ಕೊಪ್ಪಳ | ಗುಮಗೇರಿ ಗ್ರಾಮದಲ್ಲಿ ಮತದಾನ ಜಾಗೃತಿ

Date:

Advertisements
  • ದೇಶ, ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಮತ ಮುಖ್ಯ
  • ನಿರ್ಭೀತಿಯಿಂದ ಮತ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಿ ಗ್ರಾಮದಲ್ಲಿ ಏಪ್ರಿಲ್ 24ರಂದು ಮೇಣದ ಬತ್ತಿ ಹಚ್ಚಿ, ಜಾಗೃತಿ ಗೀತೆ ಹಾಡುವ ಮೂಲಕ ಮತದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನೆರವೇರಿತು.

ಮಹಿಳೆಯರು ಪಂಜು ಹಿಡಿದು ಜಾಥಾದಲ್ಲಿ ಭಾಗಿಯಾದರು, ಜೊತೆಗೆ ಜಾಗೃತಿ ಗೀತೆಗಳನ್ನೊಳಗೊಂಡಿದ್ದ ವಿಶೇಷ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಲ್ಲಪ್ಪ ಕುಂಬಾರ್ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

“ಯುವಕರು, ವೃದ್ಧರು, ವಿಕಲಚೇತನ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸಬೇಕು. ಶೇ. 100ರಷ್ಟು ಮತ ಚಲಾಯಿಸಿ ಯೋಗ್ಯ ಮತ್ತು ಸಮರ್ಥ ನಾಯಕನನ್ನು ಆಯ್ಕೆ ಮಾಡಬೇಕು. ದೇಶ, ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಮತ ಮುಖ್ಯವಾಗಿರುತ್ತದೆ. ಚುನಾವಣೆ ಪ್ರಜಾತಂತ್ರದ ಹಬ್ಬ. ಆಸೆ, ಆಮೀಷಗಳಿಗೆ ಒಳಗಾಗದೇ ಮುತುವರ್ಜಿವಹಿಸಿ ಮತ ಚಲಾಯಿಸಬೇಕು” ಎಂದು ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ನಿಂಗನಗೌಡ ವಿ ಎಚ್ ಸಲಹೆ ನೀಡಿದರು.

Advertisements

ಈ ಸಂದರ್ಭದಲ್ಲಿ ಸಾಮಾಜಿಕ ಲೆಕ್ಕಪರಿಶೋಧಕ ಸಂಯೋಜಕ ರವಿಗೌಡರ್, ತಾಲೂಕು ಪಂಚಾಯಿತಿಯ ಐಇಸಿ ಸಂಯೋಜಕ ಚಂದ್ರಶೇಖರ್ ಜಿ ಹಿರೇಮಠ, ಗ್ರಾಮ ಪಂಚಾಯಿತಿಯ ಸಿಬ್ಬಂದಿ ವಿರುಪಾಕ್ಷಪ್ಪ, ಹನುಮಂತ, ಲಕ್ಷ್ಮೀದೇವಿ, ಹನುಮಂತ ಶಕಪೂರ, ಜಾನಪದ ಕಲಾವಿದರಾದ ಸುಕುಮುನಿ, ನಾಗಪ್ಪ, ಎನ್.ಆರ್.ಎಲ್.ಎಂ ಸಂಜೀವಿನಿ ಸ್ವಸಹಾಯ ಸಂಘದ ಹನುಮಕ್ಕ, ಸುಮಾ, ನಿರ್ಮಲ ಕಸ್ತೂರಿ ಹಾಗೂ ಇತರರು ಅಂಗನವಾಡಿ, ಆಶಾ, ಕಾರ್ಯಕರ್ತೆಯರಾದ ಶಾರದಾ, ಹನುಮಕ್ಕ, ಬಸಮ್ಮ, ಕವಿತಾ ಹಾಗೂ ಗ್ರಾಮದ ಗುರು ಹಿರಿಯರು, ಸಾರ್ವಜನಿಕರು ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಗಂಗಾವತಿಯಲ್ಲಿ ಮತ ಬೇಟೆ ಆರಂಭಿಸಿದ ಎಎಪಿ ಮಹಿಳಾ ಮುಖಂಡರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X