ದಿನದಿಂದ ದಿನಕ್ಕೆ ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಡೆಂಘೀ ಜ್ವರದಿಂದಾಗಿ ಹಾವೇರಿ ಜಿಲ್ಲೆಯಲ್ಲಿ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ಲ ಗ್ರಾಮದ ಗೌಸಿಯಾ (30) ಎಂಬವರು ಡೆಂಘೀ ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಗೌಸಿಯಾ ಅವರು ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಕುಟುಂಬಸ್ಥರು ಅವರನ್ನು ನಗರದ ಪಂಡಿತ್ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ತಪಾಸಣೆ ನಡೆಸಿದಾಗ ಮಹಿಳೆಗೆ ಡೆಂಘೀ ಇರುವುದು ಧೃಢಪಟ್ಟಿತ್ತು. ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಹಾವೇರಿಯ ಮಲ್ಲಾಡದ ಆಸ್ಪತ್ರೆಗೆ ಮಹಿಳೆಯನ್ನು ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಜೂನ್ 26ರಂದು ರಾತ್ರಿ ಸಾವನ್ನಪ್ಪಿದ್ದಾರೆ. ಆದರೆ, ಡೆಂಘೀ ಜ್ವರದಿಂದಲೇ ಸಾವು ಸಂಭವಿಸಿದೆ ಎಂದು ವೈದ್ಯರು ಇನ್ನೂ ದೃಢಪಡಿಸಿಲ್ಲ.
ಈ ಸುದ್ದಿ ಓದಿದ್ದೀರಾ? ‘ಶಕ್ತಿ ಯೋಜನೆ’ ದುರುಪಯೋಗ; ಬಸ್ ನಿರ್ವಾಹಕರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ
ಗೌಸಿಯಾ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ. ಮಾಡಿದ ತಪ್ಪನ್ನು ಮುಚ್ಚಿ ಹಾಕಲು ₹50 ಸಾವಿರ ಹಣ ನೀಡಲು ವೈದ್ಯರು ಮುಂದಾಗಿದ್ದಾರೆ ಎಂದು ಗೌಸಿಯಾ ಸಂಬಂಧಿಕರು ಗಂಭೀರ ಆರೋಪ ಮಾಡಿದ್ದಾರೆ. ರಾತ್ರಿ ಎರಡು ಗಂಟೆವರೆಗೂ ಆಸ್ಪತ್ರೆಯ ಮುಂದೆ ಜನರು ಜಮಾಯಿಸಿದ್ದರು. ಆಸ್ಪತ್ರೆಯ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.