ವಿಜಯಪುರ | ಸಂಗ್ರಹವಾದ ಹೆಚ್ಚುವರಿ ಹಾಲಿಗೆ ಸಬ್ಸಿಡಿ ಹಾಗೂ ಬಡಜನರಿಗೆ ರಿಯಾಯಿತಿ ದರದಲ್ಲಿ ನೀಡುವಂತೆ ಎಐಡಿಎಸ್‌ಒ ಆಗ್ರಹ

Date:

Advertisements

ಕರ್ನಾಟಕ ಹಾಲು ಉತ್ಪಾದಕ ಮಹಾ ಮಂಡಳಿ(ಕೆಎಂಎಫ್)ಯು ನಂದಿನಿ ಹಾಲಿನ ಅರ್ಧ ಲೀಟರ್ ಹಾಗೂ 1 ಲೀಟರ್ ಪ್ಯಾಕೆಟ್‌ಗೆ 50 ಎಂಎಲ್ ಹಾಲನ್ನು ಹೆಚ್ಚುವರಿ ನೀಡುವುದರೊಂದಿಗೆ ಹಾಲಿನ ದರವನ್ನು ₹2ಗೆ ಹೆಚ್ಚಿಸಿರುವುದಾಗಿ ಘೋಷಿಸಿದೆ ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಬಿ ಭಗವಾನ್ ರೆಡ್ಡಿ ತಿಳಿಸಿದ್ದಾರೆ.

ವಿಜಯಪುರ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, “ರಾಜ್ಯದಲ್ಲಿ ಪ್ರತಿ ದಿನ 1 ಕೋಟಿ ಲೀಟರ್ ಹೆಚ್ಚು ಹಾಲು ಸಂಗ್ರಹವಾಗುತ್ತಿದ್ದು, ಉತ್ಪಾದಕರಿಂದ ಈ ಹಾಲನ್ನು ಖರೀದಿಸಬೇಕಾಗಿದೆ. ಜನರಿಗೆ 50 ಎಂ ಎಲ್ ಹೆಚ್ಚು ತಲುಪಿಸಿ, ಹೆಚ್ಚುವರಿ ₹2 ಸಂಗ್ರಹಿಸಲಾಗುತ್ತಿದೆಯೆಂದು ಕೆಎಂಎಫ್ ಹೇಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಇದನ್ನೇ ಹೇಳುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೈಗಾರಿಕೆಗಳ ಬೇಡಿಕೆ ಈಡೇಸುವಂತೆ ಕಾಟನ್ ಇಂಡಸ್ಟ್ರೀಸ್‌ ಅಸೋಸಿಯೇಷನ್‌ ಆಗ್ರಹ

Advertisements

“ರಾಜ್ಯದಲ್ಲಿ ಹಾಲು ಉತ್ಪಾದನೆಯು ಹೆಚ್ಚಾಗಿರುವುದು ಸಂತೋಷದ ವಿಷಯ. ಹಾಗೂ ಹಾಲು ಉತ್ಪಾದಕರಿಗೆ ಆದರ ನ್ಯಾಯಯುತ ಬೆಲೆಯೂ ದೊರಕಬೇಕು. ಆದರೆ ಕೆಎಂಫ್‌ನ ಈ ಪ್ರಸ್ತಾಪವು ಜನರಿಗೆ ‘ಉಗುಳಲೂ ಆಗದ ನುಂಗಲೂ ಆಗದ ಬಿಸಿ ತುಪ್ಪ’ದಂತಾಗಿದೆ. ಪೆಟ್ರೋಲ್ ಡೀಸೆಲ್ ದರ ಹೆಚ್ಚಾಗಿದೆ, ತರಕಾರಿ ಹಾಗೂ ಇನ್ನಿತರ ಅಗತ್ಯ ವಸ್ತುಗಳ ದರ ಕೈಗೆ ನಿಲುಕುತ್ತಿಲ್ಲ, ಈ ಹಿನ್ನೆಲೆಯಲ್ಲಿ ಈ ಹೆಚ್ಚುವರಿ ಖರ್ಚು ಜನರನ್ನು ಮತ್ತಷ್ಟು ಕಷ್ಟಕ್ಕೆ ದೂಡುತ್ತದೆ. ಆದ್ದರಿಂದ, ಸರ್ಕಾರವು ಹಾಲಿನ ದರ ಹೆಚ್ಚಿಸದೆ ಸಂಗ್ರಹವಾದ ಹೆಚ್ಚುವರಿ ₹1 ಕೋಟಿ ಲೀಟರ್ ಹಾಲಿಗೆ ಸಬ್ಸಿಡಿ ನೀಡಬೇಕು ಮತ್ತು ರಿಯಾಯಿತಿ ದರದಲ್ಲಿ ಬಡಜನರಿಗೆ ದೊರಕುವಂತೆ ಕ್ರಮ ಕೈಗೊಳ್ಳಬೇಕೆಂದು ತನ್ಮೂಲಕ ಏಕಕಾಲದಲ್ಲಿ ರಾಜ್ಯದ ಜನತೆಯ ಮತ್ತು ಹೈನುಗಾರರ ಹಿತಾಸಕ್ತಿಯನ್ನು ಕಾಪಾಡಬೇಕು” ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X