ಬೀದರ್‌ | ಮಳೆಗೆ ಮೈಲೂರ ಸರ್ಕಾರಿ ಶಾಲೆ ಗೋಡೆ ಕುಸಿತ; ಸಚಿವ ರಹೀಂ ಖಾನ್‌ ಭೇಟಿ

Date:

Advertisements

ಭಾರಿ ಮಳೆಯಿಂದ ಬೀದರ್ ನಗರದ ಮೈಲೂರು ಸರ್ಕಾರಿ ಶಾಲೆಯ ತರಗತಿ ಕೋಣೆಯ ಗೋಡೆ ಕುಸಿದಿದ್ದು, ಸ್ಥಳಕ್ಕೆ ಪೌರಾಡಳಿತ ಸಚಿವ ರಹೀಮ್ ಖಾನ್ ಭೇಟಿ ನೀಡಿ ಪರಿಶೀಲಿಸಿದರು.

ಶಾಲಾ ಕಟ್ಟಡದ ಫಿಟ್‌ನೆಸ್ ಕುರಿತು ತಕ್ಷಣವೇ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸ್ಥಳದಲ್ಲಿದ್ದ ಉಪವಿಭಾಗಾಧಿಕಾರಿ ಲವೀಶ ಓರ್ಡಿಯಾ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ‘ಎಲ್ಲ ಸರ್ಕಾರಿ ಶಾಲೆಗಳು ಅಗತ್ಯ ಅತ್ಯಾಧುನಿಕ ಮೂಲಸೌಕರ್ಯಗಳೊಂದಿಗೆ ಸುರಕ್ಷಿತವಾಗಿರಿಸುವುದಕ್ಕೆ ಸರ್ಕಾರ ಬದ್ಧವಾಗಿದೆ. ಇಲ್ಲಿಯ ಹಳೆಯ ಕಟ್ಟಡಗಳನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು, ಮೈಲೂರು ಶಾಲೆಯ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದುʼ ಎಂದು ತಿಳಿಸಿದರು.

Advertisements

‘ನಾನು ಈಗಾಗಲೇ ಹಲವು ಹೊಸ ಶಾಲಾ ಕಟ್ಟಡ, ಹಾಸ್ಟೆಲ್‌ಗಳನ್ನು ನಿರ್ಮಿಸಿರುವೆ, ಮಹಿಳಾ ಪದವಿ ಕಾಲೇಜಿಗೆ ಕಲ್ಯಾಣ ಕರ್ನಾಟಕ ಪ್ರದೇಶಾವೃದ್ಧಿ ಮಂಡಳಿಯಿಂದ 10 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಶೀಘ್ರದಲ್ಲೇ ಕೆಲಸ ಆರಂಭವಾಗಲಿದೆ. ಎಲ್ಲ ಶೈಕ್ಷಣಿಕ ಕೇಂದ್ರಗಳ ಬಗ್ಗೆ ಕಾಳಜಿವಹಿಸಲಾಗುತ್ತಿದೆʼ ಎಂದರು.

ಮೈಲೂರು ಬಡಾವಣೆಯಲ್ಲಿ ಶಿಕ್ಷಣ ಸೇರಿದಂತೆ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಹೊಸ ರಸ್ತೆ, ಚರಂಡಿ, ಬೀದಿ ದೀಪಗಳನ್ನು ಅಳವಡಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.‌

ಈ ಸುದ್ದಿ ಓದಿದ್ದೀರಾ? ಬೀದರ್‌ | ಮರಾಠಿ ಮಾಧ್ಯಮ ಶಾಲೆಗಳಲ್ಲಿ ಕನ್ನಡ ವಿಭಾಗ ತೆರೆಯಲು ಕರವೇ ಆಗ್ರಹ

ಈ ಸಂದರ್ಭದಲ್ಲಿ ಡಿಯುಡಿಸಿ ಯೋಜನಾ ನಿರ್ದೇಶಕ ಮೋತಿಲಾಲ್ ಲಮಾಣಿ, ನಗರಸಭೆ ಪೌರಾಯುಕ್ತ ಶಿವರಾಜ್ ರಾಠೋಡ್, ಗ್ರೇಡ್-2 ತಹಸೀಲ್ದಾರ್ ಜಿಯಾವುಲ್ಲಾ, ಬಿಇಒ ಅಖಿಲಾಂಡೇಶ್ವರಿ, ಕಾಂಗ್ರೆಸ್ ಮುಖಂಡ ಶೌಕತ್ ಅಲಿ, ಎಸ್‌ಡಿಎಂಸಿ ಅಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಸ್ಥಳೀಯ ನಿವಾಸಿಗಳು ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X