ತ್ರಿಪುರಾ| ಟಿಎಸ್‌ಎಫ್ ಸದಸ್ಯನ ಮೇಲೆ ಹಲ್ಲೆ; ಎಬಿವಿಪಿ ಕಾರ್ಯಕರ್ತನ ಬಂಧನ

Date:

Advertisements

ಅಗರ್ತಲಾದ ಮಹಾರಾಜ ಬೀರ್ ಬಿಕ್ರಮ್ (ಎಂಬಿಬಿ) ಕಾಲೇಜಿನಲ್ಲಿ ತ್ರಿಪುರಾ ಸ್ಟೂಡೆಂಟ್ಸ್ ಫೆಡರೇಶನ್ (ಟಿಎಸ್‌ಎಫ್) ಸದಸ್ಯನ ಮೇಲೆ ಎಬಿವಿಪಿ ಸದಸ್ಯರು ಹಲ್ಲೆ ನಡೆಸಿದ್ದು ತ್ರಿಪುರಾ ಪೊಲೀಸರು ಒಬ್ಬ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತನನ್ನು ಬಂಧಿಸಿದ್ದಾರೆ.

ಕಾಲೇಜಿಗೆ ದಾಖಲಾತಿ ಮಾಡಿಸಿಕೊಳ್ಳಲು ಬಂದಿದ್ದ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿದ್ದಾಗ ಇಬ್ಬರು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ದೂರಿನ ಆಧಾರದ ಮೇಲೆ ನಾವು ಒಬ್ಬ ಎಬಿವಿಪಿ ಕಾರ್ಯಕರ್ತನನ್ನು ಬಂಧಿಸಿದ್ದೇವೆ. ನಾವು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಪೂರ್ವ ಅಗರ್ತಲಾ ಪೊಲೀಸ್ ಠಾಣಾಧಿಕಾರಿ ಪ್ರಭಾರಿ ಸಂಜಿಬ್ ಸೇನ್ ಹೇಳಿದ್ದಾರೆ.

Advertisements

ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 325ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಆರೋಪಿಯ ಹೆಸರನ್ನು ಬಹಿರಂಗಪಡಿಸಿಲ್ಲ.

ಇದನ್ನು ಓದಿದ್ದೀರಾ? ಕೇರಳ ವಿವಿ ಸೆನೆಟ್‌ಗೆ ರಾಜ್ಯಪಾಲರು ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನ ರದ್ದು: ಹೈಕೋರ್ಟ್‌

ಗಾಯಗೊಂಡ ವಿದ್ಯಾರ್ಥಿಯನ್ನು ಖೊರಾಂಗ್ ದೆಬ್ಬರ್ಮಾ ಎಂದು ಗುರುತಿಸಲಾಗಿದ್ದು, ವಿದ್ಯಾರ್ಥಿಯನ್ನು ಗೋವಿಂದ್ ಬಲ್ಲಭ್ ಪಂತ್ (ಜಿಬಿಪಿ) ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಚಿಕಿತ್ಸೆ ಪಡೆದ ಬಳಿಕ ವಿದ್ಯಾರ್ಥಿಯನ್ನು ಬಿಡುಗಡೆಗೊಳಿಸಲಾಗಿದೆ.

ಟಿಎಸ್ಎಫ್ ಸದಸ್ಯರ ಪ್ರಕಾರ, ಹೊಸದಾಗಿ ದಾಖಲಾತಿ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ವಿಷಯದಲ್ಲಿ ಖೋರಾಂಗ್ ಮತ್ತು ಎಬಿವಿಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ. ಟಿಎಸ್‌ಎಫ್ ಸದಸ್ಯ ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಲು ಯತ್ನಿಸಿದಾಗ ಎಬಿವಿಪಿ ಸದಸ್ಯರು ಹಲ್ಲೆ ನಡೆಸಿದ್ದಾರೆ.

“ನಾವು ಘಟನೆಯನ್ನು ಖಂಡಿಸುತ್ತೇವೆ. ನಾವು ಸಹ ಪ್ರಾಂಶುಪಾಲರನ್ನು ಭೇಟಿ ಮಾಡಿ ಆರೋಪಿ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ. ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳುವಂತೆ ನಾವು ಅವರಿಗೆ ಮನವಿ ಮಾಡಿದ್ದೇವೆ” ಎಂದು ಟಿಎಸ್‌ಎಫ್ ಅಗರ್ತಲಾ ಟೌನ್ ಸಮಿತಿಯ ಉಪಾಧ್ಯಕ್ಷ ಮನೀಶ್ ದೆಬ್ಬರ್ಮಾ ಹೇಳಿದರು.

ಇದನ್ನು ಓದಿದ್ದೀರಾ?  ಗದಗ | ಬಿಜೆಪಿ, ಎಬಿವಿಪಿ ಬೃಹತ್‌ ಪ್ರತಿಭಟನೆ; ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯ

ಎಂಬಿಬಿ ಕಾಲೇಜು ಪ್ರಾಂಶುಪಾಲ ಡಾ.ನಿರ್ಮಲ್ ಭದ್ರ ಮಾತನಾಡಿ, “ಒಂದು ವಿದ್ಯಾರ್ಥಿ ಸಂಘಟನೆ ಹೊರತುಪಡಿಸಿ ನನಗೆ ಇದುವರೆಗೆ ಯಾವುದೇ ದೂರು ಬಂದಿಲ್ಲ. ಘಟನೆಯ ನಂತರ ನಾವು ಪೊಲೀಸರಿಗೆ ಕರೆ ಮಾಡಿ ಗುಂಪನ್ನು ಚದುರಿಸಿದೆವು. ಸೂಕ್ತ ಭದ್ರತಾ ಕ್ರಮಗಳನ್ನು ನಿಯೋಜಿಸಲಾಗಿದೆ” ಎಂದು ತಿಳಿಸಿದರು.

ಇನ್ನು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಂಜಿತ್ ಸಹಾ ತಮ್ಮ ಸಂಘಟನೆಯ ಒಂದಿಬ್ಬರಿಗೆ ಗಾಯವಾಗಿದೆ. ನಾನು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಿದ್ದೇವೆ ಎಂದು ಹೇಳಿದ್ದಾರೆ.

ಎಂಬಿಬಿ ಕಾಲೇಜು ತ್ರಿಪುರಾ ಮಹಾರಾಜ ಬಿರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ 1947ರಲ್ಲಿ ಸ್ಥಾಪಿಸಿದ ಮೊದಲ ಕಾಲೇಜು ಆಗಿದ್ದು ಇದು ರಾಜ್ಯದ ಅಪ್ರತಿಮ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ಇದನ್ನು ಈಗ ರಾಜ್ಯ ಸರ್ಕಾರ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X