ಡೆಂಘಿ ಪತ್ತೆ ಮತ್ತು ಚಿಕಿತ್ಸೆ ಗಂಭೀರವಾಗಿ ಪರಿಗಣಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

Date:

Advertisements

ರಾಜ್ಯದಲ್ಲಿ ಡೆಂಘಿ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.

ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯ ಚಿಕಿತ್ಸೆ, ಚುಚ್ವುಮದ್ದು, ಪ್ಲೇಟ್ ಲೆಟ್ಸ್ ಗಳ ಸಂಗ್ರಹಕ್ಕೆ ಆರೋಗ್ಯಾಧಿಕಾರಿಗಳು ಮುಂದಾಗಬೇಕು ಎಂದು ಸಭೆಯಲ್ಲಿ ಸಿಎಂ ಸೂಚಿಸಿದರು.

ರಾಜ್ಯದಲ್ಲಿ ಜೂ.24ರವರೆಗೆ ಒಟ್ಟು 5374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಭಾರತ ಸರ್ಕಾರವು ಡೆಂಗಿ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ. ರಾಜ್ಯದಲ್ಲಿ ಮರಣ ಪ್ರಮಾಣ ಇನ್ನೂ ಕಡಿಮೆ ಪ್ರಮಾಣದಲ್ಲಿದೆ. ಅಂದರೆ, Case fatality rate 0.09% ಇದೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

Advertisements

ಬಿಬಿಎಂಪಿ ವ್ಯಾಪ್ತಿಯಲ್ಲಿ 1230 ಪ್ರಕರಣಗಳು ವರದಿಯಾಗಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ಸಿಎಂಗೆ ತಿಳಿಸಿದರು.

ಆಶಾ ಕಾರ್ಯಕರ್ತೆಯರು, ನರ್ಸಿಂಗ್‌ ವಿದ್ಯಾರ್ಥಿಗಳು, ಎನ್.ಎಸ್.ಎಸ್. ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸಲು ಸೂಚಿಸಬೇಕು. ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು ನಾಶ) ವಿಶೇಷ ಅಭಿಯಾನ ಮಾಡಬೇಕು. ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಘಿ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು ಎಂದು ಸಿಎಂ ಸೂಚನೆ ನೀಡಿದರು.

ಡೆಂಘಿ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡುವುದು ಅತಿ ಅಗತ್ಯ. ಡೆಂಘಿ ಈಡಿಸ್‌ ಈಜಿಪ್ಟೈ ಎಂಬ ಸೊಳ್ಳೆಯಿಂದ ಹರಡುತ್ತದೆ. ಇದರ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಅರಿವು ಮೂಡಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X