ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾದವರಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಜೂ.27) ನಾಡಪ್ರಭು ಕೆಂಪೇಗೌಡ ಪಾಪಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ನಾಡಿನ ಜನತೆ ಕೆಂಪೇಗೌಡರ ದಿನಾಚರಣೆಯನ್ನು ಆಚರಿಸಿ ಸಂಭ್ರಮಿಸುವುದಲ್ಲದೇ ಕೆಂಪೇಗೌಡರು ಸಮಾಜಮುಖಿಯಾಗಿ ಕೆಲಸ ಮಾಡಿದಂತೆ ಪ್ರತಿಯೊಬ್ಬರೂ ಸಮಾಜಮುಖಿಯಾಗಿ, ವಿಶ್ವಮಾನವರಾಗಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂಬ ಕಾರಣದಿಂದ ಕೆಂಪೇಗೌಡರ ಜಯಂತಿ ಆಚರಿಸಲಾಗುತ್ತಿದೆ” ಎಂದರು.

Advertisements

“ಕೆಂಪೇಗೌಡರು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಅವರು ಈ ನಾಡಿನ ದೊರೆಯಾಗಿ ಮಾದರಿ ಆಡಳಿತವನ್ನು ನೀಡಿದ್ದರು. ರೈತ ಸಮುದಾಯದಲ್ಲಿ ಜನಿಸಿದ್ದರೂ ಕೂಡ ಅವರ ಆಡಳಿತದ ಅವಧಿಯಲ್ಲಿ ಜಾತಿ, ಧರ್ಮ ಎಂದು ವಿಂಗಡನೆ ಮಾಡಲಿಲ್ಲ. ಎಲ್ಲ ಜನಾಂಗ, ಜಾತಿಯವರನ್ನು ಅಭಿವೃದ್ಧಿಗೊಳಿಸಲು ಪ್ರಯತ್ನಿಸಿದರು. ಅವರ ಆಡಳಿತ ಕಾಲದಲ್ಲಿ ಅವರು ಕೈಗೊಂಡ ಅಭಿವೃದ್ಧಿಯನ್ನು ನೋಡಿದರೆ ಅವರೊಬ್ಬ ಜಾತ್ಯಾತೀತ ವ್ಯಕ್ತಿಯಾಗಿದ್ದರು” ಎಂದು ಬಣ್ಣಿಸಿದರು.

“ಕೆಂಪೇಗೌಡರು ಬದುಕಿದ್ದ ಎಲ್ಲಾ ಭಾಗಗಳು ಅಭಿವೃದ್ಧಿಯಾಗಬೇಕೆಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರವನ್ನು ಸ್ವಾಮೀಜಿಯವರ ಸಲಹೆ ಮೇರೆಗೆ ಸ್ಥಾಪಿಸಲಾಯಿತು. ಬೆಂಗಳೂರು ವಿಶ್ವವಿಖ್ಯಾತವಾಗಿದ್ದು ಬ್ರಾಂಡ್ ಬೆಂಗಳೂರು ಸಾಧ್ಯವಾಗಿಸಲು ನಾವು ಹೊರಟಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ” ಎಂದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಚಂದ್ರಶೇಖರ್ ಸ್ವಾಮೀಜಿ , ಗುರುಗುಂಡ ಬ್ರಹ್ಮೇಶ್ವರ ಸ್ವಾಮಿಮಹಾಸಂಸ್ತಾನ ಮಠದ ನಂಜಾವಧೂತ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಶಿವರಾಜ್ ತಂಗಡಗಿ, ಕೆ.ಹೆಚ್ .ಮುನಿಯಪ್ಪ, ಕೃಷ್ಣಬೈರೇಗೌಡ, ಶಾಸಕ ರಿಜ್ವಾನ್ ಅರ್ಷದ್, ಮೇಲ್ಮನೆ ಸದಸ್ಯ ಸಲೀಂ ಅಹ್ಮದ್, ರಾಮೋಜಿ ಗೌಡ, ಪುಟ್ಟಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ವಿಶ್ವನಾಥ್, ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಮೊದಲಾದವರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X