ಬೀದರ್‌ | ಕನ್ನಡದಲ್ಲಿ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಾಗರ್‌ ಖಂಡ್ರೆ

Date:

Advertisements

18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಕರ್ನಾಟಕದ ಸಾಗರ್‌ ಈಶ್ವರ ಖಂಡ್ರೆ ಅವರು ಲೋಕಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಬೀದರ್ ಲೋಕಸಭಾ ಕ್ಷೇತ್ರದಿಂದ 26ನೇ ವಯಸ್ಸಿನಲ್ಲಿಯೇ ಸಂಸದರಾಗಿ ಲೋಕಸಭೆಗೆ ಆಯ್ಕೆಯಾಗಿರುವ ಸಾಗರ ಈಶ್ವರ ಖಂಡ್ರೆ ಅವರು ನೂತನ ಸಂಸತ್ ಭವನದಲ್ಲಿ ಸೋಮವಾರ ಆರಂಭಗೊಂಡ ಮೊದಲ ಅಧೀವೇಶನದಲ್ಲಿ ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಲೋಕಸಭೆಯ ಹಂಗಾಮಿ ಸಭಾಧ್ಯಕ್ಷರಾದ ಭರ್ತೃಹರಿ ಮಹಾತಾಬ್ ಅವರು ಸಾಗರ ಖಂಡ್ರೆ ಅವರಿಗೆ ಕೈಕುಲುಕಿ ಅಭಿನಂದಿಸಿದರು.

ಈ ಕುರಿತು ʼಎಕ್ಸ್‌ʼನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು “ನಮ್ಮ ಪ್ರೀತಿಯ ಬೀದರ ಲೋಕಸಭಾ ಕ್ಷೇತ್ರದ ಮಹಾಜನತೆಯ ಆಶೀರ್ವಾದದಿಂದಾಗಿ ಇಂದು ದೆಹಲಿಯ ಸಂಸತ ಭವನದಲ್ಲಿ 18ನೇ ಲೋಕಸಭೆಯ ಸದಸ್ಯನಾಗಿ, ಬೀದರ ಕ್ಷೇತ್ರದ ಪ್ರತಿನಿಧಿಯಾಗಿ ಪ್ರಮಾಣ ವಚನ ಸ್ವೀಕರಿಸಿದೇನು” ಎಂದಿದ್ದಾರೆ.

Advertisements

“ಈ ಅದ್ಭುತ, ಅವಿಸ್ಮರಣೀಯ ಕ್ಷಣಕ್ಕೆ ಕಾರಣೀಭೂತರಾದ ಬೀದರ ಲೋಕಸಭಾ ಕ್ಷೇತ್ರದ ಮತದಾರ ಪ್ರಭುಗಳಿಗೆ ನಾನು ಅನಂತ ಧನ್ಯವಾದಗಳು ಅರ್ಪಿಸುತ್ತೇನೆ. ತಮ್ಮೆಲ್ಲರ ನಿರೀಕ್ಷೆಗಳಿಗೆ ತಕ್ಕಂತೆ ಬೀದರ ಕ್ಷೇತ್ರದ ಜನತೆಗೆ ಚುತ್ಯಿ ಬರದಂತೆ ಕ್ಷೇತ್ರ, ರಾಜ್ಯ ಹಾಗೂ ದೇಶದ ಏಳಿಗೆಗಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೆನೆ” ಎಂದು ಬರೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದು ಮೊದಲ ಬಾರಿಗೆ ಸಂಸತ್‌ ಪ್ರವೇಶಿಸಿದ್ದ ಅವರು ದೇಶದ ಕಿರಿಯ ಸಂಸದರಲ್ಲಿ ಒಬ್ಬರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X