ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (ಎಫ್‌ಎಎಸ್‌ಎಸ್‌ಎಐ) ನಡೆಸಿದ ಟೆಸ್ಟ್ನಲ್ಲಿ ಗೋಬಿ ಮಂಚೂರಿ, ಕಬಾಬ್, ಪಾನಿಪುರಿಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದ್ದವು. ಇದೀಗ, ಈ ಪಟ್ಟಿಯಲ್ಲಿ ಶವರ್ಮಾ ಕೂಡ ಸೇರಿಕೊಂಡಿದ್ದು, ಆರೋಗ್ಯದ ದೃಷ್ಟಿಯಿಂದ ಶವರ್ಮಾ ನಿಷೇಧಿಸಲು ಎಫ್‌ಎಎಸ್‌ಎಸ್‌ಎಐ ಚಿಂತನೆ ನಡೆಸಿದೆ.
ರಾಜ್ಯದ ನಾನಾಕಡೆಯಿಂದ 17 ಮಾದರಿಯ ಶವರ್ಮಾವನ್ನು ಆಹಾರ ಮತ್ತು ಗುಣಮಟ್ಟ ಇಲಾಖೆಯು ಪರೀಕ್ಷೆ ನಡೆಸಿದೆ. ಈ ಪೈಕಿ 8 ಶವರ್ಮಾ ಮಾದರಿಯಲ್ಲಿ ಬ್ಯಾಕ್ಟೀರಿಯಾ ಈಸ್ಟ್ ಪತ್ತೆಯಾಗಿದೆ.
ಸರಿಯಾದ ಕ್ರಮದಲ್ಲಿ ಆಹಾರ ತಯಾರಿ ಮಾಡದ ಕಾರಣ ಬ್ಯಾಕ್ಟಿರೀಯಾಗಳು ಪತ್ತೆಯಾಗಿವೆ. ಈಗಾಗಲೇ ಅಸುರಕ್ಷಿತ ಶವರ್ಮಾ ನೀಡಿರುವ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಶವರ್ಮಾ ಮಾರಾಟಗಾರರು ಕಡ್ಡಾಯವಾಗಿ ಎಫ್‌ಎಸ್‌ಎಸ್‌ಎಐ ನೋಂದಣಿ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ, ಮಾರಾಟಗಾರರು ನೋಂದಣಿ ಮಾಡಿಸದಿದ್ದರೇ, ಬ್ಯಾನ್ ಮಾಡುವ ಎಚ್ಚರಿಕೆ ನೀಡಲಾಗಿದೆ.
ಜತೆಗೆ, ಶವರ್ಮಾ ತಯಾರಿ ಮಾಡುವಾಗ ಮಾರಾಟಗಾರರು ಮುಖ್ಯವಾಗಿ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಹೇಳಿದೆ. ಶುಚಿತ್ವ ನಿರ್ವಹಣೆ, ನೋಂದಣಿ ಮಾಡಿಸದಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಗೋಬಿ, ಕಬಾಬ್ ಮತ್ತು ಪಾನಿಪುರಿಯಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆಯಾಗಿದೆ. ಕಬಾಬ್ ತಯಾರಿ ಮಾಡಲು ಬಳಕೆ ಮಾಡುವ ಕೃತಕ ಬಣ್ಣದಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದೆ. ಹೀಗಾಗಿ, ಬಣ್ಣ ಬಳಕೆ ಮಾಡಬಾರದು ಎಂದು ಕರ್ನಾಟಕ ಆರೋಗ್ಯ ಇಲಾಖೆ ಇತ್ತೀಚೆಗೆ ಸುತ್ತೋಲೆ ಹೊರಡಿಸಿತ್ತು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಪಹರಣ ಪ್ರಕರಣ; ಕನ್ನಡಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ ಎಫ್ಐಆರ್
ಅಲ್ಲದೆ, ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಗೂ ಬಣ್ಣ ಬಳಸದಂತೆ ಸೂಚಿಸಿದೆ. ನಂತರ ಈಗ ಶವರ್ಮಾದಲ್ಲೂ ಆರೋಗ್ಯಕ್ಕೆ ಹಾನಿಯುಂಟುಮಾಡುವ ಅಂಶ ಇರುವುದು ಬಹಿರಂಗವಾಗಿದೆ.