ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಭಾನುವಾರ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಆರು ಕೇಂದ್ರಗಳಲ್ಲಿ 1,563 ಅಭ್ಯರ್ಥಿಗಳಿಗೆ ಕೈಗೊಳ್ಳಲಾಗಿದ್ದ ನೀಟ್ – ಯುಜಿ ಮರುಪರೀಕ್ಷೆಯಲ್ಲಿ 813 ಅಭ್ಯರ್ಥಿಗಳು ಹಾಜರಾಗಿದ್ದರೆ, 750 ಅಭ್ಯರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ ಎಂದು ಎನ್‌ಟಿಎ ಪರೀಕ್ಷಾ ಮಂಡಳಿ ತಿಳಿಸಿದೆ.
ಇಂದು ನೀಟ್ – ಯುಜಿ ಮರುಪರೀಕ್ಷೆ ಪಡೆಯಲು ನಿರ್ಧರಿಸಲಾಗಿದ್ದ ಶೇಕಡಾ 48 ರಷ್ಟು ವಿದ್ಯಾರ್ಥಿಗಳು ಹಾಜರಾಗಲಿಲ್ಲ ಎಂದು ಎನ್‌ಟಿಎ ಹೇಳಿಕೆಯಲ್ಲಿ ತಿಳಿಸಿದೆ. ಎನ್‌ಟಿಎ ಛತ್ತೀಸ್‌ಗಢ, ಗುಜರಾತ್, ಹರಿಯಾಣ, ಮೇಘಾಲಯ ಮತ್ತು ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದಲ್ಲಿ ಏಳು ಪರೀಕ್ಷಾ ಕೇಂದ್ರಗಳನ್ನು ತೆರೆದಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತಿಗಳ ಸ್ವಾಭಿಮಾನ, ಸ್ವಾಯತ್ತತೆ ಮತ್ತು ಸಂಸ್ಕೃತಿ ಸಚಿವರ ತಿಪ್ಪೆ ಸಾರಿಸುವಿಕೆ
ಈ ನಡುವೆ ಮೇ 5 ರಂದು ಬಿಹಾರದ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಿದ್ದ 17 ನೀಟ್ ಯುಜಿ ಅಭ್ಯರ್ಥಿಗಳನ್ನು ಅವ್ಯವಹಾರ ಪತ್ತೆಯಾದ ನಂತರ ಡಿಬಾರ್ ಮಾಡಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ತಿಳಿಸಿದೆ.
ಮೇ 5 ರಂದು ನಡೆದ ನೀಟ್ ಯುಜಿ ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ ದಿನದಂದು ಮರುಪರೀಕ್ಷೆ ನಡೆಸಲಾಗಿತ್ತು. ಗುಜರಾತ್ ಮತ್ತು ಬಿಹಾರದಲ್ಲಿ ಪೊಲೀಸರು ದಾಖಲಿಸಿರುವ ಪ್ರಕರಣಗಳ ತನಿಖೆಯನ್ನು ಸಿಬಿಐ ವಹಿಸಿಕೊಳ್ಳಲಿದೆ.
