ಪ್ರಧಾನಿ ಹುದ್ದೆಗೆ ರಾಜನಾಥ್‌ ಸಿಂಗ್‌ ಗಂಭೀರ ಅಭ್ಯರ್ಥಿ : ಸತ್ಯಪಾಲ್‌ ಮಲಿಕ್

Date:

  • ರಾಜಸ್ಥಾನದಲ್ಲಿ ಪುಲ್ವಾಮಾ ದಾಳಿ ಕುರಿತ ಪ್ರಶ್ನೆಗಳಿಗೆ ಮಲಿಕ್‌ ಉತ್ತರ
  • ಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಮಲಿಕ್‌ ಟೀಕಿಸಿದ್ದ ಅಮಿತ್‌ ಶಾ

ಪ್ರಧಾನಮಂತ್ರಿ ಹುದ್ದೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಗಂಭೀರ ಅಭ್ಯರ್ಥಿಯಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಹೇಳಿದ್ದಾರೆ.

ರಾಜಸ್ಥಾನದ ಸಿಕಾರ್‌ನಲ್ಲಿ ಕಾರ್ಯಕ್ರಮವೊಂದರ ನಂತರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

ಅಮಿತ್‌ ಶಾ ಅವರು ಪುಲ್ವಾಮಾ ದಾಳಿಗೆ ಸಂಬಂಧಿಸಿ ಮಾಡಿರುವ ಆರೋಪಕ್ಕೆ ಸತ್ಯಪಾಲ್‌ ಮಲಿಕ್‌ ಅವರು ಪ್ರತಿಕ್ರಿಯಿಸಿ, “ಪ್ರಧಾನಿ ಹುದ್ದೆಗೆ ರಾಜನಾಥ್‌ ಸಿಂಗ್‌ ಗಂಭೀರ ಅಭ್ಯರ್ಥಿಯಾಗಿದ್ದಾರೆ. ಅವರ ಹಣೆಬರಹದಲ್ಲಿ ಇದ್ದರೆ ಅವರು ಒಂದು ದಿನ ಪ್ರಧಾನಿ ಆಗಿಯೇ ಆಗುತ್ತಾರೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪುಲ್ವಾಮಾ ದಾಳಿ ಬಗ್ಗೆ ಅಮಿತ್‌ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ, “ರಾಜ್ಯಪಾಲ ಹುದ್ದೆ ತೊರೆದ ಬಳಿಕ ನಾನು ಪುಲ್ವಾಮಾ ದಾಳಿ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳುವುದು ತಪ್ಪು. ಆ ದಿನವೇ ನಾನು ದಾಳಿ ಬಗ್ಗೆ ಹೇಳಿದ್ದೇನೆ” ಎಂದು ಅಮಿತ್ ಶಾಗೆ ಮಲಿಕ್‌ ತಿರುಗೇಟು ನೀಡಿದ್ದಾರೆ.

“2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು. ಗುಪ್ತಚರ ವೈಫಲ್ಯ ಹಾಗೂ ಯೋಧರ ಸಂಚಾರಕ್ಕೆ ಹೆಲಿಕಾಪ್ಟರ್‌ ಒದಗಿಸಲು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಈ ಬಗ್ಗೆ ಮಾತನಾಡಬಾರದು ಎಂದು ನನಗೆ ಪ್ರಧಾನಿ ಮೋದಿ ಹಾಗೂ ಭದ್ರತಾ ಸಲಹೆಗಾರ ಅಜಿತ್‌ ಧೋಬಾಲ್‌ ನಿರ್ದೇಶಿಸಿದ್ದರು” ಎಂದು ಮಲಿಕ್‌ ದೂರಿದ್ದರು.

ಪುಲ್ವಾಮಾ ಘಟನೆ ನಡೆದ ಸಂದರ್ಭದಲ್ಲಿ ಮಲಿಕ್‌ ಅವರು ಜಮ್ಮು-ಕಾಶ್ಮೀರದ ರಾಜ್ಯಪಾಲರಾಗಿದ್ದರು.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಭವಿಷ್ಯವೇನು? ಎಂಬ ಪ್ರಶ್ನೆಗೆ, ”ನಾನು ಅವರಿಗೆ ಶುಭ ಹಾರೈಸುತ್ತೇನೆ. ಆದರೆ ರಾಜಕೀಯ ಮತ್ತು ಚುನಾವಣೆಯಲ್ಲಿ ಏನಾಗುತ್ತದೆ ಎಂದು ಯಾರಿಗೂ ತಿಳಿದಿಲ್ಲ. ಪ್ರಸ್ತುತ ಪರಿಸ್ಥಿತಿ ಅವರಿಗೆ ಕಷ್ಟಕರವಾಗಿದೆ. ಅವರು ಬೇರೆ ಏನಾದರೂ ಪ್ರಯತ್ನಗಳನ್ನು ಮಾಡಬಹುದು” ಎಂದು ಮಲಿಕ್ ಹೇಳಿದರು.

ಗೌತಮ್‌ ಅದಾನಿ ಪ್ರಕರಣದಲ್ಲಿ ಪ್ರಧಾನಿ ಮೋದಿಯವರ ಮೌನ ಅವರಿಗೆ ಹಾನಿಯುಂಟು ಮಾಡಲಿದೆ. ಇದರ ಜತೆಗೆ ಪುಲ್ವಾಮಾ ದಾಳಿಯ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡಬೇಕು ಎಂದು ಮಲಿಕ್‌ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗೆ ವಿಪಕ್ಷಗಳ ಮೈತ್ರಿಗೆ ಬೆಂಬಲ; ಅಖಿಲೇಶ್ ಯಾದವ್

ಈ ವರ್ಷಾಂತ್ಯದಲ್ಲಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಬಿಜೆಪಿಯು ವಸುಂಧರಾ ರಾಜೇ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿದರೆ, ಬಿಜೆಪಿಯ ಗೆಲುವಿನ ಸಾಧ್ಯತೆಗಳು ಹೆಚ್ಚಾಗುತ್ತವೆ ಎಂದು ಮಲಿಕ್ ಹೇಳಿದ್ದಾರೆ.

“ಮುಚ್ಚಿ ಹಾಕುವಂತಹದ್ದು ಬಿಜೆಪಿ ಏನೂ ಮಾಡಿಲ್ಲ. ಯಾರಾದರೂ ನಮ್ಮ ಜತೆ ಸಂಬಂಧ ಕಡಿದುಕೊಂಡ ಬಳಿಕ ಆರೋಪ ಮಾಡುತ್ತಿದ್ದರೆ, ಜನ ಹಾಗೂ ಮಾಧ್ಯಮ ಅದರ ಬಗ್ಗೆ ಯೋಚಿಸಬೇಕು” ಎಂದು ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಅಮಿತ್‌ ಶಾ ಹೇಳಿದ್ದರು.

ಪುಲ್ವಾಮ ದಾಳಿ ನಡೆದಾಗ ಮತ್ತು 370ನೇ ವಿಧಿಯನ್ನು ತೆರವುಗೊಳಿಸಿದ ಸಂದರ್ಭದಲ್ಲಿ ಮಲಿಕ್ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...