ಬೆಳಗಾವಿ | ಸೋಲಿನಿಂದ ಹಿಂಜರಿಕೆ ಬೇಡ, ನಾನು ಯಾರ ಆಸ್ತಿ ಕಬಳಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Date:

Advertisements

ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಆತ್ಮಾವಲೋಕನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದು, ಕಾರ್ಯಕರ್ತರಿಗೆ ಧೈರ್ಯ ತುಂಬಲು ಯತ್ನಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ ಲಕ್ಷ್ಮೀ ಹೆಬ್ಬಾಳ್ಕರ್, “ಸೋಲಿನಿಂದ ಯಾರು ಧೃತಿಗೆಡಬೇಕಿಲ್ಲ. ಹೋರಾಟ ಮತ್ತು ಸಂಘಟನೆಯ ಮೂಲಕ ನಮ್ಮ ಶಕ್ತಿಯನ್ನು ಮರಳಿ ಪಡೆದುಕೊಳ್ಳೋಣ. ಸೋಲಿನಿಂದ ಯಾರಿಗೂ ಹಿಂಜರಿಕೆ ಬೇಡ. ನಾವು ಯಾರಿಗೂ ಮೋಸ ಮಾಡಿಲ್ಲ. ಯಾರ ಆಸ್ತಿ ಕಬಳಿಸಿಲ್ಲ” ಎಂದಿದ್ದಾರೆ.

“ಕ್ಷೇತ್ರದಲ್ಲಿ ಎಲ್ಲರಿಗಾಗಿ ದುಡಿದಿದ್ದೇನೆ. ಎಲ್ಲ ಊರುಗಳಲ್ಲಿ ಅಭಿವೃದ್ಧಿ ಮಾಡಿದ್ದೇನೆ. ಕ್ಷೇತ್ರದ ಜನರನ್ನು ಹೃದಯದಿಂದ ಪ್ರೀತಿಸಿದ್ದೇನೆ. ಹಾಗಾಗಿ, ಇಂತಹ ಸೋಲಿನಿಂದ ಎದೆಗುಂದುವುದಿಲ್ಲ. ಪ್ರತಿ ದಿನ ಸಂಘಟನೆಯಲ್ಲಿ ತೊಡಗಿಕೊಳ್ಳೋಣ. ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸೋಣ. ಎಲ್ಲರನ್ನೂ ಜೋಡಿಸಿಕೊಂಡು ಹೋಗೋಣ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧರಾಗೋಣ” ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.

Advertisements

ಸಭೆಯಲ್ಲಿ ಕೆಪಿಸಿಸಿ ಸದಸ್ಯ ಸುರೇಶ್ ಇಟಗಿ, ನಾಗೇಗೌಡ ಮನ್ಸೂರ್, ಮನೋಹರ ಬಾಂಡಗೆ, ಪ್ರಕಾಶ್ ಪಾಟೀಲ್, ಬಸವರಾಜ ತಳವಾರ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಬಗ‌ರ್ ಹುಕುಂ ಸಾಗುವಳಿದಾರರಿಗೆ ವಸತಿ ಹಕ್ಕು ಮಾನ್ಯ ಮಾಡಲು ಆಗ್ರಹ

ಒನ್ ಟೈಮ್ ಸೆಟಲ್‌ಮೆಂಟ್ ಮೂಲಕ ಅರಣ್ಯ-ಬಗ‌ರ್ ಹುಕುಂ ಸಾಗುವಳಿದಾರರಿಗೆ ಭೂಮಿ-ವಸತಿ ಹಕ್ಕು...

ವಿಜಯಪುರ | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ? ಎಂಬುದರ ಕುರಿತು ಒಂದು ದಿನದ ಕಾರ್ಯಗಾರ

ವಿದ್ಯಾರ್ಥಿಗಳು ಇಂದಿನ ಆಧುನಿಕ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲೇಬೇಕಾಗಿದೆ. ಎಷ್ಟೇ ಕಷ್ಟ...

ಮಂಗಳೂರು | ಇಲಾಖಾಧಿಕಾರಿಗಳ ಹರಸಾಹಸ, ದಡ ಸೇರಿದ ಜೋಡಿ ಕಾಡಾನೆಗಳು

ಕೆಲವು ದಿನಗಳಿಂದ ನೆಕ್ಕಿಲಾಡಿ ಬಿಳಿಯೂರು ಭಾಗದಲ್ಲಿ ಕಾಣಿಸಿಕೊಂಡಿದ್ದ ಜೋಡಿ ಕಾಡಾನೆಗಳು ಭಾನುವಾರ...

ಕಲಬುರಗಿ | ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

ಕಲಬುರಗಿ ನಗರದ ಕೆಎಸ್‌ಆರ್‌ಟಿಸಿ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಯುವಕನೊಬ್ಬರನ್ನು ಬರ್ಬರವಾಗಿ ಕೊಲೆ...

Download Eedina App Android / iOS

X