ವಾಲ್ಮೀಕಿ ನಿಗಮ ಅಕ್ರಮ ಖಂಡಿಸಿ ಜೂ.28ಕ್ಕೆ ಜಿಲ್ಲಾಧಿಕಾರಿ ಕಚೇರಿಗಳಿಗೆ ಬಿಜೆಪಿ ಮುತ್ತಿಗೆ: ಬಿ ವೈ ವಿಜಯೇಂದ್ರ

Date:

Advertisements

ವಾಲ್ಮೀಕಿ ಅಭಿವೃದ್ಧಿ ನಿಗಮದ ನಡೆದಿರುವ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವ ಮುಖ್ಯಮಂತ್ರಿಯವರು ಜವಾಬ್ದಾರಿ ಹೊರಬೇಕು. ಈ ಸಂಬಂಧ ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಆಗ್ರಹಿಸಿದರು.

ದೆಹಲಿಯಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದೇ 28ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಪೋಲಾಗಿದೆ; ಅದರ ದುರ್ಬಳಕೆ ಆಗಿದೆ. ಕಾಂಗ್ರೆಸ್ ಸರಕಾರವು ಈ ಹಣವನ್ನು ದೋಚಿದೆ” ಎಂದು ಟೀಕಿಸಿದರು.

“ಕರ್ನಾಟಕ ರಾಜ್ಯ ಸರಕಾರವು ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಆಕ್ಷೇಪಿಸಿದ ಅವರು, ನಿಗಮದ ಹಗರಣ ಸಂಬಂಧ ಯೂನಿಯನ್ ಬ್ಯಾಂಕ್ ಆಫ್ ಇಂಡಿಯ ಪತ್ರದನ್ವಯ ಸಿಬಿಐ ತನಿಖೆ ನಡೆಯುತ್ತಿದೆ. ರಾಜ್ಯ ಸರಕಾರ ಆತುರಾತುರವಾಗಿ ಎಸ್‍ಐಟಿಯನ್ನೂ ರಚಿಸಿ ತಮಗೆ ಬೇಕಾದಂತೆ ತನಿಖೆ ನಡೆಸುತ್ತಿದೆ” ಎಂದು ಆರೋಪಿಸಿದರು.

Advertisements

“ಪೆಟ್ರೋಲ್- ಡೀಸೆಲ್ ದರ ಏರಿಸಿದ್ದಾರೆ. ಹಾಲಿನ ದರ ಹೆಚ್ಚಿಸಿದ್ದಾರೆ. ಪೆಟ್ರೋಲ್- ಡೀಸೆಲ್ ದರ ಏರಿಸಿದ್ದರಿಂದ ರಾಜ್ಯದೆಲ್ಲೆಡೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ರಾಜ್ಯದಲ್ಲಿ ಬೆಲೆ ಏರಿಕೆಯ ಪರ್ವ ನಡೆಯುತ್ತಿದೆ. ಜನರಿಗೆ ಬರೆ ಎಳೆಯುವ ಕೆಲಸವನ್ನು ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ. ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸಲಾಗಿದೆ. ವಿದ್ಯುತ್ ದರ ಏರಿಸಿದ್ದಾರೆ. ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಿಸಲು 25 ಸಾವಿರ ಇದ್ದುದನ್ನು 2.5 ಲಕ್ಷಕ್ಕೆ ಏರಿಸಿದ್ದಾರೆ” ಎಂದರು.

“ಗ್ಯಾರಂಟಿ ಹೆಸರಿನಲ್ಲಿ ಜನರ ಕಿವಿಗೆ ಹೂ ಮುಡಿಸಿದ್ದಾರೆ. ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ನಾಡಿನ ಜನತೆಗೆ ದ್ರೋಹ ಬಗೆಯುತ್ತಿದೆ. ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಸಾಮಾನ್ಯ ಜನರೂ ಮಾತನಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

“ರಾಜ್ಯದ ಕಾಂಗ್ರೆಸ್ ಸರಕಾರವು ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದ್ದರೂ ಸಹ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ. ಮತ್ತೊಂದೆಡೆ ಅಭಿವೃದ್ಧಿಶೂನ್ಯತೆ ರಾಜ್ಯವನ್ನು ಕಾಡುವಂತಾಗಿದೆ. ಅಭಿವೃದ್ಧಿ ಇಲ್ಲದೆ ಶಾಸಕರು ತಲೆ ಎತ್ತಿಕೊಂಡು ಓಡಾಡಲು ಆಗುತ್ತಿಲ್ಲ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X