ಸ್ಥಾನ ಕೇಳುವವರು ಪಕ್ಷ ಅಧಿಕಾರಕ್ಕೆ ತಂದು ತಮಗೆ ಬೇಕಾದ ಸ್ಥಾನ ಪಡೆಯಲಿ: ಮಾಜಿ ಸಂಸದ ಡಿ ಕೆ ಸುರೇಶ್

Date:

Advertisements

“ಯಾರು ಸ್ಥಾನ ಕೇಳುತ್ತಿದ್ದಾರೋ ಅವರ ನಾಯಕತ್ವದಲ್ಲೇ ಚುನಾವಣೆಯನ್ನು ಎದುರಿಸಲಿ, ಸರ್ಕಾರ ಅಧಿಕಾರಕ್ಕೆ ತಂದು ಅವರಿಗೆ ಯಾವ ಸ್ಥಾನ ಬೇಕೋ ಅದನ್ನು ಅಲಂಕರಿಸಲಿ. ಸಿಎಂ, ಪಿಎಂ, ಡಿಸಿಎಂ ಸೇರಿದಂತೆ ಏನೂ ಬೇಕಾದರೂ ಆಗಲಿ” ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಅವರು ಹೇಳಿದರು.

ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ನಮಗೆ ಡಿಸಿಎಂ, ಸಿಎಂ ಸ್ಥಾನ ಬೇಕು, ನಮ್ಮ ಜನಾಂಗಕ್ಕೆ ಅನ್ಯಾಯ ಆಗುತ್ತಿದೆ ಎನ್ನುವ ಭಾವನೆ ಇದ್ದರೆ. ಯಾರ ನಾಯಕತ್ವದಲ್ಲಿ ಬೇಕಾದರೂ ಚುನಾವಣೆ ಎದುರಿಸಲಿ ಜನ ತೀರ್ಪು ಕೊಡುತ್ತಾರೆ. ಈ ಹಿಂದೆ ರಾಮಕೃಷ್ಣ ಹೆಗಡೆ ಅವರು ಕಡಿಮೆ ಸ್ಥಾನ ಬಂದ ಕಾರಣಕ್ಕೆ ಮತ್ತೆ ಚುನಾವಣೆ ಎದುರಿಸಿದ್ದರು” ಎಂದರು.

“ಮುಖ್ಯಮಂತ್ರಿಗಳಿಗೆ ಅವಶ್ಯಕತೆ ಇದ್ದರೆ ಎಷ್ಟು ಜನ ಮಂತ್ರಿಗಳು, ಡಿಸಿಎಂಗಳನ್ನು ಬೇಕಾದರೂ ನೇಮಕ ಮಾಡಿಕೊಳ್ಳುವ ಪರಮಾಧಿಕಾರವಿದೆ. 33 ಜನರನ್ನೂ ಕೂಡ ಡಿಸಿಎಂಗಳು ಎಂದು ಘೋಷಣೆ ಮಾಡಬಹುದು. ಇದಕ್ಕೆ ಸಾಂವಿಧಾನಿಕ ಮಾನ್ಯತೆ ಇದೆ” ಎಂದರು.

Advertisements

“ಜನರು ಸರ್ಕಾರವನ್ನು ಆಯ್ಕೆ ಮಾಡಿರುವುದು ಒಳ್ಳೆಯ ಆಡಳಿತ ನೀಡಲು ಹಾಗೂ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಲು. ಆದರೆ ಅದನ್ನು ಬಿಟ್ಟು ಇಲ್ಲ ಸಲ್ಲದ ಮಾತುಗಳನ್ನು ಆಡಲಾಗುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಜಾತಿ, ಧರ್ಮದವರು ಮತ ಹಾಕಿದ್ದಾರೆ. ಜಾತ್ಯತೀತ ತತ್ವ ಎಂದು ಬಾಯಲ್ಲಿ ಹೇಳಿ ನಾವೇ ಜಾತಿವಾದವನ್ನು ಮುಂದಿಟ್ಟುಕೊಂಡು ಜನರನ್ನು ಎತ್ತಿಕಟ್ಟುವ ಕೆಲಸ ಮಾಡಿದರೆ ಎಷ್ಟು ಸರಿ” ಎಂದು ಡಿ ಕೆ ಸುರೇಶ್ ಪ್ರಶ್ನಿಸಿದರು.

