ಆರೋಗ್ಯದಲ್ಲಿ ಏರುಪೇರಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಉಪಪ್ರಧಾನಿ ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ (ಎಲ್‌ಕೆ ಅಡ್ವಾಣಿ) ಅವರು ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿಯಾಗಿದೆ.
96 ವರ್ಷದ ಅಡ್ವಾಣಿ ಅವರನ್ನು ಏಮ್ಸ್‌ನ ಹಳೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿತ್ತು. ಮೂತ್ರಶಾಸ್ತ್ರ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ವಿಶೇಷತೆಗಳ ವೈದ್ಯರ ತಂಡವು ಅಡ್ವಾಣಿಯ ಪರೀಕ್ಷೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
“ವೃದ್ಧಾಪ್ಯ ಸಂಬಂಧಿ ಸಮಸ್ಯೆಗಳ ಕಾರಣ ಅಡ್ವಾಣಿ ಅವರನ್ನು ದಾಖಲಿಸಲಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ” ಎಂದು ಏಮ್ಸ್ ಅಧಿಕಾರಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
ಅಡ್ವಾಣಿ ಅವರಿಗೆ ಈ ವರ್ಷದ ಆರಂಭದಲ್ಲಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಅಧಿಕಾರಾವಧಿಯಲ್ಲಿ ಅಡ್ವಾಣಿ ಅವರು ಭಾರತದ ಉಪ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು.
ಅಡ್ವಾಣಿ ಮತ್ತು ಜನಸಂಘದ ಇತರ ಹಲವು ಸದಸ್ಯರು 1980ರಲ್ಲಿ ಜನತಾ ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸ್ಥಾಪಿಸಿದರು.