ಬಿಹಾರದ ಮಧುಬನಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಶುಕ್ರವಾರ ಕುಸಿದು ಬಿದ್ದಿದ್ದು ಕಳೆದ ಒಂಬತ್ತು ದಿನಗಳಲ್ಲಿ ಬಿಹಾರದಲ್ಲಿ ಸೇತುವೆ ಕುಸಿತಗೊಂಡ ಐದನೇ ಘಟನೆ ಇದಾಗಿದೆ.
ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್ ಠಾಣೆಯ ಮಾದೇಪುರ್ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. 75 ಮೀಟರ್ ಉದ್ದದ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಬಿದ್ದಿದೆ.
ಇದು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೇತುವೆಯಾಗಿದ್ದು 2021ರಿಂದಲೇ ಸೇತುವೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇದನ್ನು ಬಿಹಾರ ಸರ್ಕಾರದ ಗ್ರಾಮೀಣ ಕಾಮಗಾರಿ ಇಲಾಖೆಯಡಿಯಲ್ಲಿ ಈ ಸೇತುವೆ ನಿರ್ಮಿಸಲಾಗುತ್ತಿದೆ.
ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆ, 25 ಮೀಟರ್ ಉದ್ದದ ಆಧಾರ ಸ್ತಂಭವು ಕೆಳಗಿನ ನದಿಗೆ ಕುಸಿದು ಬಿದ್ದಿದೆ. ಸದ್ಯ ಸೇತುವೆ ಕುಸಿದ ಬಳಿಕ ಮಾಡಲಾದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿದ್ದೀರಾ? ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಬಿಹಾರ ಮಾತ್ರವಲ್ಲ ಮಹಾರಾಷ್ಟ್ರಕ್ಕೂ ‘ಲಿಂಕ್’
ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಕಳೆದ ಒಂಬತ್ತು ದಿನದಲ್ಲಿ ಬಿಹಾರದಲ್ಲಿ ಈ ರೀತಿಯ ಐದನೇ ಘಟನೆ ಇದಾಗಿದೆ” ಎಂದು ಹೇಳಿದ್ದಾರೆ.
ಇನ್ನು ಗುರುವಾರ ಕಿಶನ್‌ಗಂಜ್ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದಿದೆ. ಜೂನ್ 23ರಂದು ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸಣ್ಣ ಸೇತುವೆ ಕುಸಿದಿದೆ.
ಜೂನ್ 22ರಂದು, ಸಿವಾನ್‌ನಲ್ಲಿ ಗಂಡಕ್ ಕಾಲುವೆಯ ಮೇಲೆ ನಿರ್ಮಿಸಲಾದ ಸೇತುವೆ ಕುಸಿದಿದೆ. ಜೂನ್ 19ರಂದು, ಅರಾರಿಯಾದಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗವು ಕುಸಿದಿದೆ. ಕೋಟಿಗಟ್ಟಲೆ ಖರ್ಚು ಮಾಡಿ ಬಕ್ರಾ ನದಿಗೆ ನಿರ್ಮಿಸಿದ ಕಾಂಕ್ರೀಟ್ ಸೇತುವೆ ಬೇರ್ಪಟ್ಟಿದೆ.
𝟗 दिन के अंदर बिहार में यह 𝟓वाँ पुल गिरा है।
मधुबनी-सुपौल के बीच भूतही नदी पर वर्षों से निर्माणाधीन पुल गिरा। क्या आपको पता लगा? नहीं तो, क्यों? बूझो तो जाने? #Bihar #Bridge pic.twitter.com/IirnmOzRSo
— Tejashwi Yadav (@yadavtejashwi) June 28, 2024