ಮನೆಯ ಆವರಣದ ಕಾಂಪೌಂಡ್ ಕುಸಿದು ಮನೆಯ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದಲ್ಲಿ ನಡೆದಿದೆ.
ಮೃತರನ್ನು ಯಾಸಿರ್ (45), ಅವರ ಪತ್ನಿ ಮರಿಯಮ್ಮ (40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ.
ನೆರೆಮನೆಯ ಅಬೂಬಕ್ಕರ್ ಎಂಬವರ ಮನೆಯ ಕಾಂಪೌಂಡ್ ಬುಧವಾರ ಬೆಳಗ್ಗೆ ಏಕಾಏಕಿ ಕುಸಿದು ಯಾಸಿರ್ ಅವರ ಮನೆಯ ಗೋಡೆಯ ಮೇಲೆ ಬಿದ್ದಿದೆ. ಇದರಿಂದಾಗಿ ಯಾಸಿರ್ ಅವರ ಮನೆಯ ಗೋಡೆಯೂ ಕೂಡಾ ಕುಸಿದು ಮನೆಯೊಳಗಿದ್ದ ನಾಲ್ವರ ಮೇಲೆ ಬಿದ್ದಿದೆ.
ಇದನ್ನು ಓದಿದ್ದೀರಾ? ಕೊಪ್ಪಳ | ಸಾರ್ವಜನಿಕ ಶೌಚಾಲಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು
ಈ ಘಟನೆ ನಡೆದ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯ ಪ್ರಾರಂಭಿಸಿದದಾರೆ. ಆದರೆ ಮೂವರ ಮೃತದೇಹ ಪತ್ತೆಯಾಗಿದೆ. ಓರ್ವ ಬಾಲಕಿ ಮೃತದೇಹಕ್ಕಾಗಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ.