ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಮಂಗಳವಾರ ಸಂಜೆ ನಗರದ ಕಾಟನ್ ಸೇಲ್ ಸೊಸೈಟಿಯ ಆವರಣದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೂಡಲೇ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಅನುದಾನ, ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ ಸೇರಿದಂತೆ ಸಾರ್ವಜನಿಕರಿಂದ ಸಾಮೂಹಿಕ ಹಾಗೂ ವೈಯಕ್ತಿಕ ಅಹವಾಲುಗಳನ್ನು ಸಚಿವರು ಸ್ವೀಕರಿಸಿದರು.
ಸಾರ್ವಜನಿಕರು ಅನಾಯೊಗ್ಯ ಕಾರಣ ಶಸ್ತ್ರಚಿಕಿತ್ಸೆ ಸಹಾಯ ಕೋರಿ ಅಹವಾಲು ತೋಡಿಕೊಂಡರು. ಅವರಿಗೆ ನೆರವು ನೀಡುವುದಾಗಿ ಎಚ್.ಕೆ ಪಾಟೀಲ್ ಭರವಸೆ ನೀಡಿದರು.
ಈ ವೇಳೆ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಬಿ.ಬಿ.ಅಸೂಟಿ, ಅಶೋಕ ಮಂದಾಲಿ, ಪ್ರಭು ಬುರಬುರೆ, ಕೃಷ್ಣಾ ಪರಾಪುರೆ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ತಹಶಿಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ.ಕಂಬಾಳಿಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಬಿಸಿಎಂ ಜಿಲ್ಲಾ ಅಧಿಕಾರಿ ರವಿ ಗುಂಜಿಕರ, ಡಿಎಸ್ಒ ಡಾ. ವೆಂಕಟೇಶ ರಾಠೋಡ, ಡಿಡಿಪಿಐ ಎಂ.ಎ.ರಡ್ಡೇರ, ಆಹಾರ ಇಲಾಖೆ ಉಪನಿರ್ದೇಶಕ ಎಂ. ಗಂಗಪ್ಪ, ಆರ್.ಟಿ.ಒ ಮಂಜುನಾಥ ಶೀರಾಳೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜಿನಿಕರು ಹಾಜರಿದ್ದರು.