ಹಾವೇರಿ | ಭೀಕರ ಅಪಘಾತ; ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಸಿಎಂ

Date:

Advertisements

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ಪರಿಹಾರ ನೀಡುತ್ತೇವೆ” ಎಂದು ಹೇಳಿದ್ದಾರೆ.

ಸಂತಾಪ ಸೂಚಿಸಿದ ದ್ರೌಪದಿ ಮುರ್ಮು

Advertisements

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಕರ್ನಾಟಕದ ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 13 ಜನರು ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಗಿದೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಮುರ್ಮು ಹೇಳಿದ್ದಾರೆ.

ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಠಿಣ ಕ್ರಮ ಕೈಗೊಳ್ಳಲಿ: ಹೆಚ್‌ಡಿಕೆ

“ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 13 ಜನ ದುರ್ಮರಣ ಹೊಂದಿರುವ ಸುದ್ದಿ ಕೇಳಿ ನನಗೆ ತೀವ್ರ ದುಃಖ ಉಂಟಾಗಿದೆ. ತಾಯಿ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಈ ದುರಂತ ಸಂಭವಿಸಿದೆ. ಮೃತಪಟ್ಟ ಎಲ್ಲರ ಆತ್ಮಕ್ಕೂ ಚಿರಶಾಂತಿ ಸಿಗಲಿ ಹಾಗೂ ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

“ರಾಜ್ಯ ಸರ್ಕಾರವು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಲಾರಿ ಚಾಲಕನ ದೋಷಪೂರಿತ ಪಾರ್ಕಿಂಗ್ ಅಪಘಾತಕ್ಕೆ ಕಾರಣ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ. ಚಾಲಕರು ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಈ ಬಗ್ಗೆ ತೋರುವ ನಿರ್ಲಕ್ಷ್ಯ ಜೀವಕ್ಕೆ ಎರವಾಗುತ್ತಿರುವುದು ನೋವಿನ ಸಂಗತಿ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಿ” ಎಂದಿದ್ದಾರೆ.

ಸಂತಾಪ ಸೂಚಿಸಿದ ಕೇಂದ್ರ ಸಚಿವ ಜೋಶಿ

“ಅಪಘಾತದಲ್ಲಿ 13 ಜನರು ಸಾವೀಗಿಡಾದ ಸುದ್ದಿ ತಿಳಿದು ಬಹಳ ದುಃಖವಾಗಿದೆ. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಕೂಡಲೇ ಮೃತರ ಕುಟುಂಬಕ್ಕೆ ಪರಿಹಾರ ಕೊಡಬೇಕು. ಗಾಯಾಳುಗಳ ಸೂಕ್ತ ಚಿಕಿತ್ಸೆಗೆ ಸರ್ಕಾರ ಮುಂದಾಗಬೇಕೆಂದು” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.

ಸಂಸದ ಬೊಮ್ಮಾಯಿ ಸಂತಾಪ

“ಜೂ.28ರ ಬೆಳಗಿನ ಜಾವ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

“ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ನೀಡಬೇಕು. ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸುತ್ತೇನೆ” ಎಂದಿದ್ದಾರೆ.

ಬಿವೈ ವಿಜಯೇಂದ್ರ ಸಂತಾಪ

ಹಾವೇರಿ ಜಿಲ್ಲೆಯ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 4 ವರ್ಷ ಹಾಗೂ 6 ವರ್ಷದ ಇಬ್ಬರು ಮಕ್ಕಳು ಸೇರಿ 13 ಜನ ಮೃತಪಟ್ಟ ಘಟನೆ ಮಮ್ಮಲ ಮರುಗುವಂತೆ ಮಾಡಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದವರಾಗಿದ್ದು ಮೃತರ ಕುಟುಂಬಕ್ಕೆ ಆಘಾತ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಅಗಲಿದ ಆತ್ಮಗಳಿಗೆ ಚಿರಶಾಂತಿ ದೊರೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.

ಜೂನ್ 28ರ ಬೆಳಿಗ್ಗೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ 17 ಜನ ಪ್ರಯಾಣ ಮಾಡುತ್ತಿದ್ದ ಟಿಟಿ ವಾಹನ ಹಿಂದಿನಿಂದ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳು ಜನ ಮಹಿಳೆಯರು, ಅಜ್ಜಿ, ಮಗು ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೆಹಲಿ | ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತ; ಸಂಚಾರ ಅಸ್ತವ್ಯಸ್ತ

ಮೃತರೆಲ್ಲರೂ ಬೆಳಗಾವಿ ಜಿಲ್ಲೆಯ ಚಿಂಚಲಿ ಮಾಯಮ್ಮ ದೇವಿ ದರ್ಶನ ಮುಗಿಸಿಕೊಂಡ ನಂತರ ಎಲ್ಲಮ್ಮನಗುಡ್ಡಕ್ಕೆ ತೆರಳಿ ದೇವರ ದರ್ಶನ ಮುಗಿಸಿಕೊಂಡು ಊರಿಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ಸುಭದ್ರಾ ಬಾಯಿ (65), ಪರಶುರಾಮ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (40), ಅರ್ಪಿತಾ (18), ಪುಣ್ಯ (50), ಮಂಜುಳಾ ಬಾಯಿ (62), ಆದರ್ಶ (23), ಮಾನಸ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ. ಇನ್ನೂ ಅರ್ಪಿತಾ, ಅರುಣಾ, ಅನ್ನಪೂರ್ಣ ಎನ್ನುವ ಮೂವರು ಗಾಯಾಳುಗಳ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X