ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 13 ಮಂದಿ ಸಾವು

Date:

Advertisements

ಹಿಂಬದಿಯಿಂದ ಲಾರಿಗೆ ಟಿಟಿ ವಾಹನವೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್​ನಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ.

ಮೃತರು ಸವದತ್ತಿಗೆ ದೇವರ ದರ್ಶನಕ್ಕೆಂದು ತೆರಳಿದ್ದರು. ಮರಳಿ ಊರಿಗೆ ವಾಪಸ್‌ ಆಗುತ್ತಿದ್ದಾಗ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

IMG 20240628 WA0159

ಮೃತರೆಲ್ಲರೂ ಶಿವಮೊಗ್ಗ ಮೂಲದ ನಿವಾಸಿಗಳು ಎಂಬ ಮಾಹಿತಿ ಇದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ.

Advertisements

ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಮುದಾಯವಾರು ಡಿಸಿಎಂ ಬೇಡಿಕೆಯೂ, ಮುಖ್ಯಮಂತ್ರಿಗಳ ಮೌನವೂ

ಘಟನೆಯ ಮಾಹಿತಿ ಕಲೆಹಾಕಲು ಈ ದಿನ.ಕಾಮ್ ಬ್ಯಾಡಗಿ ಪೋಲಿಸರನ್ನು ಸಂಪರ್ಕಿಸಿದಾಗ, “ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದಾರೆ. ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.‌ ಒಟ್ಟು 16 ಮಂದಿ ಟಿಟಿ ವಾಹನದಲ್ಲಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ‌. ಮೃತಪಟ್ಟವರು ಭದ್ರಾವತಿ ಮೂಲದವರು ಅಂತ ತಿಳಿದು ಬಂದಿದೆ. ಮೃತಪಟ್ಟವರ ವಿವರಗಳನ್ನು ಕಲೆ ಹಾಕುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶು ಕುಮಾರ್ ರಿಯಾಕಡ, ಬ್ಯಾಡಗಿ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X