ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಹಾಗೂ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಕಾಲಿಗೆ ಮಧುಗಿರಿ ಪೊಲೀಸರು ಗುಂಡು ಹಾರಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಈಜಿಹಳ್ಳಿ ಬಳಿ ಆರೋಪಿ, ಆಂಧ್ರಪ್ರದೇಶದ ಹಿಂದೂಪುರ ಮೂಲದ ರಿಜ್ವಾನ್‌ಅನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ, ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ, ಪಾರಾರಿಯಾಗಲು ಯತ್ನಿಸಿದ್ದು, ಪೊಲೀಸರು ಆತ ಕಾಲಿಗೆ ಗುಂಡು ಹಾರಿದ್ದಾರೆ.
ಮಧುಗಿರಿ ಪೊಲೀಸ್ ಠಾಣೆ ಕಾನ್ಸ್‌ಸ್ಟೇಬಲ್ ರಮೇಶ್ ಎಂಬವರ ಮೇಲೆ ಆರೋಪಿ ಬಿಯರ್ ಬಾಟಲ್‌ನಿಂದ ಹಲ್ಲೆ ಮಾಡಿದ್ದಾನೆ. ಅವರ ಎಡಗೈಗೆ ಗಾಯವಾಗಿದೆ. ಹಲ್ಲೆ ನಡೆಸಿ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ ಕಾಲಿಗೆ ಸಿಪಿಐ ಹನುಮಂತರಾಯಪ್ಪ ಗುಂಡು ಹಾರಿಸಿದ್ದಾರೆ.
ಗಾಯಗೊಂಡಿದ್ದ ಕಾನ್ಸ್‌ಸ್ಟೇಬಲ್ ರಮೇಶ್ ಅವರಿಗೆ ಮಧುಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೋಡಿಸಲಾಗಿದೆ. ಗುಂಡೇಟಿನಿಂದ ಗಾಯಗೊಂಡಿದ್ದ ಆರೋಪಿಯ್ನೂ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.