ಲೋಕಸಭೆ ಚುನಾವಣೆ ವೇಳೆ ಭಾರತೀಯರ ಬಣ್ಣದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ರಾಜೀನಾಮೆ ನೀಡಿದ್ದ ಸ್ಯಾಮ್ ಪಿತ್ರೋಡಾ ಅವರನ್ನು ಮತ್ತೆ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಎಐಸಿಸಿ ನೇಮಕ ಮಾಡಿದೆ.
“ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಸ್ಯಾಮ್ ಪಿತ್ರೋಡಾ ಅವರನ್ನು ಮರು ನೇಮಕ ಮಾಡಿ ಎಐಸಿಸಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ತತ್‌ಕ್ಷಣದಿಂದಲೇ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ” ಎಂಬುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Congress reappoints Sam Pitroda as Chairman of the Indian Overseas Congress. pic.twitter.com/gZt0yPlGM5
— Press Trust of India (@PTI_News) June 26, 2024
“ಅಮೆರಿಕದಲ್ಲಿರುವಂತೆ ಪಿತ್ರಾರ್ಜಿತ ಆಸ್ತಿಯ ಮೇಲೆ ತೆರಿಗೆ ಹಾಕುವ ಪದ್ಧತಿಯನ್ನು ಭಾರತದಲ್ಲೂ ಜಾರಿಗೆ ತರಬೇಕು” ಹಾಗೂ “ದಕ್ಷಿಣ ಭಾರತೀಯರು ನೋಡಲು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಸ್ಯಾಮ್ ಪಿತ್ರೋಡಾ ಹೇಳಿಕೆ ನೀಡಿದ್ದರು. ಇದು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು.
ಚುನಾವಣಾ ಭಾಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಬಿಜೆಪಿಯ ಹಲವು ನಾಯಕರು ಸ್ಯಾಮ್ ಪಿತ್ರೋಡಾ ಹೇಳಿಕೆಯನ್ನು ಖಂಡಿಸಿದ್ದರು. ಇದರ ಹಿನ್ನೆಲೆಯಲ್ಲಿ ಸ್ಯಾಮ್ ಪಿತ್ರೋಡಾ ಅವರು ಮೇ 8ರಂದು ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು.
#Exclusive
I was not sacked. I stepped down willingly….The remarks were not racist. It is the racist people who thought it was racist: @SamPitroda #NewsToday with @sardesairajdeep: https://t.co/W9yLh49sfc#SamPitroda #OverseasChief pic.twitter.com/IwLwdKrZFY— IndiaToday (@IndiaToday) June 26, 2024
“ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಸ್ಯಾಮ್ ಪಿತ್ರೋಡಾ ನಿರ್ಧರಿಸಿದ್ದಾರೆ. ಇದು ಅವರು ಸ್ವ-ಇಚ್ಛೆಯಿಂದ ತೆಗೆದುಕೊಂಡಿರುವ ತೀರ್ಮಾನವಾಗಿದೆ. ಅವರ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷರು ಸ್ವಾಗತಿಸಿದ್ದಾರೆ” ಎಂದು ಅವರ ರಾಜೀನಾಮೆಯನ್ನು ಅಂಗೀಕರಿಸುತ್ತಾ ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದರು.
ಪಿತ್ರೋಡಾ ಹೇಳಿದ್ದೇನು?
ಮಾಧ್ಯಮವೊಂದಕ್ಕೆ ಸಂದರ್ಶನ ನೀಡುವ ವೇಳೆ ಭಾರತದ ವೈವಿಧ್ಯತೆಯ ಬಗ್ಗೆ ಸ್ಯಾಮ್ ಪಿತ್ರೋಡಾ ಮಾತನಾಡಿದ್ದರು. ಈ ವೇಳೆ ಭಾರತದ ವಿವಿಧ ಭಾಗಗಳ ಜನತೆಯನ್ನು ಚೀನಿಯರು, ಅರಬ್ಬರು, ಬಿಳಿಯರು ಮತ್ತು ಆಫ್ರಿಕನ್ನರಿಗೆ ಹೋಲಿಸಿದ್ದರು. ಇದು ವಿವಾದ ಹುಟ್ಟು ಹಾಕಿತ್ತು.
People of West – Arab
People of East – Chinese
People of North – White
People of South – AfricansHua to Hua @sampitroda has been re-appointed as Chairman of Indian Overseas Congress by Gandhi Parivaar ! pic.twitter.com/oS5EGSi2QG
— Mohit Babu 🇮🇳 (@Mohit_ksr) June 26, 2024
“ನಾವು ಜಗತ್ತಿನಲ್ಲಿ ಪ್ರಜಾಪ್ರಭುತ್ವದ ಉಜ್ವಲ ಉದಾಹರಣೆಯಾಗಿದ್ದೇವೆ. ನಾವು ವೈವಿಧ್ಯತೆಯನ್ನು ಒಟ್ಟಿಗೆ ಹಿಡಿದಿಟ್ಟುಕೊಂಡಿರುವ ದೇಶವಾಗಿದ್ದೇವೆ. ಇಲ್ಲಿ ಪೂರ್ವದಲ್ಲಿರುವ ಜನರು ಚೀನಿಯರಂತೆ ಕಾಣುತ್ತಾರೆ. ಪಶ್ಚಿಮದಲ್ಲಿ ಜನರು ಅರಬ್ಬರಂತೆ, ಉತ್ತರದ ಜನರು ಬಹುಶಃ ಶ್ವೇತವರ್ಣೀಯರಂತೆ ಹಾಗೂ ದಕ್ಷಿಣದ ಜನರು ದಕ್ಷಿಣ ಆಫ್ರಿಕಾದವರಂತೆ ಕಾಣುತ್ತಾರೆ. ಪರವಾಗಿಲ್ಲ, ನಾವೆಲ್ಲರೂ ಸಹೋದರರು ಮತ್ತು ಸಹೋದರಿಯರು. ಇಷ್ಟೆಲ್ಲ ವೈವಿಧ್ಯತೆ ಇಟ್ಟುಕೊಂಡು ಬದುಕುತ್ತಿದ್ದೇವೆ” ಎಂದು ಪಿತ್ರೋಡಾ ಹೇಳಿಕೆ ನೀಡಿದ್ದರು.
