ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನಿಯೋಗ : ಅನುದಾನಕ್ಕೆ ಮನವಿ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ.

ಈ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಸಚಿವ ಹೆಚ್ ಸಿ ಮಹದೇವಪ್ಪ ಜೊತೆಗಿದ್ದರು.

“ಕರ್ನಾಟಕದ ತೆರಿಗೆ ಪಾವತಿಗೆ ಅನುಗುಣವಾಗಿ ಅನುದಾನ ನೀಡಬೇಕೆಂಬ ಬೇಡಿಕೆಯನ್ನು ಕೂಲಂಕುಷವಾಗಿ ಪರಿಶೀಲಿಸುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

Advertisements

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದೆ. ಮೇಕೆದಾಟು ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ.

Modi siddu 2

ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳು

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7 ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3 ನೇ ಹಂತದ 44.65 ಕಿಮೀಗಳನ್ನು 15611 ಕೋಟಿಗಳ ವೆಚ್ಚದ ಡಿಪಿಆರ್ ಅನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವಂತೆ ಕೋರಿದ್ದಾರೆ.

73.04 ಕಿ.ಮೀ ಉದ್ದದ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್‌ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳು ಪತ್ರದಲ್ಲಿ ಕೋರಿದ್ದಾರೆ.

15 ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್ ಗಾಗಿ ಶಿಫಾರಸ್ಸು ಮಾಡಿರುವ 6000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ಬಿಬಿಎಂಪಿ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಗಾಗಿ 3200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30% ಅಂದರೆ 960 ಕೋಟಿ ರೂ.ಗಳನ್ನು ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯಾತಾ ಅಂತರ ನಿಧಿ ಒದಗಿಸಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 3000 ಕೋಟಿ ರೂ.ಗಳ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿರಿಸಿದ್ದು, ಕೇಂದ್ರ ಸರ್ಕಾರವು ತನ್ನ 2024-25 ರ ಬಜೆಟ್ ನಲ್ಲಿ ಅನುರೂಪದ ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು ಅನುಕೂಲವಾಗುವಂತೆ ಧನಸಹಾಯ ನೀಡಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವಂತೆ ಮುಖ್ಯಮಂತ್ರಿಗಳು ತಮ್ಮ ಮನವಿ ಪತ್ರದಲ್ಲಿ ಕೋರಿದ್ದಾರೆ.

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಹಗರಣ: ಜುಲೈ 12ರವರೆಗೆ ಅರವಿಂದ್ ಕೇಜ್ರಿವಾಲ್‌ಗೆ ನ್ಯಾಯಾಂಗ ಬಂಧನ

15 ನೇ ಹಣಕಾಸು ಆಯೋಗವು 2020-21 ರಲ್ಲಿ ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರಲಿಲ್ಲವಾದ್ದರಿಂದ ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X