ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿರಾಜಪೇಟೆಯಲ್ಲಿ 15, ಪೊನ್ನಂಪೇಟೆ ತಾಲೂಕಿನಲ್ಲಿ 35 ಪ್ರಕಣಗಳು ಕಂಡುಬಂದಿವೆ. ಡೆಂಘೀ ತಡೆಗಟ್ಟಲು ಕ್ರಮವಹಿಸಿ ಎಂದು ತಾಲೂಕು ಆಡಳಿತಾಧಿಕಾರಿ ಜಿಂ ಪಂ ಉಪಕಾರ್ಯದರ್ಶಿ ಧನರಾಜ್ ಸೂಚಿಸಿದರು.
ವಿರಾಜಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.
“ನಿಂತನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಸೊಳ್ಳೆಗಳಿಂದ ಡೆಂಘೀ ಬರುತ್ತಿದ್ದು, ಸಾರ್ವಜನಿಕರು ಎಚ್ಚರವಹಿಸಿ ಸ್ಚಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಕೃಷಿ ಇಲಾಖೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹಲವು ಸೌಲಭ್ಯಗಳಿದ್ದು, ಈ ಕುರಿತು ಅಭಿವೃದ್ಧಿ ಸಾಧಿಸಬೇಕು” ಎಂದು ಕೃಷಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
“ಪಶುಪಾಲನಾ ಇಲಾಖೆಯಿಂದ ಈಗಾಗಲೇ ಹಸುಗಳಿಗೆ ಶೇ.93ರಷ್ಟು ಕಾಲು-ಬಾಯಿ ಜ್ವರದ ಲಸಿಕೆ ನೀಡಲಾಗಿದ್ದು, ಪ್ರಸ್ತುತ ಚರ್ಮಗಂಟು ರೋಗದ ಲಸಿಕೆ ನೀಡಲಾಗುತ್ತಿದೆ” ಎಂದು ವಿರಾಜಪೇಟೆ ಪಶುಪಾಲನಾ ಸಹಾಯಕ ನಿರ್ದೇಶಕ ಡಾ ನವೀನ್ ಮಾಹಿತಿ ನೀಡಿದರು.
ಈ ಸುದ್ದಿ ಓದಿದ್ದೀರಾ? ಕೊಡಗು | ಜು.1ರಿಂದ 30ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ
ಸಭೆಯಲ್ಲಿ ಹಲವು ಇಲಾಖೆಗಳ ಪ್ರಗತಿಗಳ ಕುರಿತು ಚರ್ಚಿಸಲಾಯಿತು. ಇಲಾಖೆಗಳ ಅಭಿವೃದ್ಧಿಗೆ ಶ್ರಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಿರಾಜಪೇಟೆ ತಾಲೂಕು ಪಂಚಾಯಿತಿ ಇಒ ಕೆ ಸಿ ಅಪ್ಪಣ್ಣ, ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿಗಳು ಇದ್ದರು.
