ಸಂಸತ್ತಿನಲ್ಲಿ ನೀಟ್ ಅಕ್ರಮದ ಬಗ್ಗೆ ಪ್ರತಿಭಟಿಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯಸಭೆ ಸದಸ್ಯೆ ಫುಲೊ ದೇವಿ ನೇತಮ್ ಅವರು ತಲೆ ಸುತ್ತಿನಿಂದ ದಿಢೀರ್ ಕುಸಿದ ಬಿದ್ದ ಪರಿಣಾಮ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ನೀಟ್-ಯುಜಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಬಗ್ಗೆ ವಿಪಕ್ಷ ಸಂಸದರೊಂದಿಗೆ ಪ್ರತಿಭಟಿಸುತ್ತಿದ್ದ ವೇಳೆ ಫುಲೊ ದೇವಿ ಕುಸಿದು ಬಿದ್ದಿದ್ದಾರೆ. ನಂತರ ಸಂಸದರನ್ನು ಆರ್‌ಎಂಎಲ್ ಆಸ್ಪತ್ರೆಗೆ ಸೇರಿಸಲಾಯಿತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಮುದಾಯವಾರು ಡಿಸಿಎಂ ಬೇಡಿಕೆಯೂ, ಮುಖ್ಯಮಂತ್ರಿಗಳ ಮೌನವೂ
ಲೋಕಸಭೆಯಲ್ಲಿ ಇಂದು ಕಲಾಪ ಆರಂಭಗೊಂಡಾಗ ನೀಟ್ ಅಕ್ರಮದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ವಿಪಕ್ಷಗಳ ಸಂಸದರು ಸರ್ಕಾರವನ್ನು ಒತ್ತಾಯಿಸಿದರು. ವಿಪಕ್ಷಗಳ ಬೇಡಿಕೆಗೆ ಮಣಿದ ಸ್ಪೀಕರ್ ಓಂ ಬಿರ್ಲಾ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸೋಮವಾರ(ಜುಲೈ 1)ದಂದು ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.
ನೀಟ್ ಬಗೆಗಿನ ಚರ್ಚೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜುಲೈ 2 ರಂದು ಲೋಕಸಭೆಯಲ್ಲಿ ಹಾಗೂ ಜುಲೈ 3 ರಂದು ರಾಜ್ಯಸಭೆಯಲ್ಲಿ ಉತ್ತರ ನೀಡಲಿದ್ದಾರೆ.
