ಉಡುಪಿ | ಕನ್ನಡ ಮಾಧ್ಯಮದಲ್ಲಿ ಓದಿದವರು ಸರ್ವಾಂತರ್ಯಾಮಿಗಳಾಗಿದ್ದಾರೆ: ಡಾ ಅಶೋಕ್

Date:

Advertisements

ಕನ್ನಡ ಮಾಧ್ಯಮದಲ್ಲಿ ಓದುತ್ತಿರುವವರು ಕನ್ನಡ ಮಾಧ್ಯಮದವರು ಎನ್ನಲು ಯಾವುದೇ ಅಳುಕು ಬೇಡ. ಕನ್ನಡ ಮಾಧ್ಯಮದಲ್ಲಿ ಓದಿದವರು ಇಂದು ಸರ್ವಾಂತರ್ಯಾಮಿಯಾಗಿದ್ದಾರೆ ಎಂದು
ಉಡುಪಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ ಅಶೋಕ್ ಹೇಳಿದರು.

ಜಿಲ್ಲೆಯ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಯಶೋಮಾಧ್ಯಮ 2024ರ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ರಾಜ್ಯದ, ದೇಶದ ಮಾತ್ರವಲ್ಲ ಹೊರ ದೇಶಗಳಲ್ಲಿಯೂ ಉನ್ನತ ಹುದ್ದೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರು ಕೆಲಸ ಮಾಡುತ್ತಿದ್ದಾರೆ” ಎಂದರು.

Advertisements

“116 ವರ್ಷಗಳ ಇತಿಹಾಸವಿರುವ ಈ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತುಂಬಾ ಪುಣ್ಯವಂತರಾಗಿದ್ದಾರೆ. ಶಿಕ್ಷಕರು ಎಷ್ಟು ಹೊತ್ತು ಕೆಲಸ ಮಾಡಿದ್ದಾರೆ ಎಂಬುದು ಮುಖ್ಯವಲ್ಲ, ಎಷ್ಟು ಹೊತ್ತು ಗುಣಮಟ್ಟದ ಕೆಲಸ ಮಾಡಿದ್ದೀರಿ ಎಂಬುದು ಮುಖ್ಯವಾಗುತ್ತದೆ” ಎಂದು ಹೇಳಿದರು.

“ಉತ್ತಮ ಸಮಾಜ ನಿರ್ಮಾಣ ಹಾಗೂ ಭವ್ಯ ಭಾರತವನ್ನು ನಿರ್ಮಾಣ ಮಾಡುವ ಕೆಲಸ ಪೋಷಕರಿಗಿಂತ ಹೆಚ್ಚು ಶಿಕ್ಷಕರ ಜವಾಬ್ದಾರಿಯಾಗಿದೆ. ಯಾವುದೇ ಕೆಲಸ ಮಾಡುವಾಗ ಕ್ವಾಲಿಟಿ ಕೆಲಸ ಮಾಡಿರಿ, ರೈತಾಪಿ ಬಳಗದ ಅನ್ನ ತಿನ್ನುವ ನಾವು ರೈತಾಪಿ ವರ್ಗದವರ ಏಳಿಗೆಗಾಗಿ ಕೆಲಸ ಮಾಡಬೇಕು. ಹಾಗೆಯೇ 116 ವರ್ಷಗಳ ಇತಿಹಾಸದ ಈ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯು ಮುಂದಿನ ದಿನಗಳಲ್ಲಿ ಉತ್ತಮವಾದ ಮಾದರಿ ಪ್ರಾಥಮಿಕ ಶಾಲೆಯಾಗಲಿ” ಎಂದು ಹಾರೈಸಿದರು. ಹಾಗೆಯೇ ಸ್ಪಂದನ ಸೇವಾ ಸಂಸ್ಥೆಯ ಈ ಸಮಾಜಮುಖಿ ಕೆಲಸವನ್ನು ಶ್ಲಾಘಿಸಿದರು.

