ಮುಂದಿನ ಏಳು ದಿನ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

Advertisements

ಮುಂಗಾರು ಚುರುಕಾಗಿದ್ದು, ಕರಾವಳಿ, ಮಡಿಕೇರಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿ ನದಿಗಳೆಲ್ಲ ತುಂಬಿವೆ. ಮುಂದಿನ ಏಳು ದಿನ ರಾಜ್ಯದ ಹಲವೆಡೆ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು, ಜುಲೈ 1ರವರೆಗೆ ಬೆಂಗಳೂರಿನ ವಾತಾವರಣದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ಕರಾವಳಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆ, ಹವಾಮಾನ ಇಲಾಖೆ ‘ರೆಡ್ ಅಲರ್ಟ್‌’ ಘೋಷಿಸಿದೆ. ಜತೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಹಾಗೂ ಬೆಳಗಾವಿ, ಹಾವೇರಿ, ಧಾರವಾಡ, ಹಾಸನ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈಲು ಬೋಗಿಯ ಕಸದ ಬುಟ್ಟಿಯಲ್ಲಿ ನವಜಾತ ಗಂಡು ಮಗು ಪತ್ತೆ

ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ತುಂತುರು ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆ ಹಿನ್ನಲೆ, ನಗರದ ವಾತಾವರಣದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಸದ್ಯ ತಂಪಾದ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X