ಹೆಚ್ಚುವರಿ ಡಿಸಿಎಂ ವಿಚಾರ ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ: ಡಿ ಕೆ ಶಿವಕುಮಾರ್

Date:

Advertisements

ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿ, “ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ” ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ. ಅದೇ ರೀತಿ ಅವರು ಎಲ್ಲಾದರೂ ಪರಿಹಾರವನ್ನು ಹುಡುಕಿಕೊಂಡು ಹೋಗಲಿ” ಎಂದು ತಿಳಿಸಿದರು.

Advertisements

ಮುಂದಿನ ವರ್ಷದಿಂದ ಇಂತಹ ತಪ್ಪು ಆಗದಂತೆ ಕ್ರಮ

ಕೆಂಪೇಗೌಡರ ಜಯಂತಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡದ ವಿಚಾರವಾಗಿ ರಾಜ್ಯ ಒಕ್ಕಲಿಗರ ಸಂಘ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಯಾರನ್ನೂ ಅಗೌರವಿಸುವ ಉದ್ದೇಶ ನಮಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರಾಗಿ ಎಸ್.ಎಂ ಕೃಷ್ಣ, ಸದಾನಂದ ಗೌಡರು, ದೇವೇಗೌಡರು, ಕುಮಾರಸ್ವಾಮಿ ಅವರು ಇದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ಶಿಷ್ಟಾಚಾರವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಮಾತ್ರ ಆಹ್ವಾನ ನೀಡಿದ್ದಾರೆ. ಕುಮಾರಸ್ವಾಮಿ ಮಂಡ್ಯಕ್ಕೆ ಹೋಗಿದ್ದು, ದೇವೇಗೌಡರು ಹಾಸನದ ಪ್ರತಿನಿಧಿಯಾಗಿದ್ದಾರೆ. ಈ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕಿತ್ತು. ಮುಂದಿನ ವರ್ಷ ಈ ರೀತಿಯ ತಪ್ಪುಗಳು ನಡೆಯದಂತೆ ಸರಿಪಡಿಸಲಾಗುವುದು” ಎಂದರು.

“ರಾಜ್ಯದೆಲ್ಲೆಡೆ ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ನೀಡುವ 25 ಸಾವಿರದ ಜತೆಗೆ ಬಿಬಿಎಂಪಿಯಿಂದ 1 ಲಕ್ಷ ಅನುದಾನ ನೀಡಲಾಗುವುದು. ಕೆಂಪೇಗೌಡರು ಎಲ್ಲರ ಆಸ್ತಿ. ಒಂದು ಜಾತಿ ಹಾಗೂ ಧರ್ಮಕ್ಕೆ ಸೇರಿದವರಲ್ಲ. ಇವರ ಬಗ್ಗೆ ಹೆಚ್ಚಿನ ಪ್ರಚಾರ ಮಾಡಲು ನಮ್ಮ ಸರ್ಕಾರ ಮುಂದಾಗಿದೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X