ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಜಿ ಎಸ್ ಸಂಗ್ರೇಶಿ ಅವರನ್ನು ರಾಜ್ಯ ಸರ್ಕಾರವು ನೇಮಕಗೊಳಿಸಿ ಆದೇಶ ಹೊರಡಿಸಿದೆ.
ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರು ಪ್ರಸ್ತುತ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ನೇಮಕಗೊಳಿಸಿರುವ ಸಂಬಂಧ ಜೂನ್ 27ರಂದು ಆದೇಶ ಹೊರಡಿಸಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಹೆಚ್.ಕೇಶವಪ್ರಸಾದ್, “ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿನಿಯಮ, 1995ರ ಪರಿಚ್ಛೇದ 3(2)(ಎ) ಮತ್ತು 4(1)ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಪ್ರಸ್ತುತ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿಯವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದೆ. ಅಧ್ಯಕ್ಷರಾಗಿ ಕಾರ್ಯಭಾರ ವಹಿಸಿಕೊಂಡ ದಿನಾಂಕದಿಂದ ಮುಂದಿನ ಮೂರು ವರ್ಷಗಳ ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಿಸಿ ಆದೇಶಿಸಿದೆ” ಎಂದು ತಿಳಿಸಿದ್ದಾರೆ.