ಹಿರಿಯ ಪತ್ರಕರ್ತ ಜನಾರ್ಧನ್ ಕೊಡವೂರು ಅವರು ಮಾತನಾಡಿ, “ಸ್ಪಂದನ ಸೇವಾ ಸಂಸ್ಥೆಯು ಈ ಶಾಲೆಗೆ ಪ್ರತಿ ವರ್ಷ ನೋಟ್ ಪುಸ್ತಕಗಳನ್ನು ಉಚಿತವಾಗಿ ನೀಡುತ್ತಾ ಬಂದಿದೆ. ಅದರೊಂದಿಗೆ ಅಧ್ಯಕ್ಷ ವೆಂಕಟೇಶ್ ಪೈ ಅವರು ಸ್ವತಃ ಪತ್ರಕರ್ತರಾಗಿರುವುದರಿಂದ ಉಡುಪಿ ಜಿಲ್ಲೆಯ ಒಬ್ಬ ಪತ್ರಕರ್ತರನ್ನು ಗುರುತಿಸಿ ಯಶೋಮಾಧ್ಯಮ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದ್ದಾರೆ. ಹಾಗಾಗಿ ಈ ಬಾರಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರನ್ನು ಆಯ್ಕೆ ಮಾಡಿ ಅವರಿಗೆ ಯಶೋಮಾಧ್ಯಮ-2024 ಪ್ರಶಸ್ತಿ ನೀಡಿ ಗೌರವಿಸುತ್ತಿದ್ದಾರೆ” ಎಂದರು.

“ಸ್ಪಂದನಾ ಸೇವಾ ಸಂಸ್ಥೆಯ ಪದಾಧಿಕಾರಿಗಳಲ್ಲಿ ಅಧ್ಯಕ್ಷ ವೆಂಕಟೇಶ್ ಪೈ, ಕಾರ್ಯದರ್ಶಿ ಸಂತೋಷ್ ಕಾಮತ್, ಖಜಾಂಚಿ ರಜನಿ, ವಿ ಪೈ, ಸಹ ಕಾರ್ಯದರ್ಶಿ ಶಿವಾನಂದ ಕಾಮತ್ ನಾಲ್ವರೂ ಇದೇ ಶಾಲೆಯಲ್ಲಿ ಓದಿದ್ದಾರೆ. ಅವರು ಓದಿದ ಈ ಶಾಲೆಗೆ ಪ್ರತಿ ವರ್ಷ ಉಚಿತವಾಗಿ ನೋಟ್ ಪುಸ್ತಕ ನೀಡುತ್ತಿರುವುದು ಸಮಾಜಮುಖಿ ಕೆಲಸವಾಗಿದೆ. ಮುಂದಿನ ದಿನಗಳಲ್ಲಿ ಈ ಸಂಸ್ಥೆಯು ಇನ್ನೂ ಉತ್ತಮ ಕೆಲಸ ಮಾಡಲಿ” ಎಂದು ಹಾರೈಸಿದರು.

ಯಶೋಮಾಧ್ಯಮ-2024 ಪ್ರಶಸ್ತಿ ಪುರಸ್ಕೃತ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಮಾತನಾಡಿ, “ಯಶೋಮಾಧ್ಯಮ-2024 ಪ್ರಶಸ್ತಿಗೆ ಆಯ್ಕೆ ಮಾಡಿ ಜವಾಬ್ಧಾರಿಯನ್ನು ಹೆಚ್ಚಿಸಿದ್ದಾರೆ” ಎಂದರು.

ಮಣಿಪಾಲ ನರ್ಸಿಂಗ್‌ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಮರಿಯಾ ಪಾಯಸ್ ಮಾತನಾಡಿ, “ಸ್ಪಂದನ ಸೇವಾ ಸಂಸ್ಥೆ ಉತ್ತಮವಾದ ಸಮಾಜ ಸೇವೆಯನ್ನು ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡಲಿ” ಎಂದು ಹಾರೈಸಿದರು.

ಸ್ಪಂದನ ಸೇವಾ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪೈ, ಖಜಾಂಚಿ ರಜನಿ ವಿ ಪೈ ಅವರು ಸಂಸ್ಥೆಯ ಕಾರ್ಯ ಯೋಜನೆಗಳ ಬಗ್ಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಅರಣ್ಯ ಇಲಾಖೆಯಿಂದ ರೈತರ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಪ್ರಕಾಶ್ ಶೆಟ್ಟಿ, ಡಾ ಶೇಷಪ್ಪ ರೈ, ಮುಖ್ಯೋಪಾಧ್ಯಾಯ ಸಂತೋಷ ಶೆಟ್ಟಿ, ಸ್ಪಂದನಾ ಸೇವಾ ಸಂಸ್ಥೆಯ ಕಾರ್ಯದರ್ಶಿ ಸಂತೋಷ್ ಕಾಮತ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ವಿದ್ಯಾರ್ಥಿಗಳು, ಪೋಷಕರು ಹಾಗೂ ಸ್ಥಳೀಯರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X