ಯೆಲ್ಲೋ ಅಲರ್ಟ್​’ ಘೋಷಿಸಲಾಗಿದೆ. ಮಲೆನಾಡು ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರಕ್ಕೆ ‘ಆರೆಂಜ್ ಅಲರ್ಟ್​’ ಘೋಷಿಸಲಾಗಿದೆ.

ಉಳಿದಂತೆ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ವಿಜಯನಗರದಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲೂ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ 5 ಸಾವಿರ ಗಡಿ ದಾಟಿದ ಡೆಂಗ್ಯೂ ಪ್ರಕರಣ

ಬೆಂಗಳೂರಿನ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಕೆಲೆವೆಡೆ ಸಾಧಾರಣ ಮಳೆಯಾಗಿದೆ. ಆದರೆ, ಜೂನ್ 23ರಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈ ಬಾರಿ ಬೇಗನೆ ಮುಂಗಾರು ಪ್ರವೇಶವಾಗಿದೆ. ಆದರೂ ಕೂಡ ಜೂನ್ ತಿಂಗಳಲ್ಲಿ ಮಳೆ ಕೊರತೆ ಕಾಡಲಿದೆ ಎಂದು ಇಲಾಖೆ ಸೂಚಿಸಿದೆ. ದೇಶದಲ್ಲಿ ಸರಾಸರಿ ಮಳೆ ಪ್ರಮಾಣದಲ್ಲಿ ಶೇಕಡಾ 20ರಷ್ಟು ಕೊರತೆಯಾಗಿದೆ. ಜೂ.1ರಿಂದ 18ರೊಳಗೆ 64.5 ಮಿ.ಮೀ ಮಳೆಯಾಗುವ ಮೂಲಕ ಶೇ.20ರಷ್ಟು ಕೊರತೆಯಾಗಿದೆ. ಉತ್ತರ ಭಾರತದ ಹಲವೆಡೆ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಆದರೆ, ದಕ್ಷಿಣ ಭಾರತದಲ್ಲಿ 106.6 ಮಿ.ಮೀ ಮಳೆಯಾಗುವ ಮೂಲಕ ಶೇ.16ರಷ್ಟು ಅಧಿಕ ಮಳೆಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X