ಹುಲಿ ಉಗುರು ಪ್ರಕರಣದಲ್ಲಿ ಬಿಗ್‌ಬಾಸ್ ಮನೆಯಿಂದಲೇ ಬಂಧನಕ್ಕೊಳಗಾಗಿದ್ದ ವರ್ತೂರು ಸಂತೋಷ್ ವಿರುದ್ಧ ಈಗ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಾಣಿಗಳ ಸಾಗಾಣಿಕೆ ನಿಯಮ ಉಲ್ಲಂಘಿಸಿ ಅಸುರಕ್ಷಿತ ರೀತಿಯಿಂದ ಪ್ರಾಣಿಗಳನ್ನು ಸಾಗಾಟ ಮಾಡಿದ್ದಾರೆಂದು ಆರೋಪಿಸಿ ಪ್ರಾಣಿ ಕಲ್ಯಾಣ ಅಧಿಕಾರಿ ಹರೀಶ್ ಎಂಬುವರು ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೆ, ನ್ಯಾಯಾಲಯದ ಮೆಟ್ಟಿಲೇರಲು ಮುಂದಾಗಿದ್ದಾರೆ.
ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ವರ್ತೂರು ಸಂತೋಷ್ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ಸಹ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಹಿಳೆಯ ಬರ್ಬರ ಹತ್ಯೆ; ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ಬಂಧನ
ಹಳ್ಳಿಕಾರ್ ರೇಸ್ ಮಾಡಲು ಮುಂದಾಗಿರುವ ವರ್ತೂರು ಸಂತೋಷ್ ಟ್ರಕ್ ಒಂದರಲ್ಲಿ ಒಂಬತ್ತು ಹೋರಿಗಳನ್ನು ಸಾಗಾಟ ಮಾಡಿದ್ದಾರೆ. ಜತೆಗೆ, ಟ್ರಕ್‌ನಲ್ಲಿ ಕೆಲವು ವಸ್ತುಗಳನ್ನು ತುಂಬಿಸಿದ್ದಾರೆ. ಇದು ಪ್ರಾಣಿ ಸಾಗಾಟ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಅಧಿಕಾರಿ ಹರೀಶ್ ಅವರು ವರ್ತೂರು ಸಂತೋಷ್ ವಿರುದ್ಧ ದೂರು ನೀಡಿದ್ದಾರೆ.