ಯುವತಿ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ನಾಯಕ ಹರತಾಳು ಹಾಲಪ್ಪ ನಿಕಟವರ್ತಿ ಅರುಣ್ ಕುಗ್ವೆ ಬಂಧನ

Date:

Advertisements

ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ‌ ಸಂಬಂಧ‌ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ‌ಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಶಿವಮೊಗ್ಗ ಪೊಲೀಸರು ಮಾಜಿ ಸಚಿವ,‌ ಬಿಜೆಪಿ ಮುಖಂಡ ಹರತಾಳು ಹಾಲಪ್ಪ ಅವರ ಬಲಗೈ ಬಂಟ ಅರುಣ್ ಕುಗ್ವೆ ಎಂಬಾತನನ್ನು ಇಂದು ಬೆಳಿಗ್ಗೆ ಬಂಧಿಸಿದ್ದಾರೆ.

ಯುವತಿ ಶಿವಮೊಗ್ಗ ನಗರದ ಮಹಿಳಾ ಠಾಣೆಯಲ್ಲಿ ದಾಖಲಿಸಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಅರುಣ್ ಕುಗ್ವೆಯನ್ನು ಅವನ ಮನೆಯಿಂದ ಬಂಧಿಸಿ ಪೊಲೀಸರು ಕರೆದೊಯ್ದಿದ್ದು ಎಫ್‌ಐಆರ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ ಪ್ರಕರಣಗಳಲ್ಲಿ ಬಂಧಿಸಲಾಗಿದೆ.

ಶಿವಮೊಗ್ಗ ನಿವಾಸಿ ಯುವತಿಯೊಂದಿಗೆ ಉದ್ಯಮಿ ಮತ್ತು ರಾಜಕಾರಣಿ ಎಂದು ಹೇಳಿಕೊಂಡಿದ್ದ ಅರುಣ್ ಕುಮಾರ್ ತನ್ನೊಂದಿಗೆ ಸಂಪರ್ಕ ಬೆಳೆಸಿದ ನಂತರದ ವಿವಿಧ ಆಮಿಷ ತೋರಿಸಿ ಮದುವೆಯಾಗುತ್ತೇನೆ ಎಂದು ಹೇಳುತ್ತಾ, ಬಲಾತ್ಕಾರ ಮಾಡಿರುತ್ತಾನೆ. ಜೋಗ, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ತನ್ನೊಂದಿಗೆ ಆಮಿಷ ತೋರಿಸಿ ದೈಹಿಕ ಸಂಬಂಧ ಬೆಳೆಸಿರುತ್ತಾನೆ.

Advertisements

ಈ ಸುದ್ದಿ ಓದಿದ್ದೀರಾ? ಯುವಕನಿಗೆ ಲೈಂಗಿಕ ದೌರ್ಜನ್ಯ ಆರೋಪ : ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್

ಬಲಾತ್ಕಾರವಾಗಿ ವಿಡಿಯೋ ಚಿತ್ರೀಕರಣ, ಫೋಟೋ ತೆಗೆದುಕೊಂಡಿದ್ದಾನೆ.‌ ರೌಡಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಅರುಣ್ ತನ್ನ ಬೇಡಿಕೆಗೆ ಒಪ್ಪದಿದ್ದರೆ ಕೊಲೆ ಮಾಡಿ ಜೈಲಿಗೆ ಹೋಗುವ ಬೆದರಿಕೆ ಒಡ್ಡಿರುತ್ತಾನೆ. ಇತ್ತೀಚೆಗೆ ಬೇರೆ ಹುಡುಗಿಯರೊಂದಿಗೆ ಇದೇ ರೀತಿ ವರ್ತಿಸಿದ್ದು ಕಂಡು ಬಂದಾಗ ಆ ಬಗ್ಗೆ ಕೇಳಿದ್ದಕ್ಕೆ ಜೀವ ಬೆದರಿಕೆ ಒಡ್ಡಿರುತ್ತಾನೆ. ಈ ನಡುವೆ ಬೇರೊಬ್ಬ ಯುವತಿಯೊಂದಿಗೆ ಮದುವೆ ನಿಶ್ಚಯ ಮಾಡಿಕೊಂಡಿರುತ್ತಾನೆ. ಅದನ್ನ ಪ್ರಶ್ನಿಸಿದ್ದಕ್ಕೆ ಅವನ ಸೋದರ ಗಣೇಶ್ ಎಂಬುವವನು ನನಗೆ ಮತ್ತು ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಒಡ್ಡಿರುತ್ತಾನೆ ಎಂದು ಯುವತಿ ದೂರು ನೀಡಿರುತ್ತಾರೆ.‌

ಈ ಹಿನ್ನೆಲೆಯಲ್ಲಿ ಅರುಣ್ ಕುಗ್ವೆ ಮತ್ತು ಗಣೇಶ್ ಇಬ್ಬರ ಮೇಲೆ ಐಪಿಸಿ ಸೆಕ್ಷನ್ 354, 376 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಅರುಣ್ ಕುಗ್ವೆ ಮೇಲೆ ಈಗಾಗಲೇ ಹಲವಾರು ಪ್ರಕರಣಗಳು ದಾಖಲಾಗಿದ್ದು, ಗಡಿಪಾರು ಸೂಚನೆಯನ್ನೂ ಹಿಂದೆ ನೀಡಲಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಗಂಭೀರತೆಯನ್ನು ಆಧರಿಸಿ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಅರುಣ್ ಕುಗ್ವೆ ಜೊತೆಯಲ್ಲಿ ಎರಡನೇ ಆರೋಪಿಯಾಗಿ ಆತನ ಸೋದರ ಗಣೇಶ್ ಮೇಲೂ ಪ್ರಕರಣ ದಾಖಲಿಸಲಾಗಿದೆ.

ದೂರಿನ ಪ್ರತಿಗೆ ಕೆಳಗೆ ಕ್ಲಿಕ್ಕಿಸಿ:

Compliant Letter

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X