“ನಮ್ಮ ಕಷ್ಟಗಳಿಗೆ ಸರ್ಕಾರ ನೆರವಾಗುತ್ತದೆ ಎಂದು ಜನರು ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಯಾರನ್ನೋ ಮಂತ್ರಿ ಮಾಡುತ್ತಾರೆ ಎಂದು ಪಕ್ಷವನ್ನು ಆಯ್ಕೆ ಮಾಡಿಲ್ಲ. 33 ಜನರನ್ನು ಡಿಸಿಎಂ ಮಾಡಿದರೆ ಎಲ್ಲ ಜಾತಿ, ಧರ್ಮ, ಜಿಲ್ಲೆಯ ಜನರನ್ನು ಸಂತೃಪ್ತಿ ಪಡಿಸಬಹುದು. ಇದೇನು ಸಾಂವಿಧಾನಿಕ ಹುದ್ದೆಯಲ್ಲವಲ್ಲ” ಎಂದು ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಶ್ರಮ ಹಾಕಿದವರೇ ಬೇರೆ ಸ್ಥಾನ ಕೇಳಿದವರೇ ಬೇರೆ ಎಂದಾಗ “ಅದರ ಬಗ್ಗೆ ನನಗೆ ಗೊತ್ತಿಲ್ಲ. 224 ಕ್ಷೇತ್ರದಲ್ಲಿ ಎಲ್ಲಾ ಕಾರ್ಯಕರ್ತರು, ನಾಯಕರು ಶ್ರಮ ಹಾಕಿದ್ದಾರೆ. 2 ವರ್ಷಗಳ ಕಾಲ ನಿರಂತರ ಹೋರಾಟ, ಹಗಲು, ರಾತ್ರಿ ಕೆಲಸ ಮಾಡಿ ಅಧಿಕಾರಕ್ಕೆ ತಂದಿದ್ದಾರೆ” ಎಂದು ಡಿ ಕೆ ಸುರೇಶ್ ಹೇಳಿದರು.

“ಶಾಸಕರು ಅಭಿವೃದ್ಧಿ ಕೆಲಸಗಳ ಕಡೆಗೆ ಗಮನ ನೀಡಬೇಕು, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಹಾಗೂ ಜನರ ಕಷ್ಟಗಳ ನಿವಾರಣೆಗೆ ಕೆಲಸ ಮಾಡಬೇಕು” ಎಂದು ಹೇಳಿದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮಾಜಿ ಸಂಸದ, “ಜನಕ್ಕೆ ಚುನಾವಣೆ ನಡೆಯುವ ವೇಳೆ ಆಶ್ವಾಸನೆ ನೀಡಿರುತ್ತೇವೆ. ಈ ಆಶ್ವಾಸನೆಗಳನ್ನು ಸಿದ್ದರಾಮಯ್ಯ ಅವರ ಹಾಗೂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಹೋರಾಟ ಮಾಡಿ ಚುನಾವಣೆಯನ್ನು ಎದುರಿಸಲಾಯಿತು. ಜನರು ನಮಗೆ ಅವಕಾಶ ನೀಡಿದ್ದಾರೆ” ಎಂದರು.

ಶಿವಕುಮಾರ್ ಅವರಿಗೆ ಸಿಎಂ ಸ್ಥಾನಕ್ಕಾಗಿ ಹೈಕಮಾಂಡಿಗೆ ಪತ್ರ ಬರೆಯುತ್ತೇನೆ ಎಂದು ಚಂದ್ರಶೇಖರನಾಥ ಸ್ವಾಮೀಜಿಗಳ ಹೇಳಿಕೆ ಬಗ್ಗೆ ಕೇಳಿದಾಗ “ಅದು ಸ್ವಾಮೀಜಿಗಳ ವೈಯಕ್ತಿಕ ಹೇಳಿಕೆ. ಅವರ ಸಮಾಜದ ಭಾವನೆ ತಿಳಿಸಿದ್ದಾರೆ. ಇದನ್ನು ಹೆಚ್ಚು ವ್ಯಾಖ್ಯಾನ ಮಾಡಲು ಇಚ್ಚಿಸುವುದಿಲ್ಲ” ಎಂದರು.

ಇದನ್ನು ಓದಿದ್ದೀರಾ? ಬಿಹಾರಕ್ಕೆ ‘ವಿಶೇಷ ವರ್ಗ’ ಸ್ಥಾನಮಾನಕ್ಕಾಗಿ ಜೆಡಿಯು ಬೇಡಿಕೆ

ರಾಜಣ್ಣ ಅವರ ಸರಣಿ ಹೇಳಿಕೆಗಳ ಬಗ್ಗೆ ಕೇಳಿದಾಗ “ನಾನು ರಾಜಣ್ಣ ಅವರ ಬಗ್ಗೆ ಮಾತನಾಡಲು ಹೋಗುವುದಿಲ್ಲ. ನನಗೆ ಆ ಮಾತುಗಳು ಪ್ರಸ್ತುತವಲ್ಲ. ಜನರ ಆಶೀರ್ವಾದಕ್ಕೆ ತಕ್ಕಂತೆ ನಾವು ನಡೆದುಕೊಳ್ಳಬೇಕು‌ ಜನರ ಆಶೋತ್ತರಗಳನ್ನು ಈಡೇರಿಸುವ ಕೆಲಸ ಮಾಡಬೇಕು ಎಂದು ಎಲ್ಲರಲ್ಲಿ ಮನವಿ ಮಾಡುತ್ತೇನೆ” ಎಂದು ಡಿ ಕೆ ಸುರೇಶ್ ಹೇಳಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X