ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಎಷ್ಟೇ ದೌರ್ಜನ್ಯ ಮಾಡಿರದೂ ಕೂಡಾ ಅವರು ತಲೆಬಾಗಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ಹೇಳಿದ್ದಾರೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದ ಒಂದು ದಿನದ ಬಳಿಕ ಮಾನ್ ಈ ಹೇಳಿಕೆಯನ್ನು ನೀಡಿದ್ದಾರೆ. ಪಂಜಾಬ್ ಸಿಎಂ ಕೇಜ್ರಿವಾಲ್ ಅವರ ಚಿತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು ಕೇಜ್ರಿವಾಲ್ ತಲೆಬಾಗಲ್ಲ ಎಂದಿದ್ದಾರೆ.
“ಈ ಚಿತ್ರವು ಸರ್ವಾಧಿಕಾರದ ವಿರುದ್ಧದ ಹೋರಾಟವಾಗಿದೆ. ನೀವು ಎಷ್ಟೇ ದೌರ್ಜನ್ಯವನ್ನು ಮಾಡಿದರೂ ಕೂಡಾ ಅರವಿಂದ್ ಕೇಜ್ರಿವಾಲ್ ಅವರು ತಲೆಬಾಗಲ್ಲ” ಎಂದು ತನ್ನ ಎಕ್ಸ್ ಪೋಸ್ಟ್‌ನಲ್ಲಿ ಭಗವಂತ್ ಮಾನ್ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಅಬಕಾರಿ ನೀತಿ ಪ್ರಕರಣ: ಮೂರು ದಿನ ಸಿಬಿಐ ಕಸ್ಟಡಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
“ಇಡಿ ನ್ಯಾಯಾಲಯದಿಂದ ಜಾಮೀನು ದೊರೆತ ಬಳಿಕ ಸಿಬಿಐ ಕೇಜ್ರಿವಾಲ್ ಅವರನ್ನು ಬಂಧನ ಮಾಡಿರುವುದು ಬಿಜೆಪಿಯ ಆಜ್ಞೆಯಂತೆ ಸಿಬಿಐ ನಡೆಯುತ್ತಿದೆ, ಸಿಬಿಐ ಅನ್ನು ದುರುಪಯೋಗ ಮಾಡಲಾಗುತ್ತಿದೆ ಎಂಬುವುದನ್ನು ಸ್ಪಷ್ಟಪಡಿಸುತ್ತದೆ” ಎಂದು ಅಭಿಪ್ರಾಯಿಸಿದರು.
“ನೀವು ಶಿಷ್ಟಾಚಾರ ಮತ್ತು ರಾಜಕೀಯವನ್ನು ಮರೆತುಬಿಡುವ ರೀತಿಯಿಂದಾಗಿ ನಿಮ್ಮ ಹೆಸರೂ ಕೂಡಾ ದಬ್ಬಾಳಿಕೆ ಮಾಡುವವರ ಪಟ್ಟಿಯಲ್ಲಿ ಬರೆಯಲ್ಪಡುತ್ತದೆ” ಎಂದು ಟೀಕಿಸಿದರು.
ಅಬಕಾರಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯವು ಜೂನ್ 20ರಂದು ಜಾಮೀನು ಮಂಜೂರು ಮಾಡಿದೆ. ಆದರೆ ಈ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.
ಇದನ್ನು ಓದಿದ್ದೀರಾ? ಕೇಜ್ರಿವಾಲ್ ಜಾಮೀನು ಆದೇಶ ತಡೆ: ಹೈಕೋರ್ಟ್ ಆದೇಶಕ್ಕೆ ಅಸಮ್ಮತಿ; ಸುಪ್ರೀಂ ಮೊರೆ ಹೋಗಲು ಎಎಪಿ ನಿರ್ಧಾರ
ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಸುಪ್ರೀಂ ಕೋರ್ಟ್ ಇದು ‘ಅಸಹಜ’ ಎಂದು ಹೇಳಿದೆ. ಹಾಗೆಯೇ ಈ ವಿಷಯದ ಕುರಿತು ಹೈಕೋರ್ಟ್‌ನ ಆದೇಶಕ್ಕಾಗಿ ಕಾಯಲು ಬಯಸುವುದಾಗಿ ಹೇಳಿದೆ.
ಮಂಗಳವಾರ ದೆಹಲಿ ಹೈಕೋರ್ಟ್ ತನ್ನ ಆದೇಶವನ್ನು ಪ್ರಕಟಿಸಿದ್ದು, ವಿಚಾರಣಾ ನ್ಯಾಯಾಲಯವು ಕೇಜ್ರಿವಾಲ್ ಅವರಿಗೆ ನೀಡಿದ ಜಾಮೀನು ಆದೇಶಕ್ಕೆ ತಡೆ ನೀಡಿದೆ. ಅದಾದ ಬಳಿಕ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಮತ್ತೆ ಎಎಪಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಬೆನ್ನಲ್ಲೇ ದೆಹಲಿ ಕೋರ್ಟ್ ಕೇಜ್ರಿವಾಲ್ ಅವರನ್ನು ಮೂರು ದಿನಗಳ ಸಿಬಿಐ ಕಸ್ಟಡಿಗೆ ಕಳುಹಿಸಿದೆ.
ये तस्वीर तानाशाही के ख़िलाफ़ संघर्ष की है अरविंद केजरीवाल झुकेगा नही जितना मर्ज़ी अत्याचार कर लो।
ED कोर्ट से जमानत के बाद CBI की गिरफ़्तारी BJP के इशारे पर CBI का खुला दुरपयोग है।
आप जिस तरह से आदाबे सियासत भूले
आप का नाम भी ज़ालिम में लिखा जाएगा। pic.twitter.com/o9fHVSj0mb— Bhagwant Mann (@BhagwantMann) June 27, 2024