ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50) ಅನಾರೋಗ್ಯದಿಂದ ನಿಧನವಾಗಿದ್ದಾರೆ.ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಜನಾನುರಾಗಿ ಎಂಬ ಹೆಸರು ಪಡೆದಿದ್ದ ಅವರು, ತಮದೇ ಆದ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಭರತ ನಾಟ್ಯ ಕಲಾವಿದರಾಗಿದ್ದ ಹಂಸ ಮೊಯ್ಲಿ ಅವರು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?
