ಭರ್ತೃಹರಿ ಮಹತಾಬ್ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ: ವಿಪಕ್ಷಗಳ ವಿರೋಧ

Date:

Advertisements

ವಿಪಕ್ಷಗಳ ತೀವ್ರ ವಿರೋಧದ ನಡುವೆ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್‌ ಅವರು 18ನೇ ಲೋಕಸಭೆಯ  ಹಂಗಾಮಿ ಸ್ಪೀಕರ್‌ ಆಗಿ ಪ್ರಮಾಣ ವಚನ ಸ್ಪೀಕರಿಸಿದರು.

ಭರ್ತೃಹರಿ ಮಹತಾಬ್‌ ಅವರಿಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಿದರು.18ನೇ ಲೋಕಸಭೆ ಮೊದಲ ಅಧಿವೇಶನದಲ್ಲಿ ಭರ್ತೃಹರಿ ಮಹತಾಬ್‌ ಅವರು ಅಧ್ಯಕ್ಷತೆ ವಹಿಸಲಿದ್ದು, ನೂತನವಾಗಿ ಆಯ್ಕೆಯಾದ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಭರ್ತೃಹರಿ ಮಹತಾಬ್‌ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವುದರ ಮೂಲಕ ಕೇಂದ್ರ ಸರ್ಕಾರ ನಿಯಮಾವಳಿಗಳನ್ನು ಉಲ್ಲಂಘಿಸಿದೆ ಎಂದು ಕಾಂಗ್ರೆಸ್ ಒಳಗೊಂಡಂತೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ನಿಯಮಾನುಸಾರ ಅತೀ ಹೆಚ್ಚು ಅವಧಿಗೆ 8 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಕಾಂಗ್ರೆಸ್ ಸಂಸದ ಕೆ ಸುರೇಶ್‌ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಬೇಕಿತ್ತೆಂದು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಹಿರಿತನದ ಆಧಾರದ ಮೇಲೆ ಸುರೇಶ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್‌ ಆಗಿ ಆಯ್ಕೆ ಮಾಡಬೇಕಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತಿಗಳ ಸ್ವಾಭಿಮಾನ, ಸ್ವಾಯತ್ತತೆ ಮತ್ತು ಸಂಸ್ಕೃತಿ ಸಚಿವರ ತಿಪ್ಪೆ ಸಾರಿಸುವಿಕೆ

ಬಿಜೆಪಿ ನೇತೃತ್ವದ ಸರ್ಕಾರ ಸ್ಪೀಕರ್‌ ಹುದ್ದೆಯ ನಿಯಮಾವಳಿಯನ್ನು ಉಲ್ಲಂಘಿಸಿ ರಾಜಕೀಯಕರಣಗೊಳಿಸಿದೆ ಎಂದು ಕಾಂಗ್ರೆಸ್ ನಾಯಕರಾದ ಜೈರಾಮ್‌ ರಮೇಶ್ ಹಾಗೂ ಕೆ ಸಿ ವೇಣುಗೋಪಾಲ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ.

ವಿಪಕ್ಷಗಳ ಆರೋಪವನ್ನು ಅಲ್ಲಗಳೆದಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಅವರು, ಮಹತಾಬ್‌ ಅವರು ಸತತವಾಗಿ 7 ಬಾರಿ ಆಯ್ಕೆಯಾದ ಕಾರಣ ನಿಯಮಾನುಸಾರ ಅವರನ್ನು ಆಯ್ಕೆ ಮಾಡಲಾಗಿದೆ. ಸುರೇಶ್ ಅವರು 1998 ಹಾಗೂ 2004ರಲ್ಲಿ ಸೋಲು ಅನುಭವಿಸಿದ್ದರು ಎಂದು ತಿಳಿಸಿದ್ದಾರೆ.

ಕೇರಳದ ಸಂಸದ ಕೆ ಸುರೇಶ್‌ ಅವರು ಎರಡು ಬಾರಿ ಸೋತಿದ್ದರೂ ಎರಡು ಕ್ಷೇತ್ರಗಳಿಂದ 8 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

Download Eedina App Android / iOS

